ಸಿದ್ಧರಾಮೇಶ್ವರರಿಂದ ಸಮಾಜಮುಖಿ ಕಾರ್ಯ

KannadaprabhaNewsNetwork |  
Published : Jan 28, 2026, 02:45 AM IST
27ಕೆಪಿಎಲ್21 ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ | Kannada Prabha

ಸಾರಾಂಶ

ಸಮಾಜದ ಸುಧಾರಣೆಯ ಪ್ರತಿಫಲವಾಗಿ ವಚನ ಸಾಹಿತ್ಯ ಹುಟ್ಟಿಕೊಂಡು ಅನೇಕ ಶರಣರು ತಮ್ಮ ವಚನಗಳ ಮೂಲಕ ಸಮಾಜಕ್ಕೆ ಬೆಳಕನ್ನು ನೀಡಿದ್ದಾರೆ

ಕೊಪ್ಪಳ: ಸಮಾಜ ಸುಧಾರಣೆ ಜತೆಗೆ ಸಮಾಜಮುಖಿ ಕಾರ್ಯ ಮಾಡುವುದರ ಮೂಲಕ ಕಾಯಕ ಯೋಗಿ ಎನಿಸಿಕೊಂಡವರು ಶಿವಯೋಗಿ ಸಿದ್ಧರಾಮೇಶ್ವರರು ಎಂದು ಗಜೇಂದ್ರಗಡದ ಎಸ್.ಎಸ್. ಭೂಮರೆಡ್ಡಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಅರವಿಂದ ಎಸ್.ವಡ್ಡರ್ ಹೇಳಿದರು.

ಅವರು ಮಂಗಳವಾರ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಜಿಪಂ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಕೊಪ್ಪಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಶ್ರೀಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.

ಸಮಾಜದ ಸುಧಾರಣೆಯ ಪ್ರತಿಫಲವಾಗಿ ವಚನ ಸಾಹಿತ್ಯ ಹುಟ್ಟಿಕೊಂಡು ಅನೇಕ ಶರಣರು ತಮ್ಮ ವಚನಗಳ ಮೂಲಕ ಸಮಾಜಕ್ಕೆ ಬೆಳಕನ್ನು ನೀಡಿದ್ದಾರೆ. ಅಂತಹ ಮಹನೀಯರುಗಳಲ್ಲಿ ಬಸವಣ್ಣನವರ ಅನುಭವ ಮಂಟಪದಲ್ಲಿ ವಿಶಿಷ್ಟ ವಚನಕಾರರಾಗಿ ರೂಪುಗೊಂಡವರು ಮಹಾನ್ ಶರಣ ಶಿವಯೋಗಿ ಸಿದ್ಧರಾಮೇಶ್ವರರು ಎಂದರು.

ಶಿವಯೋಗಿ ಸಿದ್ಧರಾಮೇಶ್ವರರು ಪ್ರಸಿದ್ದ ಸಮಾಜ ಸೇವಕರಾಗಿದ್ದರು.ಅವರು ತಮ್ಮ ಕುಲಕಸುಬನ್ನು ನಿರ್ವಹಿಸುವ ಮೂಲಕ ಕೆರೆಕಟ್ಟೆ ನಿರ್ಮಿಸಿದ್ದರು. ಮಾಡುವ ಕೆಲಸಗಳಲ್ಲಿ ಕೀಳರಿಮೆ ಬಿಟ್ಟು ಸ್ವಾಭಿಮಾನಿಯಾಗಿರಬೇಕು ಎಂಬುದನ್ನು ಅವರು ತಿಳಿಸಿ ಕೊಟ್ಟಿದ್ದಾರೆ. ಪ್ರಸ್ತುತ ದಿನಮಾನಗಳಲ್ಲಿ ಶಿಕ್ಷಣಕ್ಕೆ ಅತಿ ಹೆಚ್ಚಿನ ಮಹತ್ವವಿದೆ. ಹಾಗಾಗಿ ಎಲ್ಲರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯ ಉಜ್ವಲವಾಗಿ ರೂಪಿಸಬೇಕು. ಶಿವಯೋಗಿ ಸಿದ್ಧರಾಮೇಶ್ವರ ಹಾಗೂ ಇತರೆ ಮಹನೀಯರನ್ನು ಆದರ್ಶವಾಗಿಟ್ಟುಕೊಂಡು ಶಿಕ್ಷಣವಂತರಾಗಿ, ನಮ್ಮ ಸಮುದಾಯದ ಅಬಿವೃದ್ಧಿಗೆ ಶ್ರಮಿಸಬೇಕು. ಸಮಾಜದ ಪ್ರಮುಖ ವ್ಯಕ್ತಿಗಳಾಗಿ ಉತ್ತಮ ಕೊಡುಗೆ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಬಾಗಲಕೋಟೆ ಮತ್ತು ಚಿತ್ರದುರ್ಗ ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು ಮಾತನಾಡಿ, ಕಾಯಕ ಎಂದರೆ ದೇವರು ಅದನ್ನ ಸ್ಮರಿಸಿಕೂಂಡು ಬಂದಿರುವುದೆ ಭೊವಿ ಸಮಾಜ. ಮನೆ,ಮಠ, ಮಂದಿರ, ಮಹಲ್‌ ಕಟ್ಟುವ ಭೋವಿ ಸಮಾಜವು ಎಲ್ಲರ ಮನಸ್ಸನ್ನು ಕಟ್ಟಿದೆ. ಶ್ರೀಶಿವಯೋಗಿ ಸಿದ್ದರಾಮೇಶ್ವರರು 64 ವಿದ್ಯೆಗಳನ್ನು ಕಲಿತು ಕರಗತ ಮಾಡಿಕೊಂಡವರು. ಶಿಕ್ಷಣವು ಸರ್ವ ಸಮಸ್ಯೆಗಳಿಗೆ ಅಸ್ತ್ರವಾಗಿದ್ದು, ಪ್ರತಿಯೊಬ್ಬರೂ ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದು ಅತ್ಯವಶ್ಯವಾಗಿದೆ ಎಂದರು.

ಭೋವಿ ಸಮಾಜದ ಕೊಪ್ಪಳ ಜಿಲ್ಲಾಧ್ಯಕ್ಷ ಸುಂಕಪ್ಪ ಮಾಲಗಿತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೊಪ್ಪಳ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯ ನಿರ್ದೇಶಕ ಕರ್ಣಕುಮಾರ್, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಪುಷ್ಪಲತಾ, ಭೋವಿ ಸಮಾಜದ ಮುಖಂಡ ಮಾಸ್ತೆಪ್ಪ ಕಟ್ಟಿಮನಿ, ರಾಮಣ್ಣ ಎಚ್.ಅಳವಂಡಿ, ರಾಮಣ್ಣ ಪೂಜಾರ, ರಮೇಶ ಬಸಾಪಟ್ಟಣ, ರಾಮಣ್ಣ ಅಳವಂಡಿ, ಲಕ್ಷ್ಮಣ ಪೂಜಾರ, ಎಕಪ್ಪ ರ‍್ಯಾವಣಕಿ, ಪರಶುರಾಮ ಹಾಗೂ ಹಲವು ಮುಖಂಡರು ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮೆರವಣಿಗೆ: ಜಯಂತಿ ಕಾರ್ಯಕ್ರಮದ ಪ್ರಯುಕ್ತ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಭಾವಚಿತ್ರದ ಮೆರವಣಿಗೆಯು ಶ್ರೀಗವಿಸಿದ್ದೇಶ್ವರ ಮಠದಿಂದ ಪ್ರಾರಂಭಗೊಂಡು ಗಡಿಯಾರ ಕಂಬ, ಜವಾಹರ ರಸ್ತೆ ಮೂಲಕ ಅಶೋಕ ಸರ್ಕಲ್ ಬಳಿಯ ಸಾಹಿತ್ಯ ಭವನದವರೆಗೆ ಅದ್ದೂರಿಯಾಗಿ ನಡೆಯಿತು. ಈ ಮೆರವಣಿಗೆಯಲ್ಲಿ ಕುಂಭ ಹೊತ್ತು ಮಹಿಳೆಯರು, ಭೋವಿ ಸಮಾಜದವರು ಸೇರಿದಂತೆ ಹಲವಾರು ಜನರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಪಾನಿಂದ ಡಿಕೆ ಬಂದ ಬಳಿಕ ಸಾಹುಕಾರ್‌ ಟೀಂಗೆ ಸಂಕಷ್ಟ?
ಮೇಕೆದಾಟು ಯೋಜನೆ ಪರಿಸರ ಪರಿಣಾಮಗಳ ಅಧ್ಯಯನಕ್ಕೆ ಸಮ್ಮತಿ