ಕೊಳ್ಳೇಗಾಲ: ತಾಲೂಕಿನ ಮುಳ್ಳೂರು ಗ್ರಾಮದ ಕಾವೇರಿ ಮೀನುಗಾರರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎಸ್.ಸಿದ್ದಶೆಟ್ಟಿ, ಉಪಾಧ್ಯಕ್ಷರಾಗಿ ಎಂ.ಕೃಷ್ಣ ಅವರು ಅವಿರೋಧವಾಗಿ ಆಯ್ಕೆಯಾದರು. ಗ್ರಾಮದ ಸಂಘದ ಕಚೇರಿಯಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಸಿದ್ದಶೆಟ್ಟಿ, ಕೃಷ್ಣ ಮಾತ್ರ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ನಾಗೇಶ್ ಘೋಷಣೆ ಮಾಡಿದರು. ಬಳಿಕ ಅಧ್ಯಕ್ಷ ಎಸ್.ಸಿದ್ದಶೆಟ್ಟಿ ಮಾತನಾಡಿ, ಮೀನುಗಾರರ ಸಹಕಾರ ಸಂಘಕ್ಕೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದ ಎಲ್ಲರಿಗೂ ಧನ್ಯವಾದ ತಿಳಿಸಿದರಲ್ಲದೆ, ನಮ್ಮ ಸಂಘದ ಸದಸ್ಯರಿಗೆ ಸರ್ಕಾರದಿಂದ ಬರುವ ಎಲ್ಲಾ ಸವಲತ್ತುಗಳನ್ನು ಕೊಡಿಸಿ, ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಶ್ರಮಿಸುತ್ತೇನೆ, ಪಕ್ಷಬೇಧ ಮರೆತು, ಸಂಘದ ಅಭ್ಯೂದಯಕ್ಕೆ ಸ್ಪಂದಿಸುವೆ ಎಂದರು.