ದಾವಣಗೆರೆ: ಆಲ್ ಇಂಡಿಯಾ ಸ್ಟೂಡೆಂಟ್ಸ್ ಆರ್ಗನೈಜೇಷನ್(ಎಐಡಿಎಸ್‌ಒ) ಜಿಲ್ಲಾ ಸಮಿತಿಯಿಂದ ಶನಿವಾರ ನಗರದ ರೈಲ್ವೆ ನಿಲ್ದಾಣದ ಮುಂಭಾಗ ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ಖಂಡಿಸಿ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಬೇಲಿ ಎದ್ದು ಹೊಲ ಮೇಯ್ದಂತೆ ಸರ್ಕಾರವೇ ಶಾಲೆಗಳನ್ನು ನುಂಗುತ್ತಿದೆ. ರಾಜ್ಯವನ್ನಾಳುವ ಎಲ್ಲ ಪಕ್ಷದ ನಾಯಕರು ತಮ್ಮ ತಮ್ಮದೇ ಶಾಲೆಗಳಿಂದ ಹಿಡಿದು ವೈದ್ಯಕೀಯ ಕಾಲೇಜು ಎಂಜಿನಿಯರಿಂಗ್ ಕಾಲೇಜುಗಳನ್ನು ಹಾಗೂ ವಿಶ್ವವಿದ್ಯಾಲಯಗಳು ನಡೆಸುತ್ತಿದ್ದಾರೆ. ಈ ಅನ್ಯಾಯವನ್ನು ಪ್ರಶ್ನಿಸುವವರು ಯಾರು ? ಎಂದು ಹೇಳಿದರು.
ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯಿಂದ ಜಿಲ್ಲಾದ್ಯಂತ ಬೀದಿಗಳಲ್ಲಿ, ಬಸ್ ನಿಲ್ದಾಣ, ಹಳ್ಳಿಗಳಲ್ಲಿ, ಹಾಸ್ಟೆಲ್‌ಗಳು, ಶಾಲಾ-ಕಾಲೇಜುಗಳಲ್ಲಿ ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಜನಗಳು ಬಂದು ಸಹಿ ಹಾಕುವ ಮೂಲಕ ಹೋರಾಟವನ್ನು ಬೆಂಬಲಿಸುತ್ತಿದ್ದಾರೆ ಎಂದರು.ಈ ಸಂದರ್ಭದಲ್ಲಿ ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಟಿ.ಎಸ್.ಸುಮನ್, ಕಾರ್ಯಕರ್ತರಾದ ಗಂಗಾಧರ, ನಂದೀಶ, ಶ್ರೀನಿವಾಸ, ಸೃಷ್ಟಿ ಮುಂತಾದವರು ಭಾಗವಹಿಸಿದ್ದರು.