ಗ್ರಾಮದ ಸರ್ವೋತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಚಿಂತನೆ: ಶಾಸಕ ಜಿ.ಎಚ್.ಶ್ರೀನಿವಾಸ್

KannadaprabhaNewsNetwork |  
Published : Jan 17, 2026, 02:15 AM IST
ಲಕ್ಕವಳ್ಳಿಯಲ್ಲಿ ಮುಖ್ಯ ಬಸ್ ನಿಲ್ದಾಣ, ವಾಣಿಜ್ಯ ಮಳಿಗೆ, ಡಿಜಿಟಲ್ ಗ್ರಂಥಾಲಯ ಉದ್ಗಾಟನೆ | Kannada Prabha

ಸಾರಾಂಶ

ತರೀಕೆರೆಲಕ್ಕವಳ್ಳಿ ಗ್ರಾಮದ ಮುಖ್ಯ ರಸ್ತೆ ಅಗಲೀಕರಣ, ನವೀನ ಮಾದರಿಯಲ್ಲಿ ವಿದ್ಯುತ್ ದೀಪಗಳ ಕಂಬ ಅಳವಡಿಕೆ ಮತ್ತು ರಸ್ತೆಯ ಎರಡು ಕಡೆ ಬಾಕ್ಸ್ ಚರಂಡಿ ನಿರ್ಮಾಣಕ್ಕೆ ಒಟ್ಟು ₹13 ಕೋಟಿ ಅನುದಾನ ಒದಗಿಸಲು ಅನುಮೋದನೆ ನೀಡಲಾಗಿದೆ ಎಂದು ಶಾಸಕ ಜಿ. ಎಚ್. ಶ್ರೀನಿವಾಸ್ ಹೇಳಿದರು.

- ಲಕ್ಕವಳ್ಳಿಯಲ್ಲಿ ಮುಖ್ಯ ಬಸ್ ನಿಲ್ದಾಣ, ವಾಣಿಜ್ಯ ಮಳಿಗೆ, ಡಿಜಿಟಲ್ ಗ್ರಂಥಾಲಯ ಉದ್ಗಾಟನೆ

ಕನ್ನಡಪ್ರಭ ವಾರ್ತೆ, ತರೀಕೆರೆ

ಲಕ್ಕವಳ್ಳಿ ಗ್ರಾಮದ ಮುಖ್ಯ ರಸ್ತೆ ಅಗಲೀಕರಣ, ನವೀನ ಮಾದರಿಯಲ್ಲಿ ವಿದ್ಯುತ್ ದೀಪಗಳ ಕಂಬ ಅಳವಡಿಕೆ ಮತ್ತು ರಸ್ತೆಯ ಎರಡು ಕಡೆ ಬಾಕ್ಸ್ ಚರಂಡಿ ನಿರ್ಮಾಣಕ್ಕೆ ಒಟ್ಟು ₹13 ಕೋಟಿ ಅನುದಾನ ಒದಗಿಸಲು ಅನುಮೋದನೆ ನೀಡಲಾಗಿದೆ ಎಂದು ಶಾಸಕ ಜಿ. ಎಚ್. ಶ್ರೀನಿವಾಸ್ ಹೇಳಿದರು.

ತಾಲೂಕಿನ ಲಕ್ಕವಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡ ಮುಖ್ಯ ಬಸ್ ನಿಲ್ದಾಣ, ವಾಣಿಜ್ಯ ಮಳಿಗೆಗಳು, ಡಿಜಿಟಲ್ ಗ್ರಂಥಾಲಯ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅನ್ನ ದಾಸೋಹ ಕೊಠಡಿ ಉದ್ಘಾಟಿಸಿ ಮಾತನಾಡಿದರು.

ಗ್ರಾಮದ ಸರ್ವೊತ್ತಮ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ನನ್ನ ಅವಧಿಯಲ್ಲಿ ಪೂರ್ಣಗೊಳಿಸುವ ಚಿಂತನೆ ಇಟ್ಟಿಕೊಂಡಿದ್ದೇನೆ. ಇದಕ್ಕೆ ಇಲ್ಲಿನ ಗ್ರಾಮಸ್ಥರಿಂದ ಪೂರಕ ಸಹಕಾರ ಅಗತ್ಯ ಸಲಹೆ ಮೇರೆಗೆ ಕಾರ್ಯಾಚರಣೆ ನಡೆಸ ಬೇಕಿದೆ ಎಂದು ತಿಳಿಸಿದರು.

ಗ್ರಾಪಂ ಅಧ್ಯಕ್ಷ ಅಬ್ದುಲ್ ರೆಹಮಾನ್ ಮಾತನಾಡಿ, ನನ್ನ ಅವಧಿಯಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯ ಗಳನ್ನು ಒದಗಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಸಹಕಾರದೊಂದಿಗೆ ಅಭಿವೃದ್ಧಿ ಪಡೆಸಲಾಗುತ್ತಿದೆ. ಕುಡಿಯುವ ನೀರು, ಮುಖ್ಯ ರಸ್ತೆ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಿಸಿ ಕಾಮಗಾರಿ ಕೈಗೊಳ್ಳಲಾಗಿದೆ. ಗ್ರಾಮದಲ್ಲಿ ಸ್ಮಶಾನ ರುದ್ರಭೂಮಿ, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಶಾಲಾ ಕೊಠಡಿಗಳ ನಿರ್ಮಾಣ, ನಿವೇಶನ ರಹಿತರಿಗೆ ನಿವೇಶನ ಹಂಚಿಕೆ, ಸರಳ ರೀತಿಯಲ್ಲಿ ತೆರಿಗೆ ಹಾಕಿ ವಸೂಲಾತಿ ಮಾಡಲು ಕಾರ್ಯಕ್ರಮ ಜಾರಿಗೊಳಿಸಲಾಗಿದೆ ಎಂದು ಹೇಳಿದರು.ನಮ್ಮ ಆಡಳಿತ ಅವಧಿಯಲ್ಲಿ ಒಟ್ಟಾರೆ ಸಮಾಧಾನಕರವಾಗಿ ಗ್ರಾಮದ ಬೆಳವಣಿಗೆ ಆಗುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸುವ ಕೆಲಸಕಾರ್ಯ ನಿರ್ವಹಣೆಗೆ ಶಾಸಕ ಜೆ.ಎಚ್.ಶ್ರೀನಿವಾಸ್ ಅವರೊಂದಿಗೆ ಕೈಜೋಡಿಸುತ್ತೇವೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಗ್ರಾಮದ ತಿಮ್ಮಾಭೋವಿ ಕ್ಯಾಂಪ್ ನಲ್ಲಿ ಸುಮಾರು 400 ವರ್ಷಗಳ ಹಳೆಯ ಶ್ರೀ ವೆಂಕಟರಮಣ ದೇವಾಲಯ ಶಿಥಿಲಗೊಂಡ ಕಾರಣ ಪುನರ್ ನಿರ್ಮಾಣಕ್ಕೆ ಸೂಕ್ತ ಅನುದಾನ ಮಂಜೂರು ಮಾಡಿಸಲು ಶಾಸಕ ಜಿ.ಎಚ್.ಶ್ರೀನಿವಾಸ್ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಯಿತು.ಇದಕ್ಕೆ ಶಾಸಕರು ಸಕಾರಾತ್ಮಕ ಸ್ಪಂದನೆ ನೀಡಿದ್ದು ಹಾಗೂ ರಸ್ತೆಯ ಅಗಲೀಕರಣದಲ್ಲಿ ಇರುವ ಗೊಂದಲ ನಿವಾರಣೆಗೆ ಗ್ರಾಮ ಪಂಚಾಯಿತಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಗ್ರಾಮದ ಹುಣಸನಹಳ್ಳಿ ಗ್ರಾಮಸ್ಥರಿಗೆ ಶಾಸಕರು 94c ಹಕ್ಕುಪತ್ರ ವಿತರಿಸಿದರು. ಗ್ರಾಪಂ ಸದಸ್ಯರಾದ ಎಲ್.ಎನ್.ಫಣಿರಾಜ್, ಶಿವಕಿರಣ್, ಮುಖಂಡರಾದ ಹರೀಶ್, ಪವನ್ ಕಿಶೋರ್, ರಾಜಶೇಖರ್ ಹಾಗೂ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.

-

16ಕೆಟಿಆರ್.ಕೆ.1ಃ ತರೀಕೆರೆ ಸಮೀಪದ ಲಕ್ಕವಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್ ಅವರನ್ನು ಸನ್ಮಾನಿಸಲಾಯಿತು. ಗ್ರಾಪಂ ಅಧ್ಯಕ್ಷ ಅಬ್ದುಲ್ ರೆಹಮಾನ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಂದಾರ ಶಾಲೆಯಲ್ಲಿ ಸುಗ್ಗಿ ಹಬ್ಬದ ಸಂಭ್ರಮ
ಮೂಡುಬಿದಿರೆ ಸಿಂಥೆಟಿಕ್ ಟ್ರ್ಯಾಕ್ ಗೆ 11 ವರ್ಷ ಕ್ರೀಡಾಭಿಮಾನಿಗಳ ಹರ್ಷ