ಬೆಳೆಹಾನಿ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ

KannadaprabhaNewsNetwork |  
Published : Aug 08, 2026, 02:15 AM IST
ಅಳ್ನಾವರದಲ್ಲಿ ಬರ ಪರಿಸ್ಥಿತಿ ಸಭೆ ಬಳಿಕ ಸಚಿವ ಸಂತೋಷ ಲಾಡ್‌ ಅವರು ತಾಲೂಕಿನ ಬೆಣಚಿ ಗ್ರಾಮ ವ್ಯಾಪ್ತಿಯ ಗೋವಿನ ಜೋಳ ಹೊಲಕ್ಕೆ ಭೇಟಿ ನೀಡಿ ಬೆಳೆ ಪರಿಶೀಲಿಸಿದರು. | Kannada Prabha

ಸಾರಾಂಶ

ಅಳ್ನಾವರ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ಬರ ಪರಿಸ್ಥಿತಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಬೆಳೆಗಳು ಹಾನಿಯಾಗಿವೆ. ಹೀಗಾಗಿ ರೈತರಿಗೆ ಸೂಕ್ತ ಪರಿಹಾರ ಒದಗಿಸಲು ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು.

ಧಾರವಾಡ:

ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಜಿಲ್ಲಾದ್ಯಂತ ಮೂರು ದಿನ ಬೆಳೆ ಹಾನಿ ಹಾಗೂ ಬರ ಪರಿಸ್ಥಿತಿ ಕುರಿತು ಖುದ್ದಾಗಿ ರೈತರ ಹೊಲಗಳಿಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದೇನೆ. ರೈತರ ಬೆಳೆದ ಬೆಳೆಗಳ ಹಾನಿಗೆ ಸರ್ಕಾರದಿಂದ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಸಚಿವ ಸಂತೋಷ ಲಾಡ್ ಹೇಳಿದರು.

ಅಳ್ನಾವರ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ಬರ ಪರಿಸ್ಥಿತಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಬೆಳೆಗಳು ಹಾನಿಯಾಗಿವೆ. ಹೀಗಾಗಿ ರೈತರಿಗೆ ಸೂಕ್ತ ಪರಿಹಾರ ಒದಗಿಸಲು ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.

ಸಭೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಸರ್ಕಾರದಿಂದ ಪರಿಹಾರ ವಿತರಣೆ, ಕೃಷಿ ಮತ್ತು ತೋಟಗಾರಿಕೆ ಬೆಳೆ ನಷ್ಟ, ರಸ್ತೆ, ಸೇತುವೆ ಸೇರಿದಂತೆ ಮೂಲ ಸೌಕರ್ಯಗಳಿಗೆ ಉಂಟಾದ ಹಾನಿ ಹಾಗೂ ಪರಿಹಾರ ಕಾರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

2025-26ನೇ ಸಾಲಿನಲ್ಲಿ ಶೇ.100ರಷ್ಟು ತೆರಿಗೆ ವಸೂಲಾತಿ ಸಾಧನೆ ಮಾಡಿದ ಅಳ್ನಾವರ ತಾಲೂಕಿನ ನಾಲ್ಕು ಗ್ರಾಮ ಪಂಚಾಯಿತಿಗಳ ಪಿಡಿಒಗಳಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು. ಬೆಣಚಿ ಗ್ರಾಮದ ರಮೇಶಗೌಡ ಬಾಬುಗೌಡ ಪಾಟೀಲ ಅವರ ಮನೆ ಹಾನಿಯಿಂದ ಜಾನುವಾರು ಮೃತಪಟ್ಟ ಹಿನ್ನೆಲೆಯಲ್ಲಿ ಸರ್ಕಾರದಿಂದ ಮಂಜೂರಾದ ₹ 37,500 ಪರಿಹಾರ ಧನ ಹಾಗೂ ಹೊನ್ನಾಪೂರ ಗ್ರಾಮದ ಲಗಮಣ್ಣ ನಾಯ್ಕ ಅವರ ಮನೆ ಹಾನಿಗೆ ಮಂಜೂರಾದ ₹ 6500 ಪರಿಹಾರ ಧನವನ್ನು ಸಚಿವರು ವಿತರಿಸಿದರು.

ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ, ಜಿಪಂ ಸಿಇಒ ಭುವನೇಶ ಪಾಟೀಲ್, ಪ್ರೊಬೆಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಅಳ್ನಾವರ ತಹಸೀಲ್ದಾರ್ ಡಿ.ಎಚ್. ಹೂಗಾರ, ತಾಪಂ ಇಒ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ ತುರ್ಕಾಣಿ ಇದ್ದರು.

ಸಭೆಯ ಬಳಿಕ ಅಳ್ನಾವರ ತಾಲೂಕಿನ ಬೆಣಚಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಸಚಿವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿದರು. ಈಗಾಗಲೇ ಕಲಘಟಗಿ, ಧಾರವಾಡ, ನವಲಗುಂದ, ಹುಬ್ಬಳ್ಳಿ, ಅಣ್ಣಿಗೇರಿ ಹಾಗೂ ಕುಂದಗೋಳ ತಾಲೂಕಿನ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿ ಕುರಿತು ಪರಿಶೀಲಿಸಲಾಗಿದೆ. ಈ ಕುರಿತು ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಸೂಕ್ತ ಪರಿಹಾರ ಒದಗಿಸಿಕೊಡಲಾಗುವುದು.

ಸಂತೋಷ ಲಾಡ್‌, ಸಚಿವ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುತ್ತಿಗೆ ಉದ್ಯೋಗಕ್ಕಾಗಿ ಹರಿದು ಬಂದ ಉದ್ಯೋಗಾಕಾಂಕ್ಷಿಗಳು
ಮೊಬೈಲ್ ದುರ್ಬಳಕೆಯಿಂದ ಹಾಳಾಗಬೇಡಿ