ಜು.3ಕ್ಕೆ ಮುಖ್ಯಮಂತ್ರಿ ಮನೆಗೆ ಮುತ್ತಿಗೆ: ಬಿ.ವೈ.ವಿಜಯೇಂದ್ರ

KannadaprabhaNewsNetwork | Published : Jun 30, 2024 12:46 AM

ಸಾರಾಂಶ

ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ಮಾಡಿಕೊಂಡು ಬಂದಿದೆ. ಹೋರಾಟದ ಫಲ ನಾಗೇಂದ್ರ ರಾಜೀನಾಮೆ ಕೊಡಬೇಕಾಯಿತು ಎಂದು ವಿಜಯೇಂದ್ರ ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರವನ್ನು ಖಂಡಿಸಿ ಜುಲೈ 3ರಂದು ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ಮಾಡಿಕೊಂಡು ಬಂದಿದೆ. ಹೋರಾಟದ ಫಲ ನಾಗೇಂದ್ರ ರಾಜೀನಾಮೆ ಕೊಡಬೇಕಾಯಿತು. ಚಂದ್ರಶೇಖರನ್‌ ಡೆತ್‌ ನೋಟ್‌ನಲ್ಲಿ ಅನೇಕ ಅಂಶವನ್ನು ಉಲ್ಲೇಖಿಸಿದ್ದಾರೆ. ಆದರೂ ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ದೂರಿದರು.

ರಾಜ್ಯದಲ್ಲಿ ಇಷ್ಟು ದೊಡ್ಡ ಮಟ್ಟದ ಹಗರಣ ನಡೆದಿದೆ, ವಾಲ್ಮೀಕಿ ಸಮಾಜಕ್ಕೆ ಮೀಸಲಿಟ್ಟ ಹಣವನ್ನು ಸರ್ಕಾರ ಲೂಟಿ ಮಾಡಿದೆ. ಇದರ ಹೊಣೆ ಹೊತ್ತು ಶರಣ ಪ್ರಕಾಶ್ ಪಾಟೀಲ್, ಬೋರ್ಡ್ ಅಧ್ಯಕ್ಷರು ಸೇರಿ ಮುಖ್ಯಮಂತ್ರಿ ಸಹ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿಗಳ ಗಮನಕ್ಕೆ ಬಾರದೇ ಇಷ್ಟು ದೊಡ್ಡ ಹಗರಣ ನಡೆಯಲು ಸಾಧ್ಯವಿಲ್ಲ, ಲೋಕಸಭಾ ಚುನಾವಣೆ ನಡೆಯುವ ಸಂದರ್ಭದಲ್ಲಿ ಇಷ್ಟೊಂದು ದೊಡ್ಡ ಹಗರಣ ಆಗಿದೆ. ರಾಜ್ಯದ ಇತಿಹಾಸದಲ್ಲಿ ಇಂತಹ ದೊಡ್ಡ ಹಗರಣ ನಡೆದಿಲ್ಲ. ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ದುರುಪಯೋಗವಾಗಿದೆ, ಲೋಕಸಭೆ ಚುನಾವಣೆಗೆ ಈ ಹಣ ಉಪಯೋಗ ಆಗಿದೆ ಎನ್ನುವ ಚರ್ಚೆಮಾಡಿದ್ದಾರೆ ಎಂದರು.

ಸಾವಿರಾರು ಅಕೌಂಟ್ ಓಪನ್ ಮಾಡಿ ಹಣ ವರ್ಗಾವಣೆ ಮಾಡಿದ್ದಾರೆ. ಸಿಎಂ ತಮ್ಮ ಬುಡಕ್ಕೆ ಬರುತ್ತೆ ಅಂತ ಅವರ ಸರ್ಕಾರ ಉಳಿಸುವ ಪ್ರಯತ್ನ ಮಾಡುತ್ತಿದ್ದಾರೆ.

ರೈತರು ಬರಗಾಲದಿಂದ ಕಂಗಾಲಾಗಿದ್ದಾರೆ, ನಿರೀಕ್ಷಿತ ಮಟ್ಟದಲ್ಲಿ ಮಳೆ ಸರಿಯಾಗಿ ಆಗುತ್ತಿಲ್ಲ. ಬಿತ್ತನೆ ಬೀಜ ದುಬಾರಿ ಆಗುತ್ತಿದೆ. ಲೋಕಸಭಾ ಸಭೆ ತನಕ ಒಗ್ಗಟಿನ ಪ್ರದರ್ಶನ ಮಾಡುತ್ತಿದ್ದರು. ಈಗ ಹಾದಿಲಿ ಬೀದಿಲಿ ಸಿಎಂ, ಡಿಸಿಎಂ ಬಗ್ಗೆ ಚೆರ್ಚೆ ಆಗುತ್ತಿದೆ. ಮುಖ್ಯಮಂತ್ರಿ ಬದಲಾಗಬೇಕು ಅಂತ ಚೆರ್ಚೆ ಆಗುತ್ತಿದೆ. ರಾಜ್ಯದ ಜನರ ಪಾಲಿಗೆ ಸರ್ಕಾರ ಶಾಪವಾಗಿದೆ, ರೈತರ ಬಗ್ಗೆ ಈ ಸರ್ಕಾರಕ್ಕೆ ಕಾಳಜಿ ಇಲ್ಲ,ಇ ಂತಹ ಸಂದರ್ಭದಲ್ಲಿ ಬೆಲೆ ಏರಿಕೆ ಮಾಡುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Share this article