)
ಕನ್ನಡಪ್ರಭ ವಾರ್ತೆ ಅರಸೀಕೆರೆ
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರು ಕಪ್ಪು ಉಡುಪು ಧರಿಸಿ ಈ ಶಾಂತಿಪೂರ್ಣ ಪ್ರತಿರೋಧದಲ್ಲಿ ಭಾಗವಹಿಸಲಿದ್ದು, ಸಂಜೆ 4 ಗಂಟೆಗೆ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ, ಬಳಿಕ ಮೆರವಣಿಗೆಯ ಮೂಲಕ ಪಿ.ಪಿ. ವೃತ್ತಕ್ಕೆ ತೆರಳಿ ‘ಸರ್ವ ಜನಾಂಗದ ಶಾಂತಿಯ ದೇಶ’ ಎಂಬ ಘೋಷಣೆಯೊಂದಿಗೆ ಕ್ಯಾಂಡಲ್ ಬೆಳಗಿಸುವ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ತಾಲೂಕು ಮಟ್ಟದಲ್ಲಿ ಮಹಿಳೆಯರಲ್ಲಿ ಜಾಗೃತಿ ಮೂಡಿಸುವುದು ಹಾಗೂ ದೌರ್ಜನ್ಯದ ವಿರುದ್ಧ ಧ್ವನಿ ಎತ್ತುವ ಮನೋಭಾವ ಬೆಳೆಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು. ಮಹಿಳೆಯರು ಮೌನವಾಗಿ ಪಾಲ್ಗೊಳ್ಳುವ ಮೂಲಕ ಸಮಾಜಕ್ಕೆ ಗಟ್ಟಿ ಸಂದೇಶ ನೀಡಲಿದ್ದಾರೆ ಎಂದರು.ಇದೇ ಸರಣಿಯಲ್ಲಿ, ಮಾರ್ಚ್ 7ರಂದು ಹಾಸನದಲ್ಲಿ ಜಾಗೃತಿ ಮೆರವಣಿಗೆ ಮತ್ತು ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ. ಮಹಾರಾಜ ಪಾರ್ಕ್ ಪಶ್ಚಿಮ ದ್ವಾರದಿಂದ ಆರಂಭಗೊಳ್ಳುವ ಮೆರವಣಿಗೆ ಸಾಲಗಾಮೆ ರಸ್ತೆ, ಸಹ್ಯಾದ್ರಿ ವೃತ್ತ ಮತ್ತು ಆರ್.ಸಿ. ರಸ್ತೆ ಮೂಲಕ ಸಾಗಿ ಎನ್.ಆರ್. ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಮಹಿಳಾ ದೌರ್ಜನ್ಯ ವಿರೋಧಿ ಘೋಷಣೆಗಳನ್ನು ಕೂಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು ಎಂದು ವಿವರಿಸಿದರು.
ಸಭಾಂಗಣ ಸಮಿತಿ ಸಂಚಾಲಕಿ ನಿರ್ಮಲದೇವ್ ಮಾತನಾಡಿ, ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಇಂತಹ ಜಾಥಾ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಹಿಳೆಯರು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಹಾಗೂ ತಮ್ಮ ಮೇಲಿನ ದೌರ್ಜನ್ಯದ ವಿರುದ್ಧ ಧೈರ್ಯವಾಗಿ ಧ್ವನಿ ಎತ್ತಬೇಕು ಎಂದು ಕರೆ ನೀಡಿದರು.