ಕನ್ನಡಪ್ರಭ ವಾರ್ತೆ ಮಹದೇವಪುರ
ಜಾತ್ರಾ ಮಹೋತ್ಸವ ಪ್ರಯುಕ್ತ ವೇಮಗಲ್ ತಾಲೂಕು ಕುರುಬರಹಳ್ಳಿ ಬೀರೇಶ್ವರ ಕಲಾತಂಡ ವೀರಗಾರರ ತಲೆ ಮೇಲೆ ತೆಂಗಿನಕಾಯಿ ಒಡೆದು ದೇವರಿಗೆ ಅರ್ಪಿಸುವ ಪವಾಡ ಕಾರ್ಯ ನಡೆಸಿಕೊಟ್ಟರು, ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಬೆಂಗಳೂರಿನ ಕಲ್ಕೆರೆ, ಹಲಸೂರು,ದೇವನಹಳ್ಳಿ,ಕೆ.ಚನ್ನಸಂದ್ರ,ಶಿವಕೋಟೆ,ಶ್ರೀನಗರ ಸೇರಿದಂತೆ ರಾಜ್ಯದ ವಿವಿಧ ಪ್ರದೇಶಗಳಿಂದ ಕುಲಬಾಂಧವರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದರು.
ಉತ್ಸವದಲ್ಲಿ ವೀರಗಾಸೆ, ಗೊರವನ ಕುಣಿತ, ಕಾಲಾಟಕಾರರು, ಡೊಳ್ಳು ಕುಣಿತ, ಪೂಜಾ ಕುಣಿತ, ಗೊಂಬೆ ಕುಣಿತ ಸೇರಿದಂತೆ ಜನಪದ ನೃತ್ಯಗಳು ಭಕ್ತರು ಗಮನ ಸೆಳೆಯಿತು.ಇದೇ ವೇಳೆ ಮಾತನಾಡಿದ ದೇವಾಲಯದ ಪ್ರಧಾನ ಅರ್ಚಕ ಶ್ರೀನಿವಾಸ್, ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ, ಮಳೆಯಿಲ್ಲದೆ ರೈತರು ಸಂಕಷ್ಟ ಸಿಲುಕಿದ್ದಾರೆ,ಕುಡಿಯುವ ನೀರಿಗೂ ಅಭಾವವಿದ್ದು, ರಾಜ್ಯದಲ್ಲಿ ಉತ್ತಮ ಮಳೆಯಾಗುವಂತೆ ದೇವರಲ್ಲಿ ಪ್ರಾರ್ಥಿಸಿ ಶ್ರದ್ಧಾಭಕ್ತಿಯಿಂದ ಒಂದು ತಿಂಗಳಿಂದ ಪೂಜಾ ಪುನಾಸ್ಕಾರ ಹಾಗೂ ಧಾರ್ಮಿಕ ಕಾರ್ಯಗಳು ನಡೆಸಿಕೊಂಡು ಬಂದಿದ್ದು, ಇಂದು ಭಾನುವಾರ ಸಿದ್ದೇಶ್ವರ ದೇವರ ಹೊಳೆ ಪೂಜೆ ಉತ್ಸವ ನಡೆಯಿತು ಎಂದರು.