ಹುಬ್ಬಳ್ಳಿ:
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಧಾರವಾಡ ವಿಭಾಗ, ಹು-ಧಾ ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಜತೆ ಘನತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿ ಕುರಿತ ಹಮ್ಮಿಕೊಳ್ಳಳಾಗಿದ್ದ ಸಭೆಯಲ್ಲಿ ಮಾತನಾಡಿದರು.
ಪುಟ್‌ಪಾತ್ ಮೇಲೆ ಬೈಕ್ ಮತ್ತು ಕಾರು ನಿಲ್ಲಿಸಿರುವುದು ಗಮನಕ್ಕೆ ಬಂದಿದೆ. ಪಾದಚಾರಿ ಮಾರ್ಗದಲ್ಲಿ ಯಾವುದೇ ವಾಹನ ನಿಲ್ಲಿಸದಂತೆ ಕ್ರಮಕೈಗೊಳ್ಳಬೇಕು. ಒಂದು ವೇಳೆ ವಾಹನ ನಿಲ್ಲಿಸಿದರೆ ದಂಡ ವಿಧಿಸಬೇಕು. ಡಿಜಿಟಲ್ ಜಾಹೀರಾತು ಫಲಕಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಅನಧಿಕೃತವಾಗಿ ಜಾಹೀರಾತು ಬಿತ್ತರಿಸುವವರ ವಿರುದ್ಧ ಸೂಕ್ತ ರೀತಿಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.ಮಹಾನಗರಗಳಲ್ಲಿ ಒಳಂಚರಂಡಿಯ ಒಟ್ಟಾರೆ ಉದ್ದ, ಪೂರ್ಣಗೊಂಡ ಒಳಚರಂಡಿ ಕಾಮಗಾರಿ ಮತ್ತು ಉಳಿದ ಕಾಮಗಾರಿಯ ಮಾಹಿತಿ, ತಪ್ಪಿ ಹೋಗಿರುವ ಒಳಚರಂಡಿ ಸಂಪರ್ಕ, ಮನೆ-ಮನೆಯಿಂದ ಸಂಗ್ರಹವಾಗುವ ತ್ಯಾಜ್ಯ, ಘನ ತ್ಯಾಜ್ಯ, ಕೊಳಚೆ ನೀರಿನ ಸಂಸ್ಕರಣ ಘಟಕದ ಕಾರ್ಯ ಸೇರಿದಂತೆ ಇತರ ಮಾಹಿತಿಗಳನ್ನು ಅಧಿಕಾರಿಗಳು ಸಂಗ್ರಹಿಸಬೇಕು. ಆ ಮೂಲಕ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗಲಿವೆ ಎಂದರು.
ಆಸ್ಪತ್ರೆಗಳ ತ್ಯಾಜ್ಯ ನಿರ್ವಹಣೆ:
ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಮಾತನಾಡಿ, ಒಳ ಚರಂಡಿ ವ್ಯವಸ್ಥೆ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹ. ತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಒತ್ತು, ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಮುಂದಿನ ಒಂದು ತಿಂಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಯಂತ್ರಣಕ್ಕೆ ತರುವುದಾಗಿ ತಿಳಿಸಿದರು.