ಸಿದ್ಧಾಂಥ ಶಿಖಾಮಣಿ ಮನುಕುಲ ಉದ್ಧರಿಸುವ ಗ್ರಂಥ: ಕಾಶಿ ಜಗದ್ಗುರು

KannadaprabhaNewsNetwork | Published : Dec 22, 2023 1:30 AM

ಸಾರಾಂಶ

ಬೀದರ್‌ನ ರಾಮ ಸಮರ್ಥ ಕಲ್ಯಾಣ ಮಂಟಪದಲ್ಲಿ ನಡೆದ ಧರ್ಮ ಜಾಗೃತಿ ಸಮಾರಂಭದಲ್ಲಿ ಡಾ. ಚಂದ್ರಶೇಖರ ಶಿವಾಚಾರ್ಯರು ಹೇಳಿಕೆ.

ಕನ್ನಡಪ್ರಭ ವಾರ್ತೆ ಬೀದರ್

ಸಿದ್ಧಾಂಥ ಶಿಖಾಮಣಿ ಮನುಕುಲ ಉದ್ಧರಿಸುವ ಶ್ರೇಷ್ಠ ಗ್ರಂಥವಾಗಿದೆ ಎಂದು ಕಾಶಿಯ 1008 ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ನುಡಿದರು.

ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ ಅವರಿಂದ ಇಲ್ಲಿಯ ರಾಮ ಸಮರ್ಥ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಜಗದ್ಗುರು ರೇಣುಕಾಚಾರ್ಯರು ಅಗಸ್ತ್ಯ ಮುನಿಗೆ ಬೋಧಿಸಿದ 1,400 ಶ್ಲೋಕಗಳನ್ನು ಗ್ರಂಥ ಒಳಗೊಂಡಿದೆ ಎಂದು ತಿಳಿಸಿದರು.

ಪರಿಪೂರ್ಣ ವ್ಯಕ್ತಿತ್ವ ರೂಪಿಸಿಕೊಳ್ಳಲು ಹಾಗೂ ಮುಕ್ತಿ ಮಾರ್ಗ ಅರಿಯಲು ಎಲ್ಲರೂ ಸಿದ್ಧಾಂಥ ಶಿಖಾಮಣಿಯನ್ನು ಓದಬೇಕು. ಶಿವಯ್ಯ ಸ್ವಾಮಿ ಅವರು ತಮ್ಮ ಮಕ್ಕಳ ಕಿರುಗುಣಿ ಹಾಗೂ ಶಾಲು ಕಾರ್ಯಕ್ರಮವನ್ನು ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಿಸಿ, ಇತರರಿಗೆ ಮಾದರಿಯಾಗಿದ್ದಾರೆ. ಸಿದ್ಧಾಂಥ ಶಿಖಾಮಣಿ ಗ್ರಂಥ ಹಾಗೂ ಬಿಲ್ವಪತ್ರಿ ಸಸಿಗಳನ್ನು ಉಚಿತವಾಗಿ ವಿತರಿಸಿರುವ ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದರು.

ಕರ್ನಾಟಕ ಪಶು ವೈದ್ಯಕೀಯ ವಿವಿಯ ಕುಲಪತಿ ಪ್ರೊ. ಕೆ.ಸಿ ವೀರಣ್ಣ ಸಪ್ತಮ ಮುದ್ರಣದ ಸಿದ್ಧಾಂಥ ಶಿಖಾಮಣಿ ಗ್ರಂಥ ಬಿಡುಗಡೆ ಮಾಡಿ ಮಾತನಾಡಿ, ಸಿದ್ಧಾಂಥ ಶಿಖಾಮಣಿ ಗ್ರಂಥ ಬಿಡುಗಡೆ ಮಾಡಿದ್ದು ನನ್ನ ಸೌಭಾಗ್ಯ. ಗ್ರಂಥ ದಾಸೋಹಗೈದ ಶಿವಯ್ಯ ಸ್ವಾಮಿಯವರ ಕಾರ್ಯ ಅನುಕರಣೀಯ ಎಂದು ಹೇಳಿದರು.

ಬಿಎಸ್‌ಎಸ್‌ಕೆ ಅಧ್ಯಕ್ಷ ಸುಭಾಷ ಕಲ್ಲೂರ ಸಮಾರಂಭ ಉದ್ಘಾಟಿಸಿದರು. ಡಾ. ರಾಜಶೇಖರ ಶಿವಾಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. 1008 ಸಿದ್ಧಾಂಥ ಶಿಖಾಮಣಿ ಗ್ರಂಥ ಹಾಗೂ 1008 ಬಿಲ್ವಪತ್ರಿ ಸಸಿಗಳನ್ನು ವಿತರಿಸಲಾಯಿತು. ಜೈ ಭಾರತ ಮಾತಾ ರಾಷ್ಟ್ರೀಯ ಸೇವಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಹವಾ ಮಲ್ಲಿನಾಥ ಮಹಾರಾಜ, ಹಿರೇನಾಗಾಂವ್‌ನ ಶಾಂತಲಿಂಗ ಸ್ವಾಮೀಜಿ, ಹಲಬರ್ಗಾ-ಶಿವಣಿಯ ಹಾವಗಿಲಿಂಗೇಶ್ವರ ಶಿವಾಚಾರ್ಯ, ಪಂಡಿತಾರಾಧ್ಯ ಶಿವಾಚಾರ್ಯ, ಗಂಗಾಧರ ಶಿವಾಚಾರ್ಯ, ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯ, ರಾಚೋಟೇಶ್ವರ ಶಿವಾಚಾರ್ಯ, ಶಿವಶಂಕರ ಶಿವಾಚಾರ್ಯ ಹಾಗೂ ಸದಲಾಪುರ ಸ್ವಾಮೀಜಿ ನೇತೃತ್ವ ವಹಿಸಿದ್ದರು.

ಜಿಪಂ ಸಿಇಒ ಶಿಲ್ಪಾ ಎಂ, ಸಿಂದಗಿ ತಹಸೀಲ್ದಾರ್‌ ಡಾ. ಪ್ರದೀಪ ಹಿರೇಮಠ, ಕೆಪಿಸಿಸಿ ವಕ್ತಾರ ಮಹಾಂತೇಶ ಹಟ್ಟಿ, ರಾಜ್ಯ ಅಪೆಕ್ಸ್‌ ಬ್ಯಾಂಕ್‌ ನಿರ್ದೇಶಕ ಉಮಾಕಾಂತ ನಾಗಮಾರಪಳ್ಳಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಎನ್‌. ನಂಜುಂಡೇಶ, ಶೀಲಾ ಭಗವಂತ ಖೂಬಾ, ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಾಗರ ಖಂಡ್ರೆ, ಕೆಆರ್‌ಇ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ವಿಶ್ವ ಹಿಂದೂ ಪರಿಷತ್‌ ರಾಜ್ಯ ಕಾರ್ಯದರ್ಶಿ ರಾಮಕೃಷ್ಣ ಸಾಳೆ, ಬಿಜೆಪಿಯ ಕಲಬುರಗಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಈಶ್ವರಸಿಂಗ ಠಾಕೂರ್‌, ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ, ಕಲಬುರಗಿ-ಬೀದರ್‌ ಯಾದಗಿರಿ ಹಾಲು ಒಕ್ಕೂಟದ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ, ಬಿಡಿಎ ಮಾಜಿ ಅಧ್ಯಕ್ಷ ಬಾಬು ವಾಲಿ, ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಸಿದ್ರಾಮಯ್ಯ ಸ್ವಾಮಿ, ಜಿಪಂ ಮಾಜಿ ಉಪಾಧ್ಯಕ್ಷ ಕುಶಾಲ ಯಾಬಾ, ಮಾಜಿ ಸದಸ್ಯರಾದ ರಾಜಶೇಖರ ನಾಗಮೂರ್ತಿ, ಕೇಶವರಾವ ತಳಘಟಕರ, ತಾಪಂ ಮಾಜಿ ಅಧ್ಯಕ್ಷ ಗೋಕುಲಸಿಂಗ್‌ ರಾಜಪೂತ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಬಿ. ಪಾಟೀಲ್‌, ಜಿಪಂ ಮುಖ್ಯ ಲೆಕ್ಕಾಧಿಕಾರಿ ಶ್ರೀಕಾಂತ, ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರಮೆ ಸೇರಿದಂತೆ ಇನ್ನಿತರರು ಇದ್ದರು.

ಕಲಾವಿದೆ ಶಿವಾನಿ ಶಿವದಾಸ ಸ್ವಾಮಿ ಹಾಗೂ ತಂಡದವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಶಿವಯ್ಯ ಸ್ವಾಮಿ ಸ್ವಾಗತಿಸಿದರು. ನವಲಿಂಗ ಪಾಟೀಲ್‌, ರೇಣುಕಾ ಮಳ್ಳಿ ನಿರೂಪಿಸಿದರು. ಸಿದ್ರಾಮಯ್ಯ ಹಿರೇಮಠ ವಂದಿಸಿದರು.

Share this article