ಸಿದ್ಲಿಪುರ ಕಟ್ಟಡ ಕುಸಿತ: ಮೃತನ ಕುಟುಂಬಕ್ಕೆ ಪರಿಹಾರ ನೀಡಿ

KannadaprabhaNewsNetwork |  
Published : Oct 29, 2025, 01:00 AM IST
ಪೊಟೋ: 28ಎಸ್‌ಎಂಜಿಕೆಪಿ01ಶಿವಮೊಗ್ಗ ತಾಲೂಕು ಪಂಚಾಯಿತಿಯಲ್ಲಿ ಮಂಗಳವಾರ ಏರ್ಪಡಿಸಿದ್ದ 2025-26 ನೇ ಸಾಲಿನ ಮೊದಲನೇ ಮತ್ತು ಎರಡನೇ ತಾಲೂಕು ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಗ್ರಾಮಾಂತರ ಶಾಸಕಿ  ಶಾರದಾ ಪೂರ್ಯನಾಯ್ಕ್‌ ಮಾತನಾಡಿದರು.  | Kannada Prabha

ಸಾರಾಂಶ

ಸಿದ್ಲಿಪುರದಲ್ಲಿ ನಡೆದ ಕಟ್ಟಡ ಕುಸಿತದಿಂದ ಕಾರ್ಮಿಕನೊರ್ವ ಸಾವನ್ನಪ್ಪಿದ್ದು, ಕಾರ್ಮಿಕ ಇಲಾಖೆಯು ಈ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ನೊಂದ ಕಾರ್ಮಿಕ ಕುಟುಂಬಕ್ಕೆ ಪರಿಹಾರ ಒದಗಿಸಬೇಕು ಎಂದು ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಸೂಚನೆ ನೀಡಿದರು.

ಶಿವಮೊಗ್ಗ: ಸಿದ್ಲಿಪುರದಲ್ಲಿ ನಡೆದ ಕಟ್ಟಡ ಕುಸಿತದಿಂದ ಕಾರ್ಮಿಕನೊರ್ವ ಸಾವನ್ನಪ್ಪಿದ್ದು, ಕಾರ್ಮಿಕ ಇಲಾಖೆಯು ಈ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ನೊಂದ ಕಾರ್ಮಿಕ ಕುಟುಂಬಕ್ಕೆ ಪರಿಹಾರ ಒದಗಿಸಬೇಕು ಎಂದು ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಸೂಚನೆ ನೀಡಿದರು.ನಗರದ ತಾಲೂಕು ಪಂಚಾಯಿತಿಯಲ್ಲಿ ಮಂಗಳವಾರ ಏರ್ಪಡಿಸಿದ್ದ 2025-26ನೇ ಸಾಲಿನ ಮೊದಲನೇ ಮತ್ತು ಎರಡನೇ ತಾಲೂಕು ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿ, ಕಾರ್ಮಿಕ ಇಲಾಖೆಯು ಜಿಲ್ಲೆಯಲ್ಲಿ ಇಂತಹ ಘಟನೆಯು ಮುಂದೆಂದು ನಡೆಯದಂತೆ ಜಾಗೃತಿ ವಹಿಸಬೇಕು. ಸಾವನ್ನಪ್ಪಿರುವ ವ್ಯಕ್ತಿಗೆ ಕಾರ್ಮಿಕ ಕಾರ್ಡ್‌ನಿಂದ ಸಿಗುವ ಸೌಲಭ್ಯವನ್ನು ನೀಡಬೇಕು ಎಂದರು.ಕಾರ್ಮಿಕ ಇಲಾಖೆಯ ಅಧೀನದಲ್ಲಿ ಬರುವ ವಿವಿಧ ಮಂಡಳಿಗಳ ಯೋಜನೆ ಬಗ್ಗೆ ಕಾರ್ಮಿಕರಿಗೆ ಅರಿವು ಮೂಡಿಸಬೇಕು. ವಾಹನ ಬ್ರಾಂಡಿಂಗ್ ಹಾಗೂ ಆಟೋ ಪ್ರಚಾರ ಮೂಲಕ ಜಿಲ್ಲಾದ್ಯಂತ ಈ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು. ಮಿಷನ್ ಸುರಕ್ಷ ಅಭಿಯಾನಕ್ಕೆ ಆಯನೂರು, ಕುಂಸಿ, ಚೋರಡಿ ಮತ್ತು ತುಪ್ಪೂರು ಗ್ರಾಮ ಪಂಚಾಯಿತಿಗಳಿಗೆ ಕಾರ್ಮಿಕ ನಿರೀಕ್ಷಕರನ್ನು ನೋಡಲ್ ಆಫೀಸರ್ ಆಗಿ ನೇಮಕ ಮಾಡಲಾಗಿದ್ದು, ಕಾರ್ಮಿಕ ಯೋಜನೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಬೇಕು ಎಂದು ಸೂಚಿಸಿದರು.ಶಾಲಾ ಶಿಕ್ಷಣ ಇಲಾಖೆ ಕುರಿತು ಮಾತನಾಡಿದ ಶಾಸಕರು, ಶಾಲಾ ಶಿಕ್ಷಣ ಇಲಾಖೆಯಿಂದ ಅತಿಥಿ ಉಪನ್ಯಾಸಕ ಆಯ್ಕೆ, ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ನೀಡುವ ಸೌಲಭ್ಯ ಸರಿಯಾದ ನಿಟ್ಟಿನಲ್ಲಿ ದೊರಕಬೇಕು. ಗ್ರಾಮೀಣ ಹಾಗೂ ನಗರದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಇದರಿಂದ ವಂಚಿತರಾಗಬಾರದು ಎಂದರು. ಸಭೆಯಲ್ಲಿ ತಾಲೂಕುಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ಮಧು, ನಾಮ ನಿರ್ದೇಶಿತ ಸದಸ್ಯರುಗಳು, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತಿತರರಿದ್ದರು.

PREV

Recommended Stories

ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ಹಣೆಯಲ್ಲಿ ಬರೆದಿದ್ದರೆ ಡಿಕೆಶಿ ಸಿಎಂ ಆಗ್ತಾರೆ ಇಲ್ದಿದ್ರೆ ಇಲ್ಲ : ಡಿಕೆಸು