ಕಾರವಾರ: ಶಿವಯೋಗಿ ಸಿದ್ದರಾಮೇಶ್ವರಂಥ ಮಹಾನ್ ವ್ಯಕ್ತಿಗಳ ಆದರ್ಶ, ತತ್ವಗಳು, ಸಾಧನೆಗಳನ್ನು ಯುವಪೀಳಿಗೆಯು ತಿಳಿದುಕೊಳ್ಳುವುದು ಅಗತ್ಯವಾಗಿದ್ದು, ಅವುಗಳನ್ನು ಪಾಲನೆ ಮಾಡುವುದರ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ತಿಳಿಸಿದರು.ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ನಡೆದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಶಿವಯೋಗಿ ಸಿದ್ದರಾಮೇಶ್ವರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಶಿಕ್ಷಕಿ ವನಿತಾ ಶೆಟ್ ವಿಶೇಷ ಉಪನ್ಯಾಸ ನೀಡಿ, 12ನೇ ಶತಮಾನದ ವ್ಯಕ್ತಿಯನ್ನು ಇಂದಿಗೂ ಸ್ಮರಿಸಿಕೊಳ್ಳಲು ಅವರ ಹಾಕಿಕೊಟ್ಟ ಆದರ್ಶ, ತತ್ವ ಮಾರ್ಗಗಳು, ಸಾಧನೆಗಳು ಕಾರಣವಾಗಿದ್ದು, ಇವು ಪ್ರತಿಯೊಬ್ಬರಿಗೂ ದಾರಿದೀಪವಾಗಿದೆ. ಶಿವನನ್ನೇ ಧರೆಗೆ ಇಳಿಸಿದ ಮಹಾನ್ ವ್ಯಕ್ತಿ ಶಿವಯೋಗಿ ಸಿದ್ದರಾಮ ಎಂದರು.
ವೈದಿಕ ಧರ್ಮದ ಮೌಢ್ಯತೆ, ಮೇಲುಕೀಳು, ವರ್ಣಧರ್ಮ ಶ್ರೇಣೀಕರಣ, ಸಂಪ್ರದಾಯಗಳಿಂದ ದೂರ ಉಳಿದು ಎಲ್ಲರೂ ಸಮಾನರು ಎಂಬ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಚಿಂತನೆಯನ್ನು ಆ ಕಾಲದಲ್ಲೇ ಹುಟ್ಟುಹಾಕಿದವರು. ಕೆರೆ ಕಟ್ಟೆಗಳನ್ನು, ದೇವಾಲಯಗಳು, ಅನ್ನದಾಸೋಹ ಕಟ್ಟಡಗಳನ್ನು ಕಟ್ಟಿದರು. ಹಾಗೆಯೇ ಸಾಮೂಹಿಕ ವಿವಾಹಗಳನ್ನು ಮಾಡಿಸಿದರು. ಅವರು ದೇವರ ಬಗ್ಗೆ ಅಪಾರ ಭಕ್ತಿಯುಳ್ಳ ಶಿವಭಕ್ತರಾಗಿ, ಕರ್ಮಯೋಗಿಯಾಗಿ ಅಕ್ಷರ ಜ್ಞಾನದಿಂದ ವಚನಗಳನ್ನು ರಚಿಸುವ ಮೂಲಕ ಜ್ಞಾನಯೋಗಿಗಳಾಗಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ಎಂ. ನಾಯ್ಕ, ಅಧಿಕಾರಿಗಳು, ಸಿಬ್ಬಂದಿ, ಶಿವಯೋಗಿ ಸಿದ್ದರಾಮೇಶ್ವರ ಸಮುದಾಯದ ಅಧ್ಯಕ್ಷ ಭರಮಪ್ಪ ಕಟ್ಟಿಮನಿ, ಪದವಿಪೂರ್ವ ಕಾಲೇಜಿನ ಉಪನಿರ್ದೇಶಕ, ಸೆಂಟ್ ಜೋಸೆಫ್, ಪದವಿಪೂರ್ವ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತಿತರರು ಇದ್ದರು. ಸಮಾನತೆಗೆ ಶ್ರಮಿಸಿದ ಸಿದ್ದರಾಮೇಶ್ವರರು
ಮೆರವಣಿಗೆ: ಇದಕ್ಕೂ ಮುನ್ನ ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಸಿದ್ದರಾಮೇಶ್ವರರ ಭಾವಚಿತ್ರ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಶಾಸಕ ಶಿವರಾಮ ಹೆಬ್ಬಾರ ಅವರು ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಪೂಜೆ ಸಲ್ಲಿಸಿದರು.