- ಸ್ಲೀಪರ್ ಕೋಚ್ ಬಸ್‌ಗಳಿಗೆ ಸುರಕ್ಷತಾ ದೃಷ್ಟಿಯಿಂದ ನಿಯಮಗಳ ಜಾರಿಗೊಳಿಸಲು ಸಲಹೆ- - -
ಪ್ರಪಂಚದಲ್ಲೇ ಸಿದ್ದರಾಮಯ್ಯನಂತಹ ಆರ್ಥಿಕ ತಜ್ಞನನ್ನು ನಾವು ನೋಡಿಯೇ ಇಲ್ಲ. ಅಮೆರಿಕಾದಂತಹ ದೇಶವೇ ಇಂದು ಆರ್ಥಿಕ ಸಂಕಷ್ಟದಲ್ಲಿದೆ. ಜಗತ್ತಿನ ದೊಡ್ಡಣ್ಣ ಅಂತಲೇ ಕರೆಯಲ್ಪಡುವ ಅಮೇರಿಕಾ ದೇಶದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರಲ್ಲಿ ಹೋಗಿ ಆರ್ಥಿಕ ತಜ್ಞರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಸಲಹೆ ನೀಡಲಿ ಎಂದು ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಗುರುವಾರ ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕರಾಗಿದ್ದ ದಿವಂಗತ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿಗೆ ಗೌರವ ಸಮರ್ಪಿಸಲು ಹಾಗೂ ದುಃಖತಪ್ತ ಶಾಮನೂರು ಕುಟುಂಬಕ್ಕೆ ಸಾಂತ್ವನ ಹೇಳಲು ಆಗಮಿಸಿದ್ದ ವೇಳೆ ನಗರದ ಬಾಪೂಜಿ ಎಂಬಿಎ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ಬಸ್ ದುರಂತ-ಅಮಾಯಕರ ಸಾವಿಗೆ ಕಳವಳ:
ಚಿತ್ರದುರ್ಗ ಜಿಲ್ಲೆ ಹಿರಿಯೂರ ಬಳಿ ಬಸ್‌ಗೆ ಬೆಂಕಿ ಹೊತ್ತಿಕೊಂಡು 5ಕ್ಕೂ ಹೆಚ್ಚು ಜನರು ಜೀವಂತ ದಹನ ಆಗಿರುವುದಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ಬೇಸರ ವ್ಯಕ್ತಪಡಿಸಿದರು. ಪದೇಪದೇ ಇಂತಹ ಅಪಘಾತ, ಅನಾಹುತಗಳ ಸಂಭವಿಸುತ್ತಿರುವುದು ತೀವ್ರ ಬೇಸರದ ಸಂಗತಿ. ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸಿದರು.ಸ್ಲೀಪರ್ ಕೋಚ್ ಬಸ್‌ಗಳಿಗೆ ಸುರಕ್ಷತಾ ದೃಷ್ಟಿಯಿಂದ ಒಂದು ನಿಯಮಗಳನ್ನು ಮಾಡಲಿ. ಈಗಾಗಲೇ ಹಲವಾರು ಕಡೆಗಳಲ್ಲಿ ಇಂತಹ ಸ್ಲೀಪರ್ ಕೋಚ್ ಬಸ್‌ಗಳಲ್ಲಿ ಬೆಂಕಿ ಹೊತ್ತಿಕೊಂಡು ತೊಂದರೆಯಾಗುತ್ತಿದೆ. ಇದಕ್ಕಾಗಿ ಸರ್ಕಾರ ಖಾಸಗಿ ಬಸ್ ಮಾಲೀಕರನ್ನು ಕರೆದು, ಒಂದಿಷ್ಟು ನಿಯಮಾವಳಿ ರೂಪಿಸಲಿ. ಇದಾದಲ್ಲಿ ಅಮಾಯಕ ಜೀವಗಳಾದರೂ ಮುಂದಿನ ದಿನಗಳಲ್ಲಿ ಉಳಿಯುತ್ತವೆ ಎಂದರು.
ಈಗ ಪ್ರಧಾನಿ ನರೇಂದ್ರ ಮೋದಿ ಪರಿಹಾರ ಘೋಷಣೆ ಮಾಡಿದ್ದಾರೆಂಬ ಮಾಹಿತಿ ಇದೆ. ಇಂತಹ ಘಟನೆಗಳು ಸಂಭವಿಸಿದಾಗ ಪರಿಹಾರ ಘೋಷಣೆಯಾಗುತ್ತವೆ. ಆದರೆ, ಇಂತಹ ದುರುಂತಗಳ ತಡೆಗೆ ಕೆಲ ಕಟ್ಟುನಿಟ್ಟಿನ ಕ್ರಮಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮ ಕೈಗೊಳ್ಳಲಿ ಎಂದು ಎಚ್.ಡಿ. ಕುಮಾರಸ್ವಾಮಿ ಕಿವಿಮಾತು ಹೇಳಿದರು.ಈ ಸಂದರ್ಭ ಮಾಜಿ ಶಾಸಕ ಸಾ.ರಾ. ಮಹೇಶ, ಹರಿಹರದ ಮಾಜಿ ಶಾಸಕ ಎಚ್.ಎಸ್. ಶಿವಶಂಕರ, ಜೆ.ಅಮಾನುಲ್ಲಾ ಖಾನ್, ಗಣೇಶ ಟಿ.ದಾಸಕರಿಯಪ್ಪ ಇತರರು ಇದ್ದರು.
- - --(ಫೋಟೋ ಬರಲಿವೆ):