ಕೊಪ್ಪಳ:
ಸರಳತೆ ಮತ್ತು ಶ್ರದ್ಧೆ ಮೈಗೂಡಿಸಿಕೊಂಡರೆ ಸಾಧನೆಯ ಮೆಟ್ಟಿಲು ಏರಬಹುದು ಎಂಬುದಕ್ಕೆ ಡಾ. ಶ್ರೀನಿವಾಸ ಹ್ಯಾಟಿ ಸಾಕ್ಷಿಯಾಗಿದ್ದಾರೆ ಎಂದು ಸಂಸದ ರಾಜಶೇಖರ ಹಿಟ್ನಾಳ್ ಹೇಳಿದರು.ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ರಾಜ್ಯ ಶಾಖೆ ಉಪ ಸಭಾಪತಿಯಾಗಿ ಆಯ್ಕೆಯಾಗಿರುವ ಡಾ. ಶ್ರೀನಿವಾಸ ಹ್ಯಾಟಿ ಅವರಿಗೆ ನಗರದ ಬಾಲಾಜಿ ಪಂಕ್ಷನ್ ಹಾಲ್‌ನಲ್ಲಿ ಸ್ನೇಹ ಬಳಗದಿಂದ ಭಾನುವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಜೀವನದಲ್ಲಿ ಸರಳತೆಯೊಂದಿಗೆ ಶ್ರದ್ಧೆ ಮೈಗೂಡಿಸಿಕೊಂಡರೆ ಸಾಧನೆ ಒಲಿಯಲಿದೆ ಎಂದು ಭಗತ್ ಸಿಂಗ್ ಹೇಳಿದ್ದಾರೆ. ಅವರಂತೆ ಇವರು ಬದುಕು ಸಾಗಿಸುತ್ತಿದ್ದಾರೆ ಎಂದರು.ಮಾಜಿ ಸಂಸದ ಸಂಗಣ್ಣ ಕರಡಿ ಮಾತನಾಡಿ, ಡಾ. ಶ್ರೀನಿವಾಸ ಅವರು 25 ವರ್ಷಗಳಿಂದ ವೈದ್ಯಕೀಯ, ಶಿಕ್ಷಣ ಹಾಗೂ ರೆಡ್‌ಕ್ರಾಸ್ ಸಂಸ್ಥೆಯ ಮೂಲಕ ಸಮಾಜಮುಖಿ ಕೆಲಸ ಮಾಡುತ್ತಿದ್ದಾರೆ. ನಾವೆಲ್ಲ ಸಮಾಜದಿಂದ ನಮಗೇನು ಸಿಕ್ಕಿದೆ ಎಂದುಕೊಳ್ಳುತ್ತೇವೆ. ಆದರೆ, ಸಮಾಜಕ್ಕೆ ನಮ್ಮ ಕೊಡುಗೆ ಏನು ಎಂಬುದನ್ನು ಮನನ ಮಾಡಿಕೊಳ್ಳಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿ, ಡಾ. ಶ್ರೀನಿವಾಸ ಅವರಲ್ಲಿ ಸೇವಾ ಮನೋಭಾವವಿದೆ. ಹೀಗಾಗಿ ವೈದ್ಯಕೀಯ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದರು.ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಸವರಾಜ ಕ್ಯಾವಟರ್ ಮಾತನಾಡಿ, ಹ್ಯಾಟಿ ಅವರನ್ನು ಬಹಳ ಹತ್ತಿರದಿಂದ ನೋಡಿದ್ದೇನೆ. ಅವರಲ್ಲಿರುವ ಸಾಮಾಜಿಕ ಕಳಕಳಿ ಅಪಾರವಿದೆ ಎಂದರು.ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ ಮಾತನಾಡಿ, ಕೇವಲ ವೈದ್ಯರಾಗಿ ಅಷ್ಟೇ ಅಲ್ಲದೆ ಸಮಾಜಮುಖಿಯಾಗಿಯೂ ಸಾಕಷ್ಟು ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು.ಸರ್ಕಾರಿ ಅಭಿಯೋಜಕರಾದ ಬಿ.ಎಸ್. ಪಾಟೀಲ್ ತಾವರಗೇರಾ, ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಉಪಾಧ್ಯಕ್ಷ ಶಂಭುಲಿಂಗನಗೌಡ ಹಲಗೇರಿ, ನೌಕರರ ಸಂಘದ ಅಧ್ಯಕ್ಷ ನಾಗರಾಜ ಜುಮ್ಮಣ್ಣನವರ, ರೆಡ್‌ಕ್ರಾಸ್ ಸಂಸ್ಥೆಯ ಮಾಜಿ ಉಪ ಸಭಾಪತಿ ಅಪ್ಪಾರಾವ ಅಕ್ಕೋಣಿ, ಸ್ನೇಹ ಬಳಗದ ಶರಣಪ್ಪ ಬಾಚಲಾಪುರ, ರಾಜೇಶ ಯಾವಗಲ್, ಡಾ. ಶಿವನಗೌಡ ಪಾಟೀಲ್ ಮಾತನಾಡಿದರು. ರೆಡ್‌ಕ್ರಾಸ್‌ನ ಜಿಲ್ಲಾ ಶಾಖೆಯ ಸಭಾಪತಿ ಸೋಮರಡ್ಡಿ ಅಳವಂಡಿ ಪ್ರಾಸ್ತಾವಿಕ ಮಾತನಾಡಿದರು. ಡಾ. ಎಸ್. ಕರಮುಡಿ ಕಾರ್ಯಕ್ರಮ ನಿರೂಪಿಸಿದರು. ಶಿವಕುಮಾರ ಕೂಕನೂರು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹುತಾತ್ಮರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಈ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ ಗುಪ್ತಾ, ಹಿರಿಯ ಸಾಹಿತಿ ಎಚ್.ಎಸ್. ಪಾಟೀಲ್, ಜಿಪಂ ಮಾಜಿ ಅಧ್ಯಕ್ಷ ಎಚ್.ಎಲ್. ಹಿರೇಗೌಡ್ರು, ಪ್ರಥಮ ದರ್ಜೆ ಗುತ್ತಿಗೆದಾರ ಬಸವರಾಜ ಪುರದ, ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ, ಪ್ರಭು ಹೆಬ್ಬಾಳ, ಪ್ರಭಂಜನ ಮೆಹತಾ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಅನ್ನಪೂರ್ಣಾ ಸದಾಶಿವ, ಮಂಜುನಾಥ ಡೊಳ್ಳಿನ ಇದ್ದರು.ನಾನು ಇನ್ನೂ ಸಮಾಜಮುಖಿಯಾಗಿ ಕೆಲಸ ಮಾಡುವುದು ಬಹಳಷ್ಟಿದೆ. ಸ್ನೇಹಿತರ ಬಳಗ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ನನ್ನಲ್ಲಿ ಮತ್ತಷ್ಡು ಜವಾಬ್ದಾರಿ ಹೆಚ್ಚಿಸಿದೆ. ಮುಂದಿನ ದಿನಗಳಲ್ಲಿ ರೆಡ್‌ಕ್ರಾಸ್ ಮೂಲಕ ಕೊಪ್ಪಳಕ್ಕೆ ಥಲಾಸ್ಸೇಮಿಯಾ ಹಾಗೂ ಎಸ್‌ಡಿಪಿ ಸೆಂಟರ್ ತರುವ ಉದ್ದೇಶವಿದೆ. ಇಂತಹ ಎಲ್ಲ ಸಮಾಜಮುಖಿ ಕೆಲಸಗಳಿಗೆ ತಮ್ಮ ಸಹಕಾರವಿರಲಿ.ಡಾ. ಶ್ರೀನಿವಾಸ ಹ್ಯಾಟಿ ಉಪ ಸಭಾಪತಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ರಾಜ್ಯ ಶಾಖೆ