ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ: ಕಿಶೋರ್ ಕುಮಾರ್

KannadaprabhaNewsNetwork |  
Published : Sep 25, 2024, 12:45 AM IST
ಕಿಶೋರ್24 | Kannada Prabha

ಸಾರಾಂಶ

ಈ ನೆಲದ ಕಾನೂನು ಎಲ್ಲರಿಗೂ ಒಂದೇ ಆಗಿದೆ. ಇತರ ಪಕ್ಷಗಳ ವಿಚಾರದಲ್ಲಿ ರಾಜೀನಾಮೆ ಕೇಳಲು ಬಹಳ ಆಸಕ್ತಿ ವಹಿಸುವ ಸಿದ್ದರಾಮಯ್ಯ ತನ್ನ ಸರದಿ ಬಂದಾಗ ರಾಜೀನಾಮೆ ನೀಡದೆ ವೃಥಾ ಕಾಲಹರಣ ಮಾಡುತ್ತಿರುವುದು ನ್ಯಾಯಾಂಗ ಮತ್ತು ಸಂವಿಧಾನಕ್ಕೆ ಎಸಗುವ ಅಪಚಾರವಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರ ಅನುಮತಿಯನ್ನು ಕರ್ನಾಟಕ ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಗ್ರಹಿಸಿದ್ದಾರೆ.ಈ ನೆಲದ ಕಾನೂನು ಎಲ್ಲರಿಗೂ ಒಂದೇ ಆಗಿದೆ. ಇತರ ಪಕ್ಷಗಳ ವಿಚಾರದಲ್ಲಿ ರಾಜೀನಾಮೆ ಕೇಳಲು ಬಹಳ ಆಸಕ್ತಿ ವಹಿಸುವ ಸಿದ್ದರಾಮಯ್ಯ ತನ್ನ ಸರದಿ ಬಂದಾಗ ರಾಜೀನಾಮೆ ನೀಡದೆ ವೃಥಾ ಕಾಲಹರಣ ಮಾಡುತ್ತಿರುವುದು ನ್ಯಾಯಾಂಗ ಮತ್ತು ಸಂವಿಧಾನಕ್ಕೆ ಎಸಗುವ ಅಪಚಾರವಾಗಿದೆ.ಅಧಿಕಾರದ ದಾಹದಿಂದ ಜನರ ಭಾವನೆಯೊಂದಿಗೆ ಚೆಲ್ಲಾಟವಾಡಿ, ರಾಜ್ಯವನ್ನು ದಿವಾಳಿಯ ಅಂಚಿಗೆ ನೂಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪಿಗೆ ಅನುಗುಣವಾಗಿ ಶೀಘ್ರ ರಾಜೀನಾಮೆಯನ್ನು ನೀಡಿ ಮುಂದಿನ ಪ್ರಕ್ರಿಯೆಗೆ ಸಹಕರಿಸಿ ಈ ನೆಲದ ಕಾನೂನನ್ನು ಗೌರವಿಸಬೇಕು ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನ್ಯಕೋಮಿನವನ ಜತೆ ಮದುವೆ: ಮೊಮ್ಮಗಳ ಶಿಶು ಕೊಂ*ದ ಅಜ್ಜಿ!
ಕಾಳಸಂತೆಯಲ್ಲಿ ಎಲ್ಪಿಜಿ ಸೇಲ್‌ ಮೇಲೆ ನಿಗಾ - ಅಧಿಕಾರಿಗಳಿಗೆ ಸಿಎಸ್‌ ಸೂಚನೆ