ಅಧಿವೇಶನದಲ್ಲಿ ಸುವರ್ಣ ವಿಧಾನ ಸೌಧಕ್ಕೆ ಮುತ್ತಿಗೆ

KannadaprabhaNewsNetwork |  
Published : Nov 30, 2026, 04:15 AM IST
29್ದವ್ದ್ದಸದ್ವಚಸದ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಹುಕ್ಕೇರಿಉತ್ತರ ಕರ್ನಾಟಕ ಅಭಿವೃದ್ಧಿಗೆ ತಾರತಮ್ಯ ನೀತಿ ಹಾಗೂ ಬರ ಪರಿಹಾರ ನೀಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ನಿಲುವು ಖಂಡಿಸಿ ಬಿಜೆಪಿಯಿಂದ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ ಹೇಳಿದರು.

ಕನ್ನಡಪ್ರಭ ವಾರ್ತೆ ಹುಕ್ಕೇರಿಉತ್ತರ ಕರ್ನಾಟಕ ಅಭಿವೃದ್ಧಿಗೆ ತಾರತಮ್ಯ ನೀತಿ ಹಾಗೂ ಬರ ಪರಿಹಾರ ನೀಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ನಿಲುವು ಖಂಡಿಸಿ ಬಿಜೆಪಿಯಿಂದ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ ಹೇಳಿದರು.

ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಆವರಣದಲ್ಲಿ ರವಿವಾರ ನಡೆದ ಬೃಹತ್ ಹೋರಾಟದ ಹಿನ್ನೆಲೆಯಲ್ಲಿ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ತಡೆಯುವಲ್ಲಿ, ಬರ ಪರಿಹಾರ ಹೆಚ್ಚಿಸುವಲ್ಲಿ ಹಾಗೂ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.

ಜನವಿರೋಧಿ ನೀತಿ ಹಾಗೂ ಸೋಲಿನ ಭಯದಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರಕಾರ ಹಿಂದೇಟು ಹಾಕುತ್ತಿದೆ. ಬೆಲೆ ಏರಿಕೆ ಮತ್ತು ಅಭಿವೃದ್ಧಿ ಶೂನ್ಯ ಆಡಳಿತದಿಂದ ಜನಸಾಮಾನ್ಯರು ಬೇಸತ್ತಿದ್ದಾರೆ. ಈ ಸರಕಾರದ ಕ್ರಮ ಖಂಡಿಸಿ ಮತ್ತು ಜನರ ಧ್ವನಿಯಾಗಲು ಬಿಜೆಪಿ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಬೃಹತ್ ಜನಪರ ಹೋರಾಟ ನಡೆಸಲಿದೆ. ವಿರೋಧಿ ಪಕ್ಷವಾಗಿ ಬಿಜೆಪಿ, ಹಲವು ಹೋರಾಟಗಳನ್ನು ನಡೆಸಿ ಯಶಸ್ವಿಯಾಗಿದ್ದೇವೆ ಎಂದರು.

ಶಾಸಕ ನಿಖಿಲ ಕತ್ತಿ ಮಾತನಾಡಿ, ಜನರಿಗೆ ಗ್ಯಾರಂಟಿ ಯೋಜನೆ ಕೊಟ್ಟಿದ್ದೇವೆ ಎಂದು ಹೇಳುವ ರಾಜ್ಯ ಸರ್ಕಾರ ಬೆಲೆ ಏರಿಕೆ ಕುರಿತು ಮಾತನಾಡುತ್ತಿಲ್ಲ. ಬರಗಾಲದಿಂದ ತತ್ತರಿಸಿದ ರಾಜ್ಯದ ಜನತೆಗೆ ಕೇವಲ ₹2,500 ಬರ ಪರಿಹಾರ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಈ ಮೊದಲು ಬಿ.ಎಸ್.ವೈ ಅವರ ಆಡಳಿತದ ಅವಧಿಯಲ್ಲಿ ₹16,500ಗಳಿಂದ ₹25,800 ವರೆಗೆ ಪರಿಹಾರ ನೀಡಿದ್ದನ್ನು ಈ ಸರ್ಕಾರ ಮರೆಯಬಾರದು ಎಂದರು.ಬಿಜೆಪಿ ಮಂಡಳ ಅಧ್ಯಕ್ಷ ರಾಚಯ್ಯಾ ಹಿರೇಮಠ ಮಾತನಾಡಿ, ಕಾಂಗ್ರೆಸ್ ಪಕ್ಷದ ದುರಾಡಳಿತ ಹಾಗೂ ಬೆಲೆ ಏರಿಕೆ ವಿರೋಧಿಸಿ ಬೆಳಗಾವಿಯಲ್ಲಿ ಬಿಜೆಪಿ ನಡೆಸಲಿರುವ ಪ್ರತಿಭಟನೆಯಲ್ಲಿ ಹುಕ್ಕೇರಿ ತಾಲೂಕಿನಿಂದ ಸಹಸ್ರಾರು ಜನರು ಭಾಗಿಯಾಗಲಿದ್ದಾರೆ ಎಂದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನೀಲ ಬೆನಕೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೃತ ಕುಲಕರ್ಣಿ, ಮುಖಂಡರಾದ ಡಾ.ರಾಜೇಶ ನೇರ್ಲಿ, ಗುರುರಾಜ ಕುಲಕರ್ಣಿ, ರಾಜು ಮುನ್ನೋಳಿ, ಶಿವಾನಂದ ಮುಡಸಿ, ಆನಂದ ಲಕ್ಕುಂಡಿ, ಶಿವನಗೌಡ ಮದವಾಲ, ಶ್ರೀಶೈಲ ಮಠಪತಿ, ಬಸವರಾಜ ತಳವಾರ, ಆದರ್ಶ ಅಂಕಲಗಿ, ಪ್ರಜ್ವಲ ಪಾಟೀಲ, ಸವಿತಾ ಏಣಗಿಮಠ, ರಾಜೇಶ್ವರಿ ಗೋಠಿ, ಶರ್ಮಿಳಾ ಬಡಮಲ್ಲನವರ, ಸರೋಜಿನಿ ಹುಂಡೇಕಾರ, ರೇಖಾ ಮುದಕನ್ನವರ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿಸ್ತೇಜನಗೊಂಡ ಗ್ರಾಮೀಣ ಗ್ರಂಥಾಲಯಗಳು !
ಪ್ರತಿಯೊಬ್ಬ ಕನ್ನಡಿಗ ನಾಡಿನ ಕಾವಲುಗಾರನಾಗಬೇಕಿದೆ: ಚಲಪತಿ ಗೌಡ