10ರಂದು ಬೆಳಗಾವಿಯಲ್ಲಿ ಮೌನ ಪ್ರತಿಭಟನೆ: ನಂದಿಹಳ್ಳಿ ಹಾಲಪ್ಪ

KannadaprabhaNewsNetwork |  
Published : Dec 09, 2025, 01:15 AM IST
08ಕೆಒಟಿ05ಕೊಟ್ಟೂರಿನ ವೀರಶೈವ ಪತ್ತಿನ ಸಹಕಾರ ಸಂಘ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಮಾತನಾಡಿದರು. | Kannada Prabha

ಸಾರಾಂಶ

ಲಾಠಿ ಚಾರ್ಜ್ ಘಟನೆಗೆ ವರ್ಷವಾದ ಹಿನ್ನೆಲೆಯಲ್ಲಿ ಡಿ. 10ರಂದು ಬೆಳಗಾವಿಯಲ್ಲಿ ಕರಾಳ ದಿನವನ್ನಾಗಿ ಆಚರಿಸಿ ಮೌನ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಶಾಸಕ ಹಾಗೂ ಪಂಚಮಸಾಲಿ ಸಮಾಜದ ರಾಜ್ಯ ಮುಖಂಡ ನಂದಿಹಳ್ಳಿ ಹಾಲಪ್ಪ ಹೇಳಿದರು.

ಕೊಟ್ಟೂರು: ಕಳೆದ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಮೀಸಲಾತಿ ಹೋರಾಟ ಮಾಡುತ್ತಿದ್ದ ಸಮಾಜದ ಹೋರಾಟಗಾರರ ಮೇಲೆ ಸರಕಾರ ನಡೆಸಿದ್ದ ಲಾಠಿ ಚಾರ್ಜ್ ಘಟನೆಗೆ ವರ್ಷವಾದ ಹಿನ್ನೆಲೆಯಲ್ಲಿ ಡಿ. 10ರಂದು ಬೆಳಗಾವಿಯಲ್ಲಿ ಕರಾಳ ದಿನವನ್ನಾಗಿ ಆಚರಿಸಿ ಮೌನ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಶಾಸಕ ಹಾಗೂ ಪಂಚಮಸಾಲಿ ಸಮಾಜದ ರಾಜ್ಯ ಮುಖಂಡ ನಂದಿಹಳ್ಳಿ ಹಾಲಪ್ಪ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯದ ಹಕ್ಕಾಗಿದ್ದ 2ಎ ಮೀಸಲಾತಿಗಾಗಿ ಅನೇಕ ಹೋರಾಟ, ಮನವಿ ನೀಡಿದ್ದರೂ ಸರಕಾರ ಸ್ಪಂದಿಸದೇ ಇದ್ದಾಗ, ಕಳೆದ ವರ್ಷದ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಕೂಡಲ ಸಂಗಮ ಪೀಠದ ಶ್ರೀ ಬಸವಜಯ ಮೃತ್ಯುಂಜಯ ನೇತೃತ್ವದಲ್ಲಿ ಇಡೀ ಪಂಚಮಸಾಲಿ ಸಮಾಜದವರು ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆಯನ್ನು ತಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಏಕಾಏಕಿ ಲಾಠಿ ಚಾರ್ಜ್ ನಡೆಸಿ ಅನೇಕರಿಗೆ ತೀವ್ರ ಗಾಯಗಳಾಗಲು ಕಾರಣವಾಗಿತ್ತು. ಈ ಘಟನೆ ನಡೆದು ವರ್ಷ ಸಂದಿಸುತ್ತಿರುವ ಪ್ರಯುಕ್ತ ಡಿ. 10ರಂದು ಮೌನವಾಗಿ ಕರಾಳ ದಿನವನ್ನಾಗಿ ಆಚರಿಸಲಾಗುವುದು ಎಂದರು.

ಇದರಲ್ಲಿ ಪಂಚಮಸಾಲಿ ಹರಿಹರ ಮತ್ತು ಕೂಡಲ ಸಂಗಮ ಪೀಠದ ಉಭಯ ಜಗದ್ಗುರುಗಳು ಪಾಲ್ಗೊಳ್ಳವರು. ಸ್ವಾಮೀಜಿಯ ಪ್ರತಿಭಟನೆಗೆ ಇಡೀ ರಾಜ್ಯದ ಪಂಚಮಸಾಲಿ ಜನರು ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ವಿಜಯನಗರ ಜಿಲ್ಲೆಯಿಂದಲೂ ಸಮಾಜದ ಮುಖಂಡರು ಸೇರಿ ಅನೇಕರು ಬೆಳಗಾವಿಗೆ ತೆರಳುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಮೀಸಲಾತಿ ನೀಡುವುದಿಲ್ಲ ಎಂದು ಸ್ಪಷ್ಪವಾಗಿ ಹೇಳಬಹುದಿತ್ತು, ಅದರ ಬದಲು ಲಾಠಿ ಚಾರ್ಜ್ ಮಾಡಿಸಿದ್ದರು. ಅವರು ಅಧಿಕಾರದಲ್ಲಿ ಇರುವರೆಗೂ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೇಳುವುದಿಲ್ಲ ಎಂದು ನಿರ್ಧರಿಸಿದ್ದೇವೆ ಎಂದು ಹೇಳಿದರು.

ಪಂಚಮಸಾಲಿ ತಾಲೂಕು ಮುಖಂಡ ಪಿ. ಭರಮನಗೌಡ ಮಾತನಾಡಿದರು. ಪಂಚಮಸಾಲಿ ತಾಲೂಕು ಅಧ್ಯಕ್ಷ ಚಾಪಿ ಚಂದ್ರಪ್ಪ, ಮುಖಂಡರಾದ ಅಂಗಡಿ ಪಂಪಾಪತಿ, ನಂಜನಗೌಡ, ಕೆ. ವಿವೇಕಾನಂದ, ಈಶ್ವರಪ್ಪ ತುರಕಾಣಿ, ಮಂಜುನಾಥ, ಮುದುಕಪ್ಪ ಸೇರಿ ಅನೇಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯೋಗಾನಂದಗೆ ಯುವ ವಿಜ್ಞಾನ ಪ್ರಶಸ್ತಿ ಪ್ರದಾನ
ಆರೈಕೆದಾರರಿಗೆ ಕಾಸಿಲ್ಲದೇ ಮುಚ್ಚಿದ ಕೂಸಿನ ಮನೆ!