ನಮ್ಮ ಶಾಸಕರು ಮಾರಾಟಕ್ಕಿಲ್ಲ, ಸರ್ಕಾರ ಬೀಳಲ್ಲ: ಸಿದ್ದು, ಡಿಕೆಶಿ

KannadaprabhaNewsNetwork |  
Published : May 14, 2024, 01:11 AM ISTUpdated : May 14, 2024, 07:01 AM IST
ಸಿದ್ದು-ಡಿಕೆಶಿ | Kannada Prabha

ಸಾರಾಂಶ

ಚುನಾವಣೆ ಬಳಿಕ ಮಹಾರಾಷ್ಟ್ರ ಸರ್ಕಾರವೇ ಪತನವಾಗಲಿದೆ ಎಂದು ತಿರುಗೇಟು ನೀಡಿ ತಮ್ಮ ಸರ್ಕಾರ ಸುಭದ್ರವಾಗಿ ಇರುವುದಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 ಬೆಂಗಳೂರು :  ‘ನಮ್ಮ ಶಾಸಕರು ಮಾರಾಟವಾಗಲು ತಯಾರಿಲ್ಲ. ಹೀಗಾಗಿ ರಾಜ್ಯದಲ್ಲಿ ಮಹಾರಾಷ್ಟ್ರ ಮಾದರಿಯಲ್ಲಿ ಆಪರೇಷನ್ ಕಮಲದ ಮೂಲಕ ಸರ್ಕಾರ ಬೀಳಿಸುವುದು ಬಿಜೆಪಿಯವರ ಹಗಲುಗನಸು. ಬದಲಿಗೆ ಲೋಕಸಭೆ ಚುನಾವಣೆ ಬಳಿಕ ಮಹಾರಾಷ್ಟ್ರ ಸರ್ಕಾರವೇ ಪತನ ಆಗಲಿದೆ’ ಎಂದು ಮುಖ್ಯಮಂತ್ರಿಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಶಾಂತಿನಗರದಲ್ಲಿ ವಿಧಾನಪರಿಷತ್‌ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಹಾರಾಷ್ಟ್ರ ಮಾದರಿಯಲ್ಲೇ ಕರ್ನಾಟಕದಲ್ಲೂ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಹೇಳಿಕೆಗೆ ತಿರುಗೇಟು ನೀಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ರಾಜ್ಯದಲ್ಲಿ ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮೂಲಕ ಕೆಡವಲು ಸಾಧ್ಯವಿಲ್ಲ. ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ. ಈಗಾಗಲೇ ಕಳೆದ ಒಂದು ವರ್ಷದಿಂದ ಇಂತಹ ಪ್ರಯತ್ನ ಮಾಡಿ ಅವರು ವಿಫಲರಾಗಿದ್ದಾರೆ. ಮತ್ತೊಮ್ಮೆ ಯಾಕೆ ಪ್ರಯತ್ನಿಸುತ್ತಾರೆ ಎಂದು ಪ್ರಶ್ನಿಸಿದರು.

ಮಹಾರಾಷ್ಟ್ರ ಸರ್ಕಾರ ಉಳಿಯುವುದೇ ಅನುಮಾನ- ಡಿಕೆಶಿ:  ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ‘ಮಹಾರಾಷ್ಟ್ರ ಸರ್ಕಾರ ಉಳಿಯುವುದು ಅನುಮಾನ ಆಗಿದೆ. ಅಲ್ಲಿ ಶಾಸಕರು ಎಲ್ಲರೂ ಯೂ-ಟರ್ನ್ ಹೊಡೆಯುತ್ತಿದ್ದಾರೆ. ಎನ್‌ಸಿಪಿ, ಶಿವಸೇನೆಯ ಶಾಸಕರು ವಾಪಸು ಆಗುತ್ತಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ಅಲ್ಲಿನ ಸರ್ಕಾರವೇ ಪತನವಾಗಲಿದೆ. ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಸರ್ಕಾರವೇ ಅಧಿಕಾರಕ್ಕೆ ಬರಲಿದೆ’ ಎಂದು ಸ್ಪಷ್ಟಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!