ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಶಂಕರಾಚಾರ್ಯರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಪೂಜೆ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಸೇರಿದಂತೆ ಇತರೆ ಅಧಿಕಾರಿಗಳು ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ಶಂಕರಾಚಾರ್ಯರ ಜೀವನ, ತತ್ವ ಮತ್ತು ಭಾರತೀಯ ಸಂಸ್ಕೃತಿಗೆ ನೀಡಿದ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ. ಪ್ರಭಾಕರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ.ಜಿ. ಮನ್ನಿಕೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಜಿ.ಎಸ್. ಹಿತ್ತಲಮನಿ, ಆಯುಷ ಇಲಾಖೆ ಅಧಿಕಾರಿ ಹಿರೇಮಠ, ಶಿಶು ಅಭಿವೃದ್ದಿ ಯೋಜನಾಧಿಕಾರಿ ರಮೇಶ ಸೂಳಿಕೇರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.