ಸಿದ್ದರಾಮಯ್ಯನವರ ಆಡಳಿತಕ್ಕೂ ಅನುಭವಕ್ಕೂ ಬಹಳ ವ್ಯತ್ಯಾಸವಿದೆ-ಬೊಮ್ಮಾಯಿ

KannadaprabhaNewsNetwork |  
Published : Apr 06, 2024, 12:46 AM IST
ಪೋಟೋ ಇಧೆ. | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಅನುಭವಕ್ಕೂ, ಅವರ ಆಡಳಿತಕ್ಕೂ ಬಹಳ ವ್ಯತ್ಯಾಸವಿದೆ. ಈ ಹತ್ತು ತಿಂಗಳಿನಲ್ಲಿ ಸಿದ್ದರಾಮಯ್ಯನವರ ಕೆಟ್ಟ ಆಡಳಿತ ಹೇಗಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಹಾನಗಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಅನುಭವಕ್ಕೂ, ಅವರ ಆಡಳಿತಕ್ಕೂ ಬಹಳ ವ್ಯತ್ಯಾಸವಿದೆ. ಈ ಹತ್ತು ತಿಂಗಳಿನಲ್ಲಿ ಸಿದ್ದರಾಮಯ್ಯನವರ ಕೆಟ್ಟ ಆಡಳಿತ ಹೇಗಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬಿಜೆಪಿ ಕಾರ್ಯಕರ್ತರೊಡನೆ ಬಹಿರಂಗ ಪ್ರಚಾರ ಸಭೆ ನಡೆಸಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಒಂದು ಸರ್ಕಾರವಿದೆ ಅಷ್ಟೇ. ಸಿದ್ದರಾಮಣ್ಣನ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಇಲಾಖೆಯಲ್ಲಿಯೂ ಒಂದು ಸಣ್ಣ ಕೆಲಸವೂ ಕೂಡ ಆಗಿಲ್ಲ. ಗ್ರಾಮೀಣ ಅಭಿವೃದ್ಧಿಯಲ್ಲಿ ಕೆಲಸ ಆಗಿಲ್ಲ. ಜನರ ಕೆಲಸಗಳನ್ನು ಈ ಕಾಂಗ್ರೆಸ್ ಸರ್ಕಾರ ಮಾಡುತ್ತಿಲ್ಲ. ಯಾವುದೇ ಇಲಾಖೆಯಲ್ಲಿ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿದರು. ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಮೀಸಲಿಟ್ಟಿದ್ದ ರು. ೧೧೩೦೦ ಕೋಟಿ ಹಣವನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದಾರೆ. ಎಸ್‌ಸಿ, ಎಸ್‌ಟಿ ಜನಾಂಗಗಳಿಗೆ ಸಾಲಸೌಲಭ್ಯ ಸಿಗುತ್ತಿಲ್ಲ, ಗಂಗಾ ಕಲ್ಯಾಣ ಬೋರ್ ಸಿಗುತ್ತಿಲ್ಲ. ಇನ್ನು ರೈತರ ಬಗ್ಗೆಯಂತೂ ಈ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಕಾಳಜಿಯೂ ಇಲ್ಲ. ೧೦ ತಿಂಗಳಾದರೂ ರೈತರು ಒಂದು ಕಾಳನ್ನು ಕೂಡ ಬೆಳೆದಿಲ್ಲ. ಹಿಂದೆ ಬಿಜೆಪಿ ಸರ್ಕಾರದಲ್ಲಿ ನಾನು ಸಿಎಂ ಆಗಿದ್ದಾಗ, ಒಂದೇ ತಿಂಗಳಿನಲ್ಲಿ ರೈತರಿಗೆ ಬೆಳೆ ಪರಿಹಾರ ಕೊಟ್ಟಿದ್ದೆವು. ೧೭ ಲಕ್ಷ ರೈತರಿಗೆ ಪರಿಹಾರ ಕೊಟ್ಟೆವು. ಆದರೆ, ರೈತರ ಕೆಲಸ ಮಾಡಲು ಈ ಕಾಂಗ್ರೆಸ್ ಸರ್ಕಾರಕ್ಕೆ ಮನಸ್ಸಿಲ್ಲ. ಎಲ್ಲಾ ಜನಗಿರೂ ಸರಿಯಾದ ಗ್ಯಾರೆಂಟಿ ಮುಟ್ಟಿಲ್ಲ. ಗೃಹಲಕ್ಷ್ಮೀ ಯೋಜನೆಯ ಹಣ ಪ್ರಗತಿಯಲ್ಲಿದೆ ಎಂದು ಬರುತ್ತಲೇ ಇದೆ. ರಾಜ್ಯಕ್ಕೆ ಅಕ್ಕಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದಿಂದ ಕೊಟ್ಟಿದ್ದಾರೆ ಎಂದರು.ಮಾಜಿ ಸಚಿವ ಮನೋಹರ್ ತಹಸೀಲ್ದಾರ್, ಮಾಜಿ ಶಾಸಕ ಶಿವರಾಜ ಸಜ್ಜನರ, ಪದ್ಮನಾಭ ಕುಂದಾಪುರ, ಮಾಲತೇಶ ಸೊಪ್ಪಿನ ಇತರರು ಇದ್ದರು.

PREV

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ