ಕಬ್ಬು ಬೆಳೆಗಾರರಿಗೆ ನಿರಂತರವಾಗಿ ಸಕ್ಕರೆ ಕಾರ್ಖಾನೆಗಳಿಂದ ಲೂಟಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತರನ್ನು ಸಂಪೂರ್ಣ ಕಡೆಗಣನೆ ಮಾಡಿ ಕಳೆದ 30 ವರ್ಷಗಳಿಂದ ವೈಜ್ಞಾನಿಕ ಬೆಲೆ ನಿಗದಿ ಪಡೆಸುವಲ್ಲಿ ವಿಫಲವಾಗಿದೆ. ಇದನ್ನು ಖಂಡಿಸಿ ಸೆ.29ರಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಹುಬ್ಬಳ್ಳಿಯ ನಿವಾಸಕ್ಕೆ 2 ಲಕ್ಷಕ್ಕೂ ಅಧಿಕ ರೈತರೊಂದಿಗೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಕಬ್ಬು ಬೆಳೆಗಾರರಿಗೆ ನಿರಂತರವಾಗಿ ಸಕ್ಕರೆ ಕಾರ್ಖಾನೆಗಳಿಂದ ಲೂಟಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತರನ್ನು ಸಂಪೂರ್ಣ ಕಡೆಗಣನೆ ಮಾಡಿ ಕಳೆದ 30 ವರ್ಷಗಳಿಂದ ವೈಜ್ಞಾನಿಕ ಬೆಲೆ ನಿಗದಿ ಪಡೆಸುವಲ್ಲಿ ವಿಫಲವಾಗಿದೆ. ಇದನ್ನು ಖಂಡಿಸಿ ಸೆ.29ರಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಹುಬ್ಬಳ್ಳಿಯ ನಿವಾಸಕ್ಕೆ 2 ಲಕ್ಷಕ್ಕೂ ಅಧಿಕ ರೈತರೊಂದಿಗೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಹೇಳಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಮಾತನಾಡಿ, ಸಕ್ಕರೆಗೆ ಕನಿಷ್ಠ ಮಾರಾಟಗಾರ(ಎಂ.ಎಸ್.ಪಿ) ₹60 ಏರಿಸಬೇಕು. ಪ್ರಸಕ್ತ 2026-27ನೇ ಸಾಲಿನ ಪ್ರತಿ ಟನ್ ಕಬ್ಬಿಗೆ ₹5,500 ದರ ನಿಗದಿ ಮಾಡಬೇಕು, ಸರ್ಕಾರದಿಂದ ಡಿಜಿಟಲ್ ತೂಕದ ಯಂತ್ರ ಸ್ಥಾಪಿಸಬೇಕು. ತೂಕದಲ್ಲಿ ಪಾರದರ್ಶಕತೆ ಇರಬೇಕು, ಕಬ್ಬಿನ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಹಾಕಬೇಕು, ಕಬ್ಬಿನ ಇಳುವರಿಯಲ್ಲಿ ಪಾರದರ್ಶಕತೆ ತರಲು ಸಮಿತಿಯಲ್ಲಿ ರೈತ ಮುಖಂಡರು ಮತ್ತು ಸರ್ಕಾರದ ಅಧಿಕಾರಿಗಳು ಇರಬೇಕು. ಕಬ್ಬಿನ ಕಾರ್ಖಾನೆ ಆದಾಯದಲ್ಲಿ ಶೇ.75 ರೈತರಿಗೆ ಶೇ.25 ಕಾರ್ಖಾನೆಗೆ ಕೊಡಬೇಕು ಎಂದರು.
ರಾಜ್ಯ ಉಪಾಧ್ಯಕ್ಷ ಕಲ್ಲು ಸೊನ್ನದ ಮಾತನಾಡಿ, ವಾರ್ಷಿಕವಾಗಿ ಕಬ್ಬಿನಿಂದ ಸೃಷ್ಟಿಯಾಗುವ ಆದಾಯದಲ್ಲಿ ರೈತರಿಗೆ ನ್ಯಾಯಯುತವಾದ ಪಾಲು ಸಿಗಲೇಬೇಕು. ಪಾರದರ್ಶಕವಾಗಿ ಆಡಿಟ್ ಮಾಡುವ ಕೆಲಸ ಆಗಬೇಕು. ಡಾ.ಎಂ.ಎಸ್.ಸ್ವಾಮಿನಾಥನ್ ವರದಿ ಜಾರಿಯಾಗಬೇಕು. ಎಲ್ಲ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಆಗಬೇಕು. ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆಪ್ಟೆಂಬರ್
29ಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆ ಮುತ್ತಿಗೆ ಹಾಕಲಾಗುವುದು ಎಂದದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ ಕುಬಕಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮನಗೌಡ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಮಹಾದೇವ ಬನಸೋಡೆ, ಜಿಲ್ಲಾ ಕಾರ್ಯಾಧ್ಯಕ್ಷ ಪ್ರಕಾಶ ತೇಲಿ, ಸಂಗಪ್ಪ ಟಕ್ಕೆ, ಅಮರೇಶ ಬೈರಗೊಂಡ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.