ಸಂಘಟನೆ ಬದವರ್ಧನೆಗೆ ಕ್ರೀಡೆ ಸಹಕಾರಿ: ಡಾ. ಮಂತರ್ ಗೌಡ

KannadaprabhaNewsNetwork |  
Published : Oct 14, 2026, 02:30 AM IST
ಟ್ರೋಪಿ ಅನಾವರಣ ಕಾರ್ಯಕ್ರಮ. | Kannada Prabha

ಸಾರಾಂಶ

ಪತ್ರಕರ್ತರ ನಡುವೆ ಬಾಂಧವ್ಯ ವೃದ್ಧಿಸಿ, ಸಂಘಟನಾತ್ಮಕವಾಗಿ ಬಲವರ್ಧನೆಗೊಳ್ಳಲು ಕ್ರೀಡಾಕೂಟಗಳು ಸಹಕಾರಿ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹೇಳಿದರು.

ಸಿದ್ದಾಪುರ: ಪತ್ರಕರ್ತರ ನಡುವೆ ಬಾಂಧವ್ಯ ವೃದ್ಧಿಸಿ, ಸಂಘಟನಾತ್ಮಕವಾಗಿ ಬಲವರ್ಧನೆಗೊಳ್ಳಲು ಕ್ರೀಡಾಕೂಟಗಳು ಸಹಕಾರಿ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನ. 2, 3ರಂದು ಮಡಿಕೇರಿಯಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿ ಅನಾವರಣ ಕಾರ್ಯಕ್ರಮವು ಸಿದ್ದಾಪುರ ಸಮೀಪದ ಕರಡಿಗೋಡಿನ ಇವಾಲ್ವ್ ಬ್ಯಾಕ್ ರೆಸಾರ್ಟ್‌ನಲ್ಲಿ ನಡೆಯಿತು.

ಟ್ರೋಫಿ ಅನಾವರಣಗೊಳಿಸಿ ಮಾತನಾಡಿದ ಶಾಸಕ ಮಂತರ್ ಗೌಡ, ಕ್ರೀಡೆಯ ಮೂಲಕ ಪತ್ರಕರ್ತರನ್ನು ಒಗ್ಗೂಡಿಸುತ್ತಿರುವುದು ಶ್ಲಾಘನೀಯ ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಕೊಡಗು ಆತಿಥ್ಯ, ಶಿಸ್ತು ಹಾಗೂ ಸಾಂಸ್ಕೃತಿಕ ಹಿನ್ನೆಲೆಗೆ ಹೆಸರುವಾಸಿಯಾಗಿದೆ. ಜಿಲ್ಲೆಯ ಪತ್ರಕರ್ತರ ಸಂಘವು ಸಂಘಟನಾತ್ಮಕ ವಿಶ್ವಾಸವನ್ನು ಉಳಿಸಿಕೊಂಡು ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಇದೊಂದು ಪತ್ರಕರ್ತರ ಹಬ್ಬವಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಪಾಲ್ಗೊಳ್ಳಬೇಕು ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್. ಸವಿತಾ ರೈ ಮಾತನಾಡಿ, ವಿವಿಧ ಉಪಸಮಿತಿಗಳ ಮೂಲಕ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದ್ದು, ಸಂಘಟನೆಯನ್ನು ಬಲಪಡಿಸಲು ಸದಸ್ಯರ ಸಹಕಾರವೂ ಅತ್ಯಗತ್ಯ ಎಂದರು.

ಎಸ್‌ಎನ್‌ಡಿಪಿ ಯೂನಿಯನ್ ಜಿಲ್ಲಾ ಅಧ್ಯಕ್ಷ ವಿ.ಕೆ. ಲೋಕೇಶ್ ಮಾತನಾಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸುಮಾರು 9 ಸಾವಿರ ಸದಸ್ಯರನ್ನು ಹೊಂದಿರುವ ಬೃಹತ್ ಸಂಘಟನೆ ಎಂಬುದು ಹೆಮ್ಮೆಯ ಸಂಗತಿ ಎಂದರು.ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ನ. 2 ಮತ್ತು 3ರಂದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನ ಹಾಗೂ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಪಂದ್ಯಾವಳಿ ನಡೆಯಲಿದ್ದು, ರಾಜ್ಯದ 24 ತಂಡಗಳು ಭಾಗವಹಿಸಲಿವೆ. ಮೊದಲ ದಿನ ಪತ್ರಕರ್ತರು ಹಾಗೂ ರಾಜಕಾರಣಿಗಳ ನಡುವೆ ಪ್ರದರ್ಶನ ಪಂದ್ಯವನ್ನೂ ಆಯೋಜಿಸಲಾಗಿದೆ ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೆಜಿತ್ ಕುಮಾರ್ ಗುಹ್ಯ, ಕ್ರೀಡಾ ಸಮಿತಿ ಸಹಸಂಚಾಲಕ ರಿಜ್ವಾನ್ ಹುಸೇನ್ ಇದ್ದರು.ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್, ಕುಶಾಲನಗರ ತಾಲೂಕು ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ಸೋಮವಾರಪೇಟೆ ತಾಲೂಕು ಸಂಘದ ಅಧ್ಯಕ್ಷ ವಿಶ್ವಕುಮಾರ್, ಜಿಲ್ಲಾ ಸಂಘದ ಕ್ರೀಡಾ ಸಮಿತಿ ಸಂಚಾಲಕ ಸಂತೋಷ್ ರೈ ಮತ್ತಿತರರಿದ್ದರು.

ಸಂಘದ ಖಜಾಂಚಿ ಸುನಿಲ್ ಪೊನ್ನೇಟಿ ನಿರೂಪಿಸಿದರು. ಉಪಾಧ್ಯಕ್ಷ ವಾಸು ಸ್ವಾಗತಿಸಿ, ವನಿತಾ ಚಂದ್ರಮೋಹನ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೀಸಲಾತಿ ಸರ್ಕಾರದ ಕೊಡುಗೆಯಲ್ಲ, ಸಾಂವಿಧಾನಿಕ ಸಾಧನ
ಗೌರವ, ವಿನಯ, ಕೃತಜ್ಞತೆ ಬೆಳೆಸಿಕೊಂಡು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಿ: ಡಾ. ನೀಲ್ ರತನ್ ಶೆಂಡೆ