ಸಿಮ್ಸ್ ಆಸ್ಪತ್ರೆ ಡಾ.ಟಿ.ಕಿರಣ್ ವಜಾ ಮಾಡಿ

KannadaprabhaNewsNetwork |  
Published : Jul 19, 2025, 02:00 AM IST
18ಸಿಎಚ್‌ಎನ್52ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಭೀಮ್ ರಾವ್ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಗಣೇಶ್ ಪ್ರಸಾದ್ ಮಾತನಾಡಿದರು. ಜಯಶಂಕರ್,  ಅಮಿತ್ , ಶೇಷ, ನವೀನ್ ಇದ್ದರು. | Kannada Prabha

ಸಾರಾಂಶ

ಚಾಮರಾಜನಗರದ ಮೆಡಿಕಲ್ ಆಸ್ಪತ್ರೆಯ ಸಾಮಾನ್ಯ ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿರುವ ಡಾ.ಟಿ.ಕಿರಣ್ ಅವರನ್ನು ಕರ್ತವ್ಯದಿಂದ ವಜಾ ಮಾಡಬೇಕು ಎಂದು ಭೀಮ್ ರಾವ್ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಗಣೇಶ್ ಪ್ರಸಾದ್ ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ, ಚಾಮರಾಜನಗರಚಾಮರಾಜನಗರದ ಮೆಡಿಕಲ್ ಆಸ್ಪತ್ರೆಯ ಸಾಮಾನ್ಯ ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿರುವ ಡಾ.ಟಿ.ಕಿರಣ್ ಅವರನ್ನು ಕರ್ತವ್ಯದಿಂದ ವಜಾ ಮಾಡಬೇಕು ಎಂದು ಭೀಮ್ ರಾವ್ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಗಣೇಶ್ ಪ್ರಸಾದ್ ಆಗ್ರಹಿಸಿದರು.ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಕಿರಣ್ ಆಸ್ಪತ್ರೆಗೆ ಬಂದು ನಾಲ್ಕು ವರ್ಷವಾಗಿದ್ದು, ಬಂದ ದಿನದಿಂದಲೂ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ, ಅವರು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಹಾಜರಾಗುತ್ತಿಲ್ಲ. ಇದರಿಂದ ರೋಗಿಗಳಿಗೆ ತೊಂದರೆಯಾಗುತ್ತಿದ್ದು ಈ ಸಂಬಂಧ ಡೀನ್ ಅವರಿಗೂ ದೂರು ನೀಡಲಾಗಿದೆ ಎಂದರು.ಶಸ್ತ್ರ ಚಿಕಿತ್ಸಾ ವಿಭಾಗಕ್ಕೆ ಆಧುನಿಕ ಉಪಕರಣಗಳನ್ನು ನೀಡಲಾಗಿದ್ದು ಇದನ್ನು ಡಾ.ಕಿರಣ್ ಸಮರ್ಪಕವಾಗಿ ಬಳಕೆ ಮಾಡುತ್ತಿಲ್ಲ. ಈ ಸಂಬಂಧ ಡೀನ್ ಅವರು ಕೂಡ ನೋಟಿಸ್ ನೀಡಿದ್ದಾರೆ. ಅಲ್ಲದೇ ರೋಗಿಗಳನ್ನು ನೋಡದೇ ಸುಮ್ಮನೇ ಅಡ್ಡಾಡುತ್ತಿರುವ ಕಿರಣ್ ಅವರು ಆಸ್ಪತ್ರೆಗೆ ಅವಶ್ಯಕತೆ ಇರುವುದಿಲ್ಲ ಎಂದರು.ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರಿಗೂ ಮನವಿ ಸಲ್ಲಿಸಲಾಗಿದ್ದು ಕೂಡಲೇ ಸಂಬಂಧಪಟ್ಟವರು ಡಾ.ಕಿರಣ್ ಅವರನ್ನು ಸೇವೆಯಿಂದ ವಜಾ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸೇನೆ ವತಿಯಿಂದ ಆಸ್ಪತ್ರೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಯಶಂಕರ್, ಅಮಿತ್ , ಶೇಷ, ನವೀನ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಳದಿ ಮಾರ್ಗ: 9 ಮೆಟ್ರೋ ನಿಲ್ದಾಣ ಬಳಿ ಹೊಸ ಬಿಎಂಟಿಸಿ ನಿಲ್ದಾಣ
ವಿವಾಹ ಪವಿತ್ರವಾದ ಶಾಶ್ವತ ಸಮ್ಮಿಲನ : ಹೈಕೋರ್ಟ್‌