ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯಗಳು ಅವರ ವಿರುದ್ಧ ತೀರ್ಪು ಪ್ರಕಟಿಸಿದ್ದರೂ ದುರಹಂಕಾರದ ನಡೆ ಪ್ರದರ್ಶಿಸಿದ್ದರು. ಆದರೆ ಸೋಮವಾರ ಇಡಿ ಪ್ರಕರಣ ದಾಖಲಿಸಿಕೊಂಡಿದ್ದರಿಂದ ಅಂದೇ ರಾತ್ರಿ ಸಿಎಂ ಪತ್ನಿ ಪಾರ್ವತಿ ಅವರು ಮುಡಾದ ೧೪ ನಿವೇಶನಗಳನ್ನು ವಾಪಸ್ ಮಾಡಿರುವುದರಿಂದ ಸಿಎಂ ಸಿದ್ದರಾಮಯ್ಯ ತಪ್ಪು ಎಸಗಿರುವುದು ಸಾಬೀತಾಗಿದೆ. ಹೀಗಾಗಿ ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಚಾರಣೆ ಎದುರಿಸಲಿ ಎಂದು ಶಾಸಕ ಸಿದ್ದು ಸವದಿ ಆಗ್ರಹಿಸಿದರು.
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ
ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯಗಳು ಅವರ ವಿರುದ್ಧ ತೀರ್ಪು ಪ್ರಕಟಿಸಿದ್ದರೂ ದುರಹಂಕಾರದ ನಡೆ ಪ್ರದರ್ಶಿಸಿದ್ದರು. ಆದರೆ ಸೋಮವಾರ ಇಡಿ ಪ್ರಕರಣ ದಾಖಲಿಸಿಕೊಂಡಿದ್ದರಿಂದ ಅಂದೇ ರಾತ್ರಿ ಸಿಎಂ ಪತ್ನಿ ಪಾರ್ವತಿ ಅವರು ಮುಡಾದ ೧೪ ನಿವೇಶನಗಳನ್ನು ವಾಪಸ್ ಮಾಡಿರುವುದರಿಂದ ಸಿಎಂ ಸಿದ್ದರಾಮಯ್ಯ ತಪ್ಪು ಎಸಗಿರುವುದು ಸಾಬೀತಾಗಿದೆ. ಹೀಗಾಗಿ ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಚಾರಣೆ ಎದುರಿಸಲಿ ಎಂದು ಶಾಸಕ ಸಿದ್ದು ಸವದಿ ಆಗ್ರಹಿಸಿದರು.ಈ ಕುರಿತು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೨೦೧೧ರಲ್ಲಿ ಅಂದಿನ ಸಿಎಂ ಯಡಿಯೂರಪ್ಪನವರಿಗೆ ಬುದ್ಧಿವಾದ ಹೇಳಿದ್ದ ಸಿದ್ಧರಾಮಯ್ಯನವರ ಹಿಂದಿನ ವಿಡಿಯೋ ಇದೀಗ ವೈರಲ್ ಆಗಿದೆ. ಇದರಿಂದ ಗೊತ್ತಾಗುತ್ತದೆ. ಸಿಎಂ ಆಗೋದು, ಈಗೊಂದು ಮಾತನಾಡುತ್ತಾರೆ. ಸಮಯಕ್ಕೆ ತಕ್ಕಂತೆ ಮಾತನಾಡುತ್ತಾರೆ ಎಂದು. ಇದೀಗ ಸಿದ್ದರಾಮಯ್ಯ ನೈತಿಕತೆ ಇದ್ದಲ್ಲಿ ಸಿಎಂ ಹುದ್ದೆಗೆ ರಾಜೀನಾಮೆ ನೀಡಿ ವಿಚಾರಣೆ ಎದುರಿಸಬೇಕು. ಇಲ್ಲವಾದಲ್ಲಿ ತಮಗೊಂದು ನ್ಯಾಯ ಇನ್ನೊಬ್ಬರಿಗೊಂದು ನ್ಯಾಯ ಎಂಬಂತೆ ನಡೆದುಕೊಳ್ಳಬಾರದು ಎಂದು ಸಲಹೆ ನೀಡಿದರು.
---
ಸೈಟ್ ವಾಪಸ್ ನೀಡಿದ್ದು ಪ್ರಾಮಾಣಿಕತೆಯ ನಿದರ್ಶನ
ರಬಕವಿ-ಬನಹಟ್ಟಿ: ತಮ್ಮ ಪತಿಗೆ ಯಾವುದೇ ಕಪ್ಪು ಚುಕ್ಕೆಗಳು ಬರಬಾರದು ಎಂಬ ಕಾರಣಕ್ಕೆ ಬಿಜೆಪಿ ಆಡಳಿತದಲ್ಲಿ ಹಂಚಿಕೆಯಾಗಿದ್ದ ಮುಡಾ ಸೈಟುಗಳನ್ನು ಸಿಎಂ ಪತ್ನಿ ಪಾರ್ವತಿ ಅವರು ವಾಪಸ್ ಮಾಡಿರುವುದು ಪ್ರಾಮಾಣಿಕತೆಯ ನಿದರ್ಶನವಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಭದ್ರನ್ನವರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಾನೂನು ಸಮರ ಜಾರಿಯಲ್ಲಿರುವಾಗಲೇ ತಮ್ಮ ಹಕ್ಕನ್ನು ಮರೆತು ಪತಿಯ ನೈತಿಕತೆಗೆ ಬೆಂಬಲಿಸಿದ ಪಾರ್ವತಿಯವರು ಸಿದ್ದರಾಮಯ್ಯ ಪ್ರತಿಷ್ಠೆಗೆ ಮೆರಗು ತಂದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ, ಪಕ್ಷದ ವರಿಷ್ಠರ ಬೆಂಬಲದ ನಡುವೆ ಸಿಎಂ ಹುದ್ದೆಯಲ್ಲಿ ಮುಂದುವರಿದು ಮುಡಾ ಹಗರಣದ ಸಮಗ್ರ ತನಿಖೆ ನಡೆಸಿ ಯಾರ‍್ಯಾರು ಪ್ರಭಾವಿಗಳು ಫಲಾನುಭವಿಗಳಾಗಿದ್ದಾರೆ ಎಂಬುವುದನ್ನು ಸಿದ್ದರಾಮಯ್ಯ ರಾಜ್ಯದ ಜನರೆದುರು ಇಡಬೇಕು. ನಿಷ್ಕಳಂಕಿತರಾಗಿ ತಮ್ಮ ಹುದ್ದೆಯ ಘನತೆ ಹೆಚ್ಚಿಸುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.