ಕನ್ನಡಪ್ರಭ ವಾರ್ತೆ ಯಮಕನಮರಡಿ
ಈ ಹತ್ಯೆ ಅತ್ಯಂತ ಹೇಯ ಕೃತ್ಯ. ಸಮಾಜಘಾತುಕ ಶಕ್ತಿಗಳ ವಿರುದ್ಧ ಕಠಿಣ
ಕ್ರಮ ಜರುಗಿಸಿ ಕುಟುಂಬಸ್ಥರಿಗೆ ನ್ಯಾಯ ಒದಗಿಸಬೇಕು. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ರವಿಂದ್ರ ಹಂಜಿ ವಿಜಯ ಜಿಂಡ್ರಾಳಿ, ಶ್ರೀಕಾಂತ ನಿರ್ಮಳ, ಸಂತೋಷ ಖೋತ, ವಿಶ್ವನಾಥ ಅಕ್ಕತಂಗೇರಹಾಳ ಹಾಗೂ ಗ್ರಾಮದ ಬಜರಂಗ ದಳದ ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.
ಹೆಬ್ಬಾಳ: ನೇಹಾ ಹಿರೇಮಠ ಹತ್ಯೆ ಖಂಡಿಸಿ ಹೆಬ್ಬಾಳ ಗ್ರಾಮದಲ್ಲಿ ಶಾಂತಿಯುತ ಮೆರವಣಿಗೆ ನಡೆಸಲಾಯಿತು. ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳಲ್ಲಿ ನೇಹಾ ಹತ್ಯೆ ಖಂಡಿಸಿ ಮೌನಮೆರವಣಿಗೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಲಾಯಿತು.