ಮತಗಳ್ಳತನ ವಿರುದ್ಧ ಸಹಿ ಸಂಗ್ರಹ

KannadaprabhaNewsNetwork |  
Published : Sep 29, 2025, 01:03 AM IST
ಕೆ ಕೆ ಪಿ ಸುದ್ದಿ 01ಯುವ ಕಾಂಗ್ರೆಸ್ ವತಿಯಿಂದ ಮತ ಗಳ್ಳತನ ವಿರುದ್ಧ ಸಹಿ ಸಂಗ್ರಹ ಕಾರ್ಯಕ್ರಮ.  | Kannada Prabha

ಸಾರಾಂಶ

ಬಿಜೆಪಿ ತಾನು ಸೋಲುವ ಕ್ಷೇತ್ರಗಳಲ್ಲಿ ತಮಗೆ ಬೇಕಾದ ಮತದಾರರನ್ನು ಸೇರಿಸಿ ತಮ್ಮ ಪಕ್ಷಕ್ಕೆ ಮತ ಬಾರದವರ ಹೆಸರುಗಳನ್ನು ಮತದಾರ ಪಟ್ಟಿಯಿಂದ ಕೈ ಬಿಡಿಸುವ ಕೆಲಸ ಮಾಡಿಸಿದೆ ಎಂದು ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಕನಕಪುರ

ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಮತಗಳ್ಳತನ ವಿರೋಧಿಸಿ ಪ್ರಜಾಪ್ರಭುತ್ವವನ್ನ ಉಳಿಸಿ ಅಭಿಯಾನದ ಸಹಿ ಕಾರ್ಯಕ್ರಮ ಸಾತನೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆಯಿತು.

ಸಾತನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾತನೂರು ನಾಗರಾಜು ಸಹಿ ಅಭಿಯಾನಕ್ಕೆ ಚಾಲನೆಯನ್ನು ನೀಡಿ ಮಾತನಾಡಿ, ಬಿಜೆಪಿ ಪಕ್ಷವು ರಾಜ್ಯದಲ್ಲೂ ಮತಗಳ್ಳತನ ಮಾಡಿದೆ. ತಾನು ಸೋಲುವ ಕ್ಷೇತ್ರಗಳಲ್ಲಿ ತಮಗೆ ಬೇಕಾದ ಮತದಾರರನ್ನು ಸೇರಿಸಿ ತಮ್ಮ ಪಕ್ಷಕ್ಕೆ ಮತ ಬಾರದವರ ಹೆಸರುಗಳನ್ನು ಮತದಾರ ಪಟ್ಟಿಯಿಂದ ಕೈ ಬಿಡಿಸುವ ಕೆಲಸ ಮಾಡಿಸಿದೆ ಎಂದು ಆರೋಪಿಸಿದರು.

ಮಹದೇವಪುರ ಕ್ಷೇತ್ರ ಒಂದರಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚಿನ ಮತದಾರರನ್ನು ಸೇರಿಸಿರುವುದು ಖಾತರಿಯಾಗಿದ್ದು ಇದರಿಂದಲೇ ಚುನಾವಣಾ ಆಯೋಗದಿಂದ ಮತ ಗಳ್ಳತನಕ್ಕೆ ಅವಕಾಶ ನೀಡಿರುವುದು ಗೊತ್ತಾಗುತ್ತದೆ ಎಂದು ದೂರಿದರು.

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಡಿ.ವಿಜಯದೇವ ಮಾತನಾಡಿ, ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿ ಚುನಾವಣಾ ಆಯೋಗದೊಂದಿಗೆ ಶಾಮಿಲಾಗಿ ಆಗಿ ಮತಗಳ್ಳತನ ಮಾಡಿ ಅಕ್ರಮವಾಗಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ಆರೋಪಿಸಿದರು.

ರಾಜ್ಯದ ಹಲವು ಕ್ಷೇತ್ರಗಳಲ್ಲಿ ಮತಗಟ್ಟೆವಾಗಿದ್ದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತಗಳ್ಳತನ ಆಗಿರುವ ಅನುಮಾನವಿದೆ, ಇದರ ಬಗ್ಗೆ ತನಿಖೆ ಆಗಬೇಕು ಮತಗಳ್ಳತನದ ವಿರುದ್ಧ ನಮ್ಮ ನಾಯಕರ ರಾಹುಲ್ ಗಾಂಧಿಯವರು ಹೋರಾಟ ನಡೆಸುತ್ತಿದ್ದು ನಮ್ಮ ರಾಜ್ಯ ದಲ್ಲೂ ಮತಗಳ್ಳತನ ವಿರುದ್ಧ ಹಾಗೂ ಸಂವಿಧಾನವನ್ನು ಉಳಿಸುವಂತೆ ಒತ್ತಾಯಿಸಿ, ಸಹಿ ಸಂಗ್ರಹ ಅಭಿಯಾನವನ್ನು ನಡೆಸುತ್ತಿದ್ದೇವೆ ಎಂದರು.

ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಕೆ.ಎಂ.ರಾಜೇಂದ್ರ, ಮುನಿಹುಚ್ಚೇಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಸಪ್ಪ, ಕೋಡಿಹಳ್ಳಿ ಜಿಲ್ಲಾ ಪಂಚಾಯಿತಿ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್, ಹೊಸದುರ್ಗ ಜಿಲ್ಲಾ ಪಂಚಾಯಿತಿ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಸಾತನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರುದ್ರೇಶ್ ಅರಕೆರೆ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಾದೇಶ್,ಮಾಜಿ ಸದಸ್ಯ ಸೋಮಶೇಖರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲೇಶ್,ಅಶೋಕ್, ಜಮೀರ್, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ರೂಪ, ಆರೋಗ್ಯ ಸಮಿತಿ ಸದಸ್ಯೆ ಉಷಾ, ಯೂತ್ ಕಾಂಗ್ರೆಸ್ ನ ಅಭಿಷೇಕ್, ಸಾಗರ್, ಕಿರಣ್, ಅಪ್ಪಿ, ಸಾಕಿಬ್ ಪಾಷಾ ಸೇರಿದಂತೆ ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು.

ಕೆ ಕೆ ಪಿ ಸುದ್ದಿ 01ಯುವ ಕಾಂಗ್ರೆಸ್ ವತಿಯಿಂದ ಮತ ಗಳ್ಳತನ ವಿರುದ್ಧ ಸಹಿ ಸಂಗ್ರಹ ಕಾರ್ಯಕ್ರಮ.

PREV

Recommended Stories

ಸಿಲೋಗನಾ ಹೆಸರಿನಲ್ಲಿ ವಿಜಯ ದಶಮಿ ಆಚರಿಸುವ ದನಗರ ಗೌಳಿಗರು
ಭಟ್ಕಳದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ