ಟಿಎನ್ನೆಸ್‌ಗೆ ಸಿದ್ದೇಗೌಡರ ಸ್ಮರಣಾರ್ಥ ಮಾನಸ ಪ್ರಶಸ್ತಿ

KannadaprabhaNewsNetwork |  
Published : Jan 02, 2025, 12:30 AM IST
ಡಾ.ದತ್ತೇಶ್ ಕುಮಾರ್ | Kannada Prabha

ಸಾರಾಂಶ

ಮಾನಸ ಶಿಕ್ಷಣ ಸಂಸ್ಥೆ ವತಿಯಿಂದ ಜ.3ರಿಂದ 5ರವರೆಗೆ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಬಾರಿ ಸಿದ್ದೇಗೌಡರ ಸ್ಮರಣಾರ್ಥ ನೀಡುವ ಮಾನಸ ಪ್ರಶಸ್ತಿಯನ್ನು ಖ್ಯಾತ ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಮ್ ಅವರಿಗೆ ನೀಡಿ ಅಭಿನಂದಿಸಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಡಾ.ದತ್ತೇಶ್ ಕುಮಾರ್ ತಿ‍ಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ

ಮಾನಸ ಶಿಕ್ಷಣ ಸಂಸ್ಥೆ ವತಿಯಿಂದ ಜ.3ರಿಂದ 5ರವರೆಗೆ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಬಾರಿ ಸಿದ್ದೇಗೌಡರ ಸ್ಮರಣಾರ್ಥ ನೀಡುವ ಮಾನಸ ಪ್ರಶಸ್ತಿಯನ್ನು ಖ್ಯಾತ ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಮ್ ಅವರಿಗೆ ನೀಡಿ ಅಭಿನಂದಿಸಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಡಾ.ದತ್ತೇಶ್ ಕುಮಾರ್ ತಿ‍ಳಿಸಿದ್ದಾರೆ. ಜ.3ರಂದು ಬೆಳಗ್ಗೆ 10ಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಧೆ ವಿಶ್ರಾಂತ ಅಧ್ಯಕ್ಷ ಪದ್ಮಶ್ರೀ ಎ.ಎಸ್. ಕಿರಣ್‌ಕುಮಾರ್‌ ಸಮಾರಂಭ ಉದ್ಘಾಟಿಸಲಿದ್ದಾರೆ. ಶ್ರೀ ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಹಿರಿಯ ನಿರ್ದೇಶಕ ಪಿ.ಶೇಷಾದ್ರಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕ ಎ.ಆರ್‌. ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಶಿಲ್ಪಾನಾಗ್, ಮೈಸೂರು ವಿವಿಯ ಪ್ರಾಚ್ಯವಿದ್ಯಾ ಸಂಶೋಧನಾಲಯದ ವಿಶ್ರಾಂತ ನಿರ್ದೇಶಕ ಪ್ರೊ.ಎಸ್. ಶಿವರಾಜಪ್ಪ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 1 ಕ್ಕೆಮಾನಸ ಸಾಂಸ್ಕೃತಿಕ ವೈಭವ ನಡೆಯಲಿದೆ. 3 ಕ್ಕೆ ನಿಸರ್ಗ ವಿದ್ಯಾನಿಕೇತನ ಶಾಲಾ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದೆ.

ಈ ಬಾರಿ ಸಾಧಕ 428 ವಿದ್ಯಾರ್ಥಿಗಳಿಗೆ 3 ದಿನಗಳ ಕಾಲ ಜರುಗುವ ಕಾರ್ಯಕ್ರಮದಲ್ಲಿ ಪುರಸ್ಕರಿಸಲಾಗುವುದು ಡಿಡಿಪಿಐ ರಾಮಚಂದ್ರರಾಜೇ ಅರಸ್ ಅವರು ಪ್ರತಿಭಾ ಪುರಸ್ಕರಿಸಲಿದ್ದಾರೆ, ನಗರಸಭಾಧ್ಯಕ್ಷೆ ಸಿ.ಎನ್.ರೇಖಾ ರಮೇಶ್, ಉಪಾಧ್ಯಕ್ಷ ಎ.ಪಿ.ಶಂಕರ್, ಸದಸ್ಯೆ ಸಿರೀಶ ಸತೀಶ್, ಬಿಇಒ ಎಂ.ಮಂಜುಳಾ, ಮಾಜಿ ಶಾಸಕ ಎಸ್.ಬಾಲರಾಜ್ ಪಾಲ್ಗೊಳ್ಳುವರು, ಸಂಜೆ 5 ಗಂಟೆಗೆ ನೂರಾರು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಲರವ ಜರುಗಲಿದೆ. ಗುರುವಂದನಾ ಕಾರ್ಯಕ್ರಮ:

ಜ.4ರಂದು ಬೆಳಗ್ಗೆ 9 ಗಂಟೆಗೆ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಬೆಳಗು, 10.30ಕ್ಕೆ ಗುರುವಂದನಾ ಕಾರ್ಯಕ್ರಮ ಜರುಗಲಿದ್ದು, ವಾಟಾಳು ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕುಂದೂರು ಮಠದ ಶ್ರೀ ಶರತ್‌ಚಂದ್ರ ಸ್ವಾಮೀಜಿ, ಜಿಪಂ ಸಿಇಒ ಮೋನಾರೋತ್, ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು, ಕೊಳ್ಳೇಗಾಲ ಉಪವಿಭಾಗಾಧಿಕಾರಿ ಬಿ.ಆರ್.ಮಹೇಶ್, ಡಿವೈಎಸ್ಪಿ ಎಂ.ಧರ್ಮೇಂದ್ರ, ನಗರಸಭಾ ಪೌರಾಯುಕ್ತ ಎ.ರಮೇಶ್, ಮಾಜಿ ಸಚಿವ ಎನ್.ಮಹೇಶ್ ಪಾಲ್ಗೊಳ್ಳುವರು. ಮಧ್ಯಾಹ್ನ ಮಾನಸ ಸಾಂಸ್ಕೃತಿಕ ವೈಭವ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಕವಿಗೋಷ್ಠಿಯನ್ನು ಖ್ಯಾತ ಸಾಹಿತಿ ಕೃಷ್ಣಕುಮಾರ್ ಉದ್ಘಾಟಿಸಲಿದ್ದು, ಸಾಹಿತಿಗಳಾದ ಮಹಾದೇವ ಶಂಕನಪುರ, ಜಯಪ್ಪ ಹೊನ್ನಾಳಿ, ಸರಸ್ವತಿ ಹೊನ್ನಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಆಕಾಶವಾಣಿ ಸಹಾಯಕ ನಿರ್ದೇಶಕ ಅಬ್ದುಲ್‌ ರಶೀದ್‌ ಅದ್ಯಕ್ಷತೆ ವಹಿಸಲಿದ್ದಾರೆ. ಸಂಜೆ 5ಕ್ಕೆ ಮಾನಸ ಸಾಂಸ್ಕೃತಿಕ ವೈಭವ, ಸಂಜೆ 7.30ಕ್ಕೆ ಮಿಮಿಕ್ರಿ ಗೋಪಿ, ಕಲರ್ಸ್ ಕನ್ನಡ ಗಿಚ್ಚಿ ಗಿಲಿಗಿಲಿ ಮತ್ತು ಜೀ ಕನ್ನಡ ಕಾಮಿಡಿ ಕಿಲಾಡಿಗಳು ತಂಡದವರಿಂದ ನಗೆಹಬ್ಬ ನಡೆಯಲಿದೆ.

ಪ್ರತಿಭಾ ಪುರಸ್ಕಾರ:

ಜ.5ರಂದು 10.30ಕ್ಕೆ ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಜರುಗಲಿದ್ದು, ಸಾಲೂರು ಬೃಹನ್ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ವಿಶ್ವಒಕ್ಕಲಿಗರ ಮಹಾಸಂಸ್ದಾನ ಮಠದ ಶ್ರಿ ನಿಶ್ಚಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಈ ವೇಳೆ ಮೈಸೂರು ವಿವಿ ಕುಲಪತಿ ಪ್ರೊ. ಎನ್‌.ಕೆ.ಲೋಕನಾಥ್‌ ಸಾಧಕರಿಗೆ ಸನ್ಮಾನ ಮಾಡಲಿದ್ದು, ಚಾ.ನಗರ ವಿವಿ ಕುಲಪತಿ ಎಂ.ಆರ್.ಗಂಗಾಧರ್ ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ. ಹನೂರು ಶಾಸಕ ಎಂ.ಆರ್.ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 3 ಕ್ಕೆ ಮಾನಸೋತ್ಸವದ ಸಮಾರೋಪ ಸಮಾರಂಭ ನಡೆಯಲಿದ್ದು ಜೇತವನದ ಬೌದ್ಧ ಬಿಕ್ಕು ಶ್ರೀ ಮನೋರಖಿತ ಬಂತೇಜಿ ಸಾನ್ನಿಧ್ಯ ವಹಿಸಲಿದ್ದು, ಮೈಸೂರು ವಿವಿಯ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಸಮಾರೋಪ ಭಾಷಣ ಮಾಡಲಿದ್ದಾರೆ. ಎಸ್ಪಿ ಡಾ.ಬಿ.ಟಿ.ಕವಿತಾ, ಡಿಡಿಪಿಯು ಸಿ.ಮಂಜುನಾಥ ಪ್ರಸನ್ನ, ಕನ್ನಡಪ್ರಭ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಅಂಶಿ ಪ್ರಸನ್ನ ಕುಮಾರ್, ನಟ ರಿಷಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ ಅಧ್ಯಕ್ಷತೆ ವಹಿಸುವರು. ಸಂಜೆ 6ಕ್ಕೆ ಮಾನಸ ಸಾಂಸ್ಕೃತಿಕ ವೈಭವ, ಸಂಜೆ 7.30ಕ್ಕೆ ಮಂಗಳೂರಿನ ಜರ್ನಿ ಥೇಟರ್ ಗ್ರೂಪ್‌ ವತಿಯಂದ ಗೀತಗಾಯನ ನಡೆಯಲಿದೆ. ಸಾಧಕರಿಗೆ ಸನ್ಮಾನ:

ಖ್ಯಾತ ಜಾನಪದ ಕಲಾವಿದ ಮಳವಳ್ಳಿ ಮಹದೇವಸ್ವಾಮಿ ಕಾರ್ಯಕ್ರಮದಲ್ಲಿ ಹಾಡುಗಾರಿಕೆ ಮೂಲಕ ರಂಜಿಸಲಿದ್ದಾರೆ. ಸಂಜೆ 7.30ಕ್ಕೆ ರಾತ್ರಿ ಜರ್ನಿ ಥೇಟರ್ ಸಂಸ್ಥೆಯ ಮಂಗಳೂರು ರವಿರಿಂದ ಗೀತ ಗಾಯನ ಜರುಗಲಿದೆ. ಚಾ.ನಗರ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಪುಟ್ಟಿರಮ್ಮ, ಡಾ.ಎಚ್. ಸುಂದರರಾಜ್, ಡಾ.ಕೇಶವಮೂರ್ತಿ, ಪ್ರೇಮಲತಾ ಕೃಷ್ಣಸ್ವಾಮಿ, ಅಬ್ದುಲ್ ರಶೀದ್, ಮಲ್ಲೇಶಪ್ಪ, ದೇವರಾಜು ಕಪ್ಪಸೋಗೆ, ಎಂ. ಮಂಜುಳಾ, ಎಂ ಶಿವಣ್ಣ ಅವರನ್ನು ಸನ್ಮಾನಿಸಲಾಗುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ