ಕನ್ನಡಪ್ರಭ ವಾರ್ತೆ ಕೊಲ್ಹಾರ
ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡದೆ ಸರ್ವರು ಸಹಕಾರ ನೀಡಬೇಕಿದೆ. ಬ.ಬಾಗೇವಾಡಿ ಮತಕ್ಷೇತ್ರದಲ್ಲಿ ಬರುವ ಕೊಲ್ಹಾರ ತಾಲೂಕಿಗೆ ಉಳಿದೆರಡು ತಾಲೂಕುಗಳಿಗಿಂತ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಅಲ್ಲದೆ, ಶೀಘ್ರದಲ್ಲಿಯೇ ಕೊಲ್ಹಾರ ಪಟ್ಟಣದಲ್ಲಿ ಪ್ರಜಾಸೌಧ ಕಟ್ಟಡದ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.ಪಟ್ಟಣ ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ಹಮ್ಮಿಕೊಂಡ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ ಹಾಗೂ ತಾಲೂಕು ಪಂಚಾಯತಿ 2023-24 ನೇ ಸಾಲಿನಲ್ಲಿ ಆಯ್ಕೆಯಾದ ವಿವಿಧ ಫಲಾನುಭವಿಗಳಿಗೆ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕು ಕಟ್ಟಿಕೊಳ್ಳಲು ಒಂದಲ್ಲಾ ಒಂದು ರೀತಿಯಲ್ಲಿ ಸಹಾಯ ಮಾಡುತ್ತವೆ. ತಾಲ್ಲೂಕು ಪಂಚಾಯಿತಿ ಅಭಿವೃದ್ಧಿ ಅನುದಾನ ದಿಂದ ಫಲಾನುಭವಿಗಳಿಗೆ ಸಾಮಗ್ರಿಗಳನ್ನು ನೀಡಿ ನೀವು ಎಲ್ಲರಂತೆ ಬದುಕಲು ಈ ಸಾಮಗ್ರಿಗಳು ನೆರವಾಗುತ್ತವೆ ಎಂದು ತಿಳಿಸಿದರು.
ಸಮಾಜದ ಕಟ್ಟ ಕಡೆಯ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ನ್ಯಾಯ ಒದಗಿಸುವ ಕಾರ್ಯ ಈ ಗ್ಯಾರಂಟಿ ಸಮಿತಿ ಮಾಡುತ್ತಿದೆ. ಅರ್ಹ ಫಲಾನುಭವಿಗಳಿಗೆ ನೇರವಾಗಿ ಪಂಚ ಗ್ಯಾರಂಟಿ ಯೋಜನೆಗಳು ತಲುಪಿಸುವ ಮೂಲಕ ಚುನಾವಣೆಯ ಮುಂಚೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸಿದ್ದಾಗಿ ತಿಳಿಸಿದರು.ಪಂಚ ಗ್ಯಾರಂಟಿ ಯೋಜನೆಗಳ ತಾಲೂಕಾಧ್ಯಕ್ಷ ಸಂತೋಷ ಗಣಾಚಾರಿ ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಕಡುಬಡವರ ಬದುಕು ಹಸನಾಗಿದೆ ಎಂದರು. ಗ್ಯಾರಂಟಿ ಯೋಜನೆಗಳು ಬಡವರ ಕೈ ಹಿಡಿದಿವೆ ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆಯ ಸದುಪಯೋಗ ಪಡೆದುಕೊಂಡ ಅನೇಕ ಮಹಿಳೆಯರು ಸ್ವಾವಲಂಭನೆಯ ಬದುಕು ಕಟ್ಟಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬಡವರ ಪರ ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ ಎಂದರು.
ಕೊಲ್ಹಾರ ತಾಲ್ಲೂಕು ಔದ್ಯೋಗಿಕ ಕ್ಷೇತ್ರದಲ್ಲಿ ಕ್ರಾಂತಿಯಾಗಲು ತಾಲ್ಲೂಕಿನ ಮುಳವಾಡ ಕೈಗಾರಿಕಾ ಪ್ರದೇಶದ ಕೊಡುಗೆ ಅಪಾರವಾಗಿದ್ದು ಈ ನೂತನ ತಾಲ್ಲೂಕಿಗೆ ಪ್ರಜಾಸೌಧ ಶೀಘ್ರದಲ್ಲಿಯೇ ಭೂಮಿ ಪೂಜೆಯನ್ನು ನೇರವೇರಿಸಲಾಗುವುದು ಎಂದು ಹೇಳಿದರು.ದಿಗಂಬರೇಶ್ವರ ಮಠದ ಕಲ್ಲೀನಾಥ ದೇವರು, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಇಲಿಯಾಸ ಬೋರಾಮಣಿ ಸಹಿತ ಇನ್ನಿತರರು ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಕಲ್ಲು ದೇಸಾಯಿ, ತಾನಾಜಿ ನಾಗರಾಳ, ಸಿ.ಎಸ್ ಗಿಡ್ಡಪ್ಪಗೋಳ, ಬ್ಲಾಕ್ ಕಾಂಗ್ರೆಸ ಅಧ್ಯಕ್ಷ ಆರ್.ಬಿ ಪಕಾಲಿ, ತಹಸೀಲ್ದಾರ್ ಎಸ್.ಎಸ್ ನಾಯಕಲಮಠ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ ಮದ್ದಿನ, ಪಪಂ ಮುಖ್ಯಾಧಿಕಾರಿ ಉಮೇಶ ಚಲವಾದಿ ಸಹಿತ ಪಂಚ ಗ್ಯಾರಂಟಿ ಸಮಿತಿಯ ಪದಾಧಿಕಾರಿಗಳು, ಪ.ಪಂ ಸದಸ್ಯರು ಹಾಗೂ ಇನ್ನಿತರರು ಇದ್ದರು.