ಹುಬ್ಬಳ್ಳಿ:
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಿಂದುಳಿದ ವರ್ಗ ನಾಯಕ ಎನ್ನುವ ಕಾರಣದಿಂದ ಬಿಜೆಪಿ ಟಾರ್ಗೆಟ್ ಮಾಡಿದೆ. ಸಿದ್ದರಾಮಯ್ಯ ಜನರ ಮುಖ್ಯಮಂತ್ರಿ. ಅಂಥವರ ವಿರುದ್ಧ ಯಾರೋ ಖಾಸಗಿ ವ್ಯಕ್ತಿ ಕೊಟ್ಟ ದೂರಿನ ಅನ್ವಯ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ ಎಂದರೆ ಏನರ್ಥ? ಈ ಕಾರಣಕ್ಕಾಗಿಯೇ ನಾವು ರಾಜಭವನ ಚಲೋ ಹೋರಾಟ ಮಾಡಿದೇವು ಎಂದರು.
ದೂರು ಕೊಟ್ಟ ದಿನದಂದೇ ರಾಜ್ಯಪಾಲರು ನೋಟಿಸ್ ಕೊಡುತ್ತಾರೆ. ಕೆಲವೇ ದಿನಗಳಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಾರೆ. ಅದಕ್ಕಿಂತ ಮುಂಚೆಯೇ ನವೆಂಬರ್‌ನಲ್ಲಿ ಕುಮಾರಸ್ವಾಮಿ ವಿರುದ್ಧ ತನಿಖಾ ಸಂಸ್ಥೆಯೇ ದೂರು ಕೊಟ್ಟರೂ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಲ್ಲ. ಅದಕ್ಕಿಂತ ಮುಂಚೆಯೇ ಲೋಕಾಯುಕ್ತರು ನವೆಂಬರ್‌ನಲ್ಲಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ್ದರು. ಆದರೂ ಅನುಮತಿ ಸಿಗಲ್ಲ. ಮುರಗೇಶ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿ ವಿರುದ್ಧ ತನಿಖೆಗೂ ಅನುಮತಿ ಏಕೆ ಕೊಟ್ಟಿಲ್ಲ ಎಂದು ಪ್ರಶ್ನಿಸಿದರು.ಮುಡಾ ಸೈಟ್ ಕೊಡುವ ವಿಚಾರದಲ್ಲಿ ಸಿದ್ದರಾಮಯ್ಯ ಪಾತ್ರ ಏನಿದೆ? ಲಿಂಗಾ ಎನ್ನುವವವರು 1935ರಲ್ಲಿ ಭೂಮಿ ಖರೀದಿಸಿದ್ದರು. ಆಗ ಸಿದ್ದರಾಮಯ್ಯ ಹುಟ್ಟಿಯೇ ಇರಲಿಲ್ಲ. ಅವರಿಂದ ಸಿದ್ದರಾಮಯ್ಯ ಭಾವಮೈದನನಿಗೆ ಬಂದಿದೆ. ಅವರು ಸಿದ್ದರಾಮಯ್ಯ ಪತ್ನಿಗೆ ಕೊಟ್ಟಿದ್ದರು. ಆಗಿನ ಸರ್ಕಾರ ಸಿದ್ದರಾಮಯ್ಯ ಪತ್ನಿಗೆ ಕೊಟ್ಟಿದೆ. ಇವರೊಬ್ಬರಿಗೆ ಕೊಟ್ಟಿದ್ದಲ್ಲ. 125 ಜನರಿಗೆ ಸೈಟ್ ಕೊಡಲಾಗಿದೆ. ಆಗ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದರು ಎಂದರು.
ಸಿದ್ದರಾಮಯ್ಯ ಭಯ ಬೀಳುವ ಪ್ರಶ್ನೆಯೇ ಇಲ್ಲ. ಅವರು ಯಾವಾಗಲೂ ಹುಲಿಯೇ. ಟಗರು ಅದು. ಟಗರು ಯಾವ ರೀತಿ ಹೂಂಕರಿಸುತ್ತದೆಯೋ ಆ ರೀತಿ ಹೂಂಕರಿಸಿದರೆ ಮುಗೀತು ಎಂದರು.
ಹೈಕೋರ್ಟ್‌ನಲ್ಲಿ ವಾದ ನೋಡುತ್ತಿರುವ ಬಿಜೆಪಿಗೆ ಈ ಪ್ರಕರಣದಲ್ಲಿ ಹುರುಳಿಲ್ಲ ಎನ್ನುವುದು ಗೊತ್ತಾಗಿದೆ. ಈ ಕಾರಣದಿಂದ ಮುಡಾ ಹಗರಣವನ್ನು ಕಾಂಗ್ರೆಸ್‌ನವರೇ ಹೊರಹಾಕಿದ್ದಾರೆ ಎಂದು ನಮ್ಮ ಮೇಲೆ ಗೂಬೆ ಕೂಡಿಸುವ ಕೆಲಸ ಮಾಡುತ್ತಿದ್ದಾರಷ್ಟೇ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.ದರ್ಶನ ಬಳ್ಳಾರಿಗೆ ನನ್ನ ಪಾತ್ರವಿಲ್ಲ: ಜಮೀರ್