ಕನ್ನಡಪ್ರಭ ವಾರ್ತೆ ಬೆಂಗಳೂರು
ಮಂಗಳವಾರ ಮಧ್ಯಾಹ್ನ ಹಣಕಾಸು ಇಲಾಖೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಮೊದಲ ಸಭೆ ನಡೆಸಿದ್ದಾರೆ. ನಂತರ ಸಿದ್ದರಾಮಯ್ಯ ಅವರು ಇಲಾಖಾವಾರು ಸಭೆ, ರೈತರು, ಉದ್ಯಮಿಗಳು, ಕಾರ್ಮಿಕ ಸಂಘಟನೆಗಳು ಸೇರಿದಂತೆ ಕ್ಷೇತ್ರವಾರು ತಜ್ಞರ ಜತೆ ಸಭೆ ನಡೆಸಲಿದ್ದಾರೆ.
ಜ.22 ರಿಂದ ಜ.31ರವರೆಗೆ ಜಂಟಿ ಅಧಿವೇಶನ ನಡೆಯಲಿದೆ. ಹೀಗಾಗಿ ಮಾರ್ಚ್ ಮೊದಲ ವಾರದಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಬಜೆಟ್ ಮಂಡನೆ ಮಾಡುವ ಸಾಧ್ಯತೆಯಿದೆ.ಅಧಿವೇಶನದ ಬಳಿಕ ಪೂರ್ಣ ಸಿದ್ಧತೆ:
ಸಿದ್ದರಾಮಯ್ಯ ಅವರ 17ನೇ ಬಜೆಟ್:
ದೇಶದಲ್ಲಿ ಅತಿ ಹೆಚ್ಚು ಬಾರಿ ಬಜೆಟ್ (18) ಮಂಡಿಸಿರುವ ಗುಜರಾತ್‌ನ ವಜುಭಾಯಿ ವಾಲಾ (ವಿ.ಆರ್. ವಾಲಾ) ಅವರ ದಾಖಲೆ ಸರಿಗಟ್ಟಲು ಮತ್ತೊಂದು ಬಜೆಟ್ ಮಂಡನೆ ಮಾಡಬೇಕಾದ ಅನಿವಾರ್ಯತೆ ಇದೆ.
ಪಕ್ಷದ ವರಿಷ್ಠರು ಕರೆದಿಲ್ಲ, ವರಿಷ್ಠರಿಂದ ಕರೆ ಬಂದರೆ ದೆಹಲಿಗೆ ತೆರಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೊಂಡಜ್ಜಿ ಬಸಪ್ಪ ಸಭಾಂಗಣದ ಬಳಿ ಮಂಗಳವಾರ ದೆಹಲಿ ಪ್ರವಾಸ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ವರಿಷ್ಠರು ಕರೆ ನೀಡಿದರೆ ದೆಹಲಿಗೆ ತೆರಳುತ್ತೇನೆ ಎಂದರು. ವಿಧಾನಮಂಡಲ ವಿಶೇಷ ಅಧಿವೇಶನ ಕುರಿತು ಪ್ರತಿಕ್ರಿಯಿಸಿ, ಜ.22ರಿಂದ 31ರವರೆಗೆ ಜಂಟಿ ಅಧಿವೇಶನ ನಡೆಯಲಿದೆ. ಮೊದಲಿಗೆ ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಇರಲಿದೆ. ನಂತರ ಮನರೇಗಾ ಯೋಜನೆ ಕುರಿತು ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನ ನಂತರ ಬಜೆಟ್ ಸಿದ್ಧತೆ ಆರಂಭಿಸಲಾಗುವುದು ಎಂದು ಹೇಳಿದರು.