ಹುಬ್ಬಳ್ಳಿ:
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಇದರಿಂದಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ಗೆ ಭವಿಷ್ಯ ಇಲ್ಲ. ಸಚಿವ ಸತೀಶ ಜಾರಕಿಹೊಳಿ ಹಾಗೂ ಜಿ. ಪರಮೇಶ್ವರ ಅವರು ದಲಿತ ಕೋಟಾದಡಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟೆ ನಡೆಸಿದ್ದಾರೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸರ್ಕಾರ ಕೆಡವಲು ಹುನ್ನಾರ ನಡೆಸಿದ್ದಾರೆ. ಡಿ.ಕೆ. ಶಿವಕುಮಾರ ಅವರನ್ನು ಮುಖ್ಯಮಂತ್ರಿಯನ್ನಾಗಿಸಲು ಯತ್ನಿಸುತ್ತಿದ್ದಾರೆ. ಡಿಕೆಶಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟು, ತಾನು ಉಪ ಮುಖ್ಯಮಂತ್ರಿಯಾಗಬೇಕೆಂದು ವಿಜಯೇಂದ್ರ ಯತ್ನಿಸುತ್ತಿದ್ದು, ಇದಕ್ಕೆ ಬಿಜೆಪಿ ಹೈಕಮಾಂಡ್ ಅವಕಾಶ ಕೊಡುವುದಿಲ್ಲ ಎಂದರು.ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ಈ ಭಾಗದ ಶಾಸಕರು, ಸಚಿವರು ಆಸಕ್ತಿಯಿಂದ ಅಧಿವೇಶನದಲ್ಲಿ ಪಾಲ್ಗೊಳ್ಳಬೇಕು ಎಂದರು.