ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಪ್ರಿಯಾಂಕಾ ಜಾರಕಿಹೊಳಿ

KannadaprabhaNewsNetwork |  
Published : Jul 29, 2024, 12:53 AM IST
ಹಿರಣ್ಯಕೇಶಿ ನದಿಯ ಪ್ರವಾಹ ಪೀಡಿತ ಪ್ರದೇಶ ಹಾಗೂ ಕಾಳಜಿ ಕೇಂದ್ರಗಳಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. | Kannada Prabha

ಸಾರಾಂಶ

ಹಿರಣ್ಯಕೇಶಿ ನದಿಯ ಪ್ರವಾಹ ಪೀಡಿತ ಪ್ರದೇಶ ಹಾಗೂ ಕಾಳಜಿ ಕೇಂದ್ರಗಳಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಕನ್ನಡಪ್ರಭ ವಾರ್ತೆ ಸಂಕೇಶ್ವರ

ಹಿರಣ್ಯಕೇಶಿ ನದಿಯ ಪ್ರವಾಹ ಪೀಡಿತ ಪ್ರದೇಶ ಹಾಗೂ ಕಾಳಜಿ ಕೇಂದ್ರಗಳಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಭಾನುವಾರ ಪಟ್ಟಣದ ಹಿರಣ್ಯಕೇಶಿ ನದಿ ಪಾತ್ರದಲ್ಲಿ ಮುಳುಗಡೆಯಾದ ನದಿ ಗಲ್ಲಿ, ಮಠ ಗಲ್ಲಿ ಪ್ರದೇಶಕ್ಕೆ ಹಾಗೂ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು. ಮುಳುಗಡೆಯಾದ ಮನೆಗಳು, ಸಂತ್ರಸ್ತರಿಗೆ ಕಲ್ಪಿಸಿದ ವ್ಯವಸ್ಥೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ನೆರೆ ಸಂತ್ರಸ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆ ಮಾಡಿ, ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಸೂಚಿಸಿದರು.

ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಜನತೆ ಯಾರೂ ಕೂಡ ಭಯ ಪಡುವ ಅವಶ್ಯಕತೆ ಇಲ್ಲ. ಜಿಲ್ಲಾಡಳಿತ, ತಹಸೀಲ್ದಾರ, ಸ್ಥಳೀಯ ಮಟ್ಟದ ಅಧಿಕಾರಿಗಳು ಸೇರಿದಂತೆ ನಾವೂ ಕೂಡ ನಿರಂತರವಾಗಿ ನಿಮ್ಮ ಜೊತೆ ಇದ್ದೇವೆ ಎಂದು ಧೈರ್ಯ ಹೇಳಿದರು.

ಜಿಲ್ಲಾಡಳಿತ, ಸ್ಥಳೀಯ ಮಟ್ಟದ ಅಧಿಕಾರಿಗಳು ಸಂತ್ರಸ್ತರಿಗಾಗಿ ಕಾಳಜಿ ಕೇಂದ್ರ ಆರಂಭಿಸಿದ್ದು, ಗುಣಮಟ್ಟದ ಆಹಾರ ಕಾಳಜಿ ಕೇಂದ್ರದಲ್ಲಿ ನೀಡಲಾಗುತ್ತಿದ್ದು, ನೆರೆ ಸಂತ್ರಸ್ತರು ಹಲವು ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದಿದ್ದು, ಪ್ರಾಮಾಣಿಕವಾಗಿ ಸಮಸ್ಯೆಗೆ ಸ್ಪಂದಿಸುವ ಕಾರ್ಯ ಮಾಡುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ ಮಂಜುಳಾ ನಾಯಿಕ, ತಾಲೂಕು ವೈದ್ಯಾಧಿಕಾರಿ ಉದಯ ಕುಡಚಿ, ಉಪ ತಹಸೀಲ್ದಾರ ಸಿ.ಎ. ಪಾಟೀಲ, ಕಂದಾಯ ನಿರೀಕ್ಷಕ ಎ.ಎಂ. ಕಮತನೂರ, ಪುರಸಭೆಯ ಮುಖ್ಯಾಧಿಕಾರಿ ಪ್ರಕಾಶ ಮಠದ, ಸಿಪಿಐ ಶಿವಶರಣ ಅವಜಿ, ಅಭಿಯಂತರ ರವೀಂದ್ರ ಗಡಾದ, ಗ್ರಾಮ ಲೆಕ್ಕಾಧಿಕಾರಿ ಎನ್.ಆರ್ ಪಾಟೀಲ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.

ಅಧಿಕಾರಿಗಳ ವಿರುದ್ಧ ಆಕ್ರೋಶ

ನೆರೆ ಸಂತ್ರಸ್ತರ ಬಗ್ಗೆ ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಹಾಗೂ ಮೇಲಧಿಕಾರಿಗಳಿಗೆ ಸರಿಯಾಗಿ ಮಾಹಿತಿ ನೀಡುವುದಿಲ್ಲ, 2019ರಲ್ಲಿ ಪ್ರವಾಹದ ವೇಳೆ ನದಿ ಗಲ್ಲಿಯ ನದಿ ದಡದ ಟಿಸಿ ಸ್ಥಳಾಂತರಕ್ಕೆ ಮನವಿ ನೀಡಿದ್ದರು, ಅದರೆ ಇಲ್ಲಿಯವರೆಗೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಸಮ್ಮುಖದಲ್ಲಿ ನೆರೆ ಸಂತ್ರಸ್ತರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ