ಕನ್ನಡಪ್ರಭ ವಾರ್ತೆ ಮೈಸೂರು
ನಗರದಲ್ಲಿ ಶನಿವಾರ ಸುದ್ದಿಗಾರರೊಡನೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಡೆಯನ್ನು ಜನ ಗಮನಿಸಿದ್ದಾರೆ. ರಾಜ್ಯಪಾಲರು ಸಂವಿಧಾನಾತ್ಮಕವಾಗಿ ತಮ್ಮ ಜವಾಬ್ದಾರಿ ನಿಭಾಯಿಸಿ ಹೋಗಿದ್ದಾರೆ. ಶಾಸಕರ ಗೂಂಡಾ ರೀತಿ ವರ್ತನೆ ಖಂಡನೀಯ ಎಂದರು.
ಚಾಮುಂಡಿಬೆಟ್ಟದ ಪ್ರಸಾದ್ ಯೋಜನೆ ಕಾಮಗಾರಿ ವಿಚಾರದ ನನ್ನ ಅಭಿಪ್ರಾಯವನ್ನು ನಾನು ತಿಳಿಸಿದ್ದೇನೆ. ಅಲ್ಲಿ ಗ್ರಾಮಸ್ಥರು ವಿರೋಧಿಸಿದ್ದಾರೆ. ಬೆಟ್ಟದ ಪಕ್ಕದಲ್ಲೇ ಕಾಮಗಾರಿ ನಡೆಯುತ್ತಿದೆ. ಸುತ್ತಮುತ್ತಲ ಕಾಮಗಾರಿಯಿಂದ ಗೋಪುರಕ್ಕೆ ತೊಂದರೆ ಆಗಬಹುದು. ಈ ಹಿಂದೆ ಯಾವ ರೀತಿ ಕಾಮಗಾರಿ ಮಾಡಿದ್ದಾರೆ ಎಂಬುದನ್ನು ತಿಳಿಯಲಿ. ನಂತರ ಕಾಮಗಾರಿ ಮುಂದುವರೆಸಲಿ, ಚಾಮುಂಡಿಬೆಟ್ಟದ ಅಭಿವೃದ್ಧಿ ಕೂಡ ಆಗಬೇಕಿದೆ ಎಂದರು.ನನ್ನ ಅನುಮತಿಗಿಂತ ಕಾಮಗಾರಿಗೆ ವಿರೋಧ ಮಾಡಿರುವವರ ಅನುಮತಿ ತುಂಬಾ ಮುಖ್ಯ. ಅಧಿಕಾರಿಗಳು ತರಾತುರಿಯಲ್ಲಿ ಕಾಮಗಾರಿ ಕೈಗೊಂಡಿರುವುದು ಯಾಕೆ ಎಂಬುದು ಗೊತ್ತಿಲ್ಲ. ಜನರ ಅಭಿಪ್ರಾಯಪಡೆದು ಕಾಮಗಾರಿ ಮುಂದುವರೆಸಲಿ ಎಂದರು.
ಮೈಸೂರು ಕೊಡಗು ಜನರ ಹಿತದೃಷ್ಟಿಯಿಂದ ಯೋಜನೆ ಅನುಷ್ಠಾನಗೊಳ್ಳಬೇಕು. ಮತ್ತೊಮ್ಮೆ ಕೇಂದ್ರದ ಗಮನ ಸೆಳೆಯುತ್ತೇನೆ. ರಾಜ್ಯ ಸರ್ಕಾರ ಕೂಡ ಇದಕ್ಕೆ ಸಹಕಾರ ನೀಡಲಿ ಎಂದರು.
ಬಳ್ಳಾರಿ ಗಲಾಟೆ ವಿಷಯದಲ್ಲಿ ಹೇಳುವುದಾದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಈ ಬಗ್ಗೆ ಹೋರಾಟ ಕೂಡ ನಡೆಸಲಾಗಿದೆ. ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡಲು ಸೂಕ್ತ ತೀರ್ಮಾನ ಕೈಗೊಳ್ಳಬೇಕು.