ಬೇಡಿಕೆ ಈಡೇರಿಕೆಗಾಗಿ ಗ್ರಾಮಾಧಿಕಾರಿಗಳಿಂದ ಮೌನ ಪ್ರತಿಭಟನೆ

KannadaprabhaNewsNetwork |  
Published : Sep 27, 2024, 01:22 AM IST
26ಕೆಎಂಎನ್ ಡಿ27 | Kannada Prabha

ಸಾರಾಂಶ

ಕೇಂದ್ರ ಸ್ಥಾನಗಳಲ್ಲಿ ಸುಸಜ್ಜಿತ ಕಚೇರಿ, ಟೇಬಲ್, ಕುರ್ಚಿ, ಅಲ್ಮೆರಾ, ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಗೂಗಲ್ ಕ್ರೋಮ್ ಅಥವಾ ಲ್ಯಾಪ್ ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್‌ಗಳ ಮೂಲ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿದರು.

ಕನ್ನಡಪ್ರಭವಾರ್ತೆ ಶ್ರೀರಂಗಪಟ್ಟಣ

ಗ್ರಾಮಾಡಳಿತ ಅಧಿಕಾರಿಗಳ ಹುದ್ದೆಗಳಿಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನವನ್ನೇ ನೀಡುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಪಟ್ಟಣದಲ್ಲಿ ಕಪ್ಪು ಪಟ್ಟಿ ಧರಿಸಿ, ಮೌನ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ತಾಲೂಕು ಕಚೇರಿ ಎದುರು ರಾಜ್ಯ ಸಂಘದ ಕಾರ್ಯಕಾರಿಣಿ ಸಭೆಯ ನಿರ್ಣಯದಂತೆ ತಾಲೂಕು ಅಧ್ಯಕ್ಷ ರಮೇಶ್ ನೇತೃತ್ವದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಅನಿರ್ಧಿಷ್ಟಾವದಿ ಮುಷ್ಕರ ನಡೆಸಿದರು.

ಕಂದಾಯ ಇಲಾಖೆಯಿಂದ ನಿರಂತರವಾಗಿ ಅಭಿವೃದ್ಧಿಪಡಿಸಿರುವ ವೆಬ್ ಹಾಗೂ ಮೊಬೈಲ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಣೆ ಹಾಗೂ ಸಿ-ವೃಂದದ ನೌಕರರ ಶೇ.10ರಷ್ಟು ಕೆಲಸ ಜವಾಬ್ದಾರಿಯನ್ನು ಗ್ರಾಮ ಆಡಳಿತಾಧಿಕಾರಿಗಳು ವಹಿಸುತ್ತಿದ್ದು ವೇತನ ಶ್ರೇಣಿ ನೀಡಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸ್ಥಾನಗಳಲ್ಲಿ ಸುಸಜ್ಜಿತ ಕಚೇರಿ, ಟೇಬಲ್, ಕುರ್ಚಿ, ಅಲ್ಮೆರಾ, ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಗೂಗಲ್ ಕ್ರೋಮ್ ಅಥವಾ ಲ್ಯಾಪ್ ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್‌ಗಳ ಮೂಲ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿದರು.

ನಮ್ಮ ಮೇಲೆ ದೈಹಿಕ ಹಲ್ಲೆ, ಕೊಲೆ ಪ್ರಕರಣಗಳು ಈಗಾಗಲೇ ನಿರಂತವಾಗಿ ನಡೆಯುತ್ತಿವೆ. ಅರಣ್ಯ ಹಾಗೂ ಪೊಲೀಸ್ ಇಲಾಖೆಯಲ್ಲಿ ಆಪತ್ತಿನ ಭತ್ಯೆ 3 ಸಾವಿರ ರು. ನೀಡುವುದು. ಅಲ್ಲದೆ ಪ್ರಯಾಣ ಭತ್ಯೆ ಹೆಚ್ಚಿಸುವುದು. ಅಂತರ್ ಜಿಲ್ಲಾ ವರ್ಗಾವಣೆಗಾಗಿ ಹೊಸ ಮಾರ್ಗಸೂಚಿ ರಚಿಸುವುದು. ಪ್ರೋಟೋಕಾಲ್ ಕೆಲಸದಿಂದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೈಬಿಡುವಂತೆ ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಶಾಸಕ ರಮೇಶ ಬಂಡಿಸಿದ್ದೇಗೌಡ ಆಗಮಿಸಿ ನೌಕರರ ಸಮಸ್ಯೆಗಳನ್ನು ಆಲಿಸಿದರು. ಮನವಿ ಸ್ವೀಕರಿಸಿ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು. ಪ್ರತಿಭಟನೆಗೆ ಕಂದಾಯ ಇಲಾಖಾ ನೌಕರರ ಸಂಘದ ತಾಲೂಕು ಅಧ್ಯಕ್ಷ ರೇವಣ್ಣ ನೇತೃತ್ವದಲ್ಲಿ ಬಾಹ್ಯ ಬೆಂಬಲ ವ್ಯಕ್ತಪಡಿಸಿದರು.

ಸಂಘದ ಕಾರ್ಯದರ್ಶಿ ಮಹೇಂದ್ರ, ಖಜಾಂಚಿ ಉಮೇಶ್ ಸೇರಿ ತಾಲೂಕಿನ ಎಲ್ಲಾ ಗ್ರಾಮ ಆಡಳಿತಾಧಿಕಾರಿಗಳು ಹಾಜರಿದ್ದರು.

PREV

Recommended Stories

‘ಚಾಮುಂಡೇಶ್ವರಿ ಬಗ್ಗೆ ಬಾನು ತಮ್ಮ ಗೌರವ ಸ್ಪಷ್ಟಪಡಿಸಲಿ’ : ವಿಜಯೇಂದ್ರ
ಗ್ಯಾರಂಟಿ ಯೋಜನೆಗಳ ಜತೆ ರಾಜ್ಯವು ಅಭಿವೃದ್ಧಿ