8 ರಂದು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ

KannadaprabhaNewsNetwork |  
Published : Dec 02, 2025, 03:00 AM IST
ರೈತ ವಿರೋಧಿ, ಜನ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ದಸುವರ್ಣ ಸೌಧ ಮುತ್ತಿಗೆ ಕಡಾಡಿ | Kannada Prabha

ಸಾರಾಂಶ

ಮಾತು ತಪ್ಪಿದ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ, ಜನ ವಿರೋಧಿ ನೀತಿ ಖಂಡಿಸಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಸಭೆ ಚಳಿಗಾಲ ಅಧಿವೇಶನದ ಮೊದಲದಿನ ಡಿ.8ರಂದು ಭಾರತೀಯ ಜನತಾ ಪಾರ್ಟಿ ನೇತೃತ್ವದಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಪಾದಯಾತ್ರೆ ಮುಖಾಂತರ ಆಗಮಿಸಿ ಮುತ್ತಿಗೆ ಹಾಕುವ ಬೃಹತ್ ಪ್ರತಿಭಟನಾ ಹೋರಾಟ ನಡೆಯಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಕನ್ನಡಪ್ರಭ ವಾರ್ತೆ ಮೂಡಲಗಿ

ಮಾತು ತಪ್ಪಿದ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ, ಜನ ವಿರೋಧಿ ನೀತಿ ಖಂಡಿಸಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಸಭೆ ಚಳಿಗಾಲ ಅಧಿವೇಶನದ ಮೊದಲದಿನ ಡಿ.8ರಂದು ಭಾರತೀಯ ಜನತಾ ಪಾರ್ಟಿ ನೇತೃತ್ವದಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಪಾದಯಾತ್ರೆ ಮುಖಾಂತರ ಆಗಮಿಸಿ ಮುತ್ತಿಗೆ ಹಾಕುವ ಬೃಹತ್ ಪ್ರತಿಭಟನಾ ಹೋರಾಟ ನಡೆಯಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ರಾಜ್ಯದ ರೈತರು, ಕೃಷಿ ಕೂಲಿ ಕಾರ್ಮಿಕರು ಸಂಕಷ್ಟದಲ್ಲಿರುವ ಈ ಸಮಯದಲ್ಲಿ ಅವರ ನೆರವಿಗೆ ಧಾವಿಸಬೇಕಾದ ರಾಜ್ಯ ಸರ್ಕಾರ ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಲ್ಲಿಯೇ ಕಾಲಹರಣ ಮಾಡುತ್ತಿದೆ ಮತ್ತು ನುಡಿದಂತೆ ನಡೆದಿದ್ದೇವೆ ಎಂಬ ಜಾಹೀರಾತು ನೀಡುವ ಮೂಲಕ ತನ್ನ ಹುಳುಕುಗಳನ್ನು ಮರೆಮಾಚಲು ಹೊರಟಿದೆ. ಹೀಗಾಗಿ ಮಾತು ತಪ್ಪಿದ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ ವಿರುದ್ಧ ಬೆಳಗಾವಿಯ ಸುವರ್ಣ ವಿಧಾನಸೌಧ ಮುತ್ತಿಗೆ ಹಾಕುವ ಮೂಲಕ ಬಾರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಉತ್ತರ ಕರ್ನಾಟಕ ಭಾಗದಲ್ಲಿ ಅತಿವೃಷ್ಠಿ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ನೆರೆ ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯನವರು ಭರವಸೆ ನೀಡಿ ತಿಂಗಳುಗಳೇ ಕಳೆದರೂ ಇದುವರೆಗೂ ನಯಾಪೈಸೆ ಸಂತ್ರಸ್ತ ರೈತರಿಗೆ ಪರಿಹಾರ ನೀಡಿಲ್ಲ. ಈರುಳ್ಳಿ, ಮೆಕ್ಕೆಜೋಳ, ಸೋಯಾಬೀನ್ ಬೆಲೆ ಕುಸಿದು ರೈತರು ಸಂಕಷ್ಟಕ್ಕೆ ಒಳಗಾಗಿದ್ದರೂ ರಾಜ್ಯ ಸರ್ಕಾರ ಇನ್ನೂ ಖರೀದಿ ಕೇಂದ್ರಗಳನ್ನು ಪ್ರಾರಂಭ ಮಾಡದೇ ಕಾಲಹರಣ ಮಾಡುತ್ತಿರುವ ನಿಮ್ಮ ರೈತ ವಿರೋಧಿ ಧೋರಣೆ ವಿರೋದಿಸುವುದಕ್ಕಾಗಿ ಹೋರಾಟ ಎಂದರು.ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರತಿ ಲೀಟರ್ ಹಾಲಿಗೆ ₹7 ಪ್ರೋತ್ಸಾಹಧನ ನೀಡುವುದಾಗಿ ಹೇಳಿತ್ತು. ಅದನ್ನು ಇನ್ನೂ ಈಡೇರಿಸಿಲ್ಲ. ಬದಲಾಗಿ ಈ ಹಿಂದೆ ಇರುವ ಪ್ರತಿ ಲೀಟರ್ ಹಾಲಿಗೆ ₹5 ಪ್ರೋತ್ಸಾಹ ಧನವನ್ನು ಕಳೆದ 5 ತಿಂಗಳಿಂದ ಸುಮಾರು ₹620 ಕೋಟಿ ಬಾಕಿ ಉಳಿಸಿಕೊಂಡಿದೆ. ರೈತರನ್ನು ಸಂಕಷ್ಟಕ್ಕೆದೂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ ಸರ್ಕಾರ ಜಾರಿಗೆ ತಂದ ರೈತರಿಗೆ ₹3 ಲಕ್ಷದ ವರೆಗಿನ ಬೆಳೆ ಸಾಲಕ್ಕೆ ಶೂನ್ಯ ಬಡ್ಡಿದರ ಯೋಜನೆಯನ್ನು ₹10 ಲಕ್ಷಕ್ಕೆ ಹೆಚ್ಚಿಸುವುದಾಗಿ ಚುನಾವಣೆಯಲ್ಲಿ ನೀಡಿದ ಭರವಸೆಯನ್ನು ಈಡೇರಿಸಲಾಗಿಲ್ಲ. ಸ್ತ್ರೀಶಕ್ತಿ ಸಂಘಕ್ಕೆ ಶೂನ್ಯ ಬಡ್ಡಿ ಸಾಲ ನೀಡುವ ನಿಮ್ಮ ಪ್ರಣಾಳಿಕೆ ಮಾತನ್ನು ಈಡೇರಿಸದೇ ಮಾತು ತಪ್ಪಿದ ಸರ್ಕಾರ ನಿಮ್ಮದಾಗಿದೆ. ರೈತರ ಪಂಪಸೆಟ್‍ಗಳಿಗೆ ವಿದ್ಯುತ್ ಸಂಪರ್ಕ ಪೂರೈಸುವ ಟ್ರಾನ್ಸ್‌ಫಾರ್ಮರ್ ಮಂಜೂರು ಮಾಡುವಲ್ಲಿ ಲಕ್ಷಾಂತರ ರು. ವಸೂಲಿ ಮಾಡುತ್ತಿರುವ ರೈತ ವಿರೊಧಿ ಧೋರಣೆ ಕೈ ಬಿಡುವಂತೆ ಸಂಸದ ಈರಣ್ಣ ಕಡಾಡಿ ಪ್ರಕಟನೆ ಮೂಲಕ ಒತ್ತಾಯಿಸಿದ್ದಾರೆ.ಸರ್ಕಾರ ವಿಫಲವಾಗಿದೆ ಮತ್ತು ಚುನಾವಣೆಯಲ್ಲಿ ತಾನು ನೀಡಿದ ಭರವಸೆಗಳನ್ನು ಈಡೇರಿಸಲಾಗಿಲ್ಲ. ಮುಖ್ಯಮಂತ್ರಿ ಕುರ್ಚಿ ಗುದ್ದಾಟದಲ್ಲಿ ಕಾಲಹರಣ ಮಾಡಿ ರಾಜ್ಯದ ರೈತರಿಗೆ ಅನ್ಯಾಯವಾಗಿದೆ. ಇಂತಹ ರೈತ ವಿರೋಧಿ, ಜನವಿರೋಧಿ ಸರ್ಕಾರವನ್ನು ಕಿತ್ತೊಗಿಯಲಿಕ್ಕೆ ರಾಜ್ಯದ ರೈತರೊಂದಿಗೆ ವಿಧಾನಸಭಾ ಅಧಿವೇಶನ ಪ್ರಾರಂಭವಾಗುವ ಮೊದಲ ದಿನ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುವುದು. ರಾಜ್ಯದ ರೈತರು ಅದರಲ್ಲೂ ವಿಶೇಷವಾಗಿ ಬೆಳಗಾವಿ ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಹೋರಾಟವನ್ನು ಯಶಸ್ವಿಗೊಳಿಸಬೇಕು.

- ಈರಣ್ಣ ಕಡಾಡಿ, ರಾಜ್ಯಸಭಾ ಸದಸ್ಯರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಸಿದ ಕರ್ನಾಟಕ ಕ್ರಿಕೆಟ್‌ ಗುಣಮಟ್ಟ - ಈ ಸಲ 7 ಟಿ20ಯಲ್ಲಿ ಗೆದ್ದಿದ್ದು ಕೇವಲ 2
ಬುರುಡೆ ಕೇಸ್‌ ಹಿಂದೆ ಅರ್ಬನ್‌ ನಕ್ಸಲ್‌ : ಬಿಜೆಪಿ