ಸಿಂದಗಿ ಪುರಸಭೆ ನಗರಸಭೆಯಾಗಿ ಮೇಲ್ದರ್ಜೆಗೆ

KannadaprabhaNewsNetwork |  
Published : Sep 06, 2025, 02:00 AM IST
ಮನಗೂಳಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಸಿಂದಗಿ ಶಾಸಕರ ಪರಿಶ್ರಮ, ಹಿತಾಸಕ್ತಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಹಕಾರದಿಂದ ಪುರಸಭೆ ನಗರಸಭೆಯಾಗಿ ಮೇಲ್ದರ್ಜೆಗೆ ಏರಿದೆ. ಇದುವರೆಗೂ ಪಟ್ಟಣ ಎಂದು ಕರೆಯುತ್ತಿದ್ದ ನಾವು ಇಂದಿನಿಂದ ಸಿಂದಗಿ ನಗರವಾಗಿದೆ ಎಂದು ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಸಿಂದಗಿ

ಶಾಸಕರ ಪರಿಶ್ರಮ, ಹಿತಾಸಕ್ತಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಹಕಾರದಿಂದ ಪುರಸಭೆ ನಗರಸಭೆಯಾಗಿ ಮೇಲ್ದರ್ಜೆಗೆ ಏರಿದೆ. ಇದುವರೆಗೂ ಪಟ್ಟಣ ಎಂದು ಕರೆಯುತ್ತಿದ್ದ ನಾವು ಇಂದಿನಿಂದ ಸಿಂದಗಿ ನಗರವಾಗಿದೆ ಎಂದು ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ಜಗಜ್ಯೋತಿ ಬಸವೇಶ್ವರ ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪುರಸಭೆ ನಗರಸಭೆಯಾಗಿ ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪುರಸಭೆಯ ಸದಸ್ಯರು ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದಕ್ಕಾಗಿ ಶಾಸಕ ಅಶೋಕ ಮನಗೂಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ ಅವರಿಗೆ ಪಟ್ಟಣದ ಜನತೆ ಹಾಗೂ ಪುರಸಭೆಯಿಂದ ಅಭಿನಂದಿಸುವುದಾಗಿ ತಿಳಿಸಿದರು.ಈ ವೇಳೆ ಬ್ಲಾಕ್ ಕಾಂಗ್ರೆಸ್ ತಾಲೂಕಾಧ್ಯಕ್ಷ ಸುರೇಶ ಪೂಜಾರಿ ಮಾತನಾಡಿ, ದಿ.ಎಂ.ಸಿ.ಮನಗೂಳಿ ಅವರ ಕನಸಾಗಿತ್ತು. ಕಾರಣಾಂತರಗಳಿಂದ ಕೈಗೂಡದಿದ್ದರು ಈಗ ಅವರ ಪುತ್ರನಿಂದಲೇ ಕನಸು ಈಡೇರಿದೆ. ಸಚಿವ ಸಂಪುಟದ ಸಭೆಯಲ್ಲಿ ಅನುಮೋದನೆಗೊಂಡ ನಗರಸಭೆಯ ಪಟ್ಟಿಯಲ್ಲಿ ಸಿಂದಗಿ ಹೆಸರು ಇರದೇ ಇದ್ದದ್ದು ನಿರಾಸೆ ಉಂಟುಮಾಡಿತ್ತು. ಶಾಸಕ ಅಶೋಕ ಮನಗೂಳಿ ಅವರು ಸರ್ಕಾರದ ಗಮನ ಸೆಳೆದು, ನಗರಸಭೆಯಾಗಿ ಮೇಲ್ದರ್ಜೆಗೇರಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.ಈ ವೇಳೆ ಪುರಸಭೆ ಉಪಾಧ್ಯಕ್ಷ ಸಂದೀಪ ಚೌರ, ಸದಸ್ಯರಾದ ಬಾಷಾಸಾಬ ತಾಂಬೊಳಿ, ಬಸವರಾಜ ಯರನಾಳ, ಭೀಮು ಕಲಾಲ, ಗೊಲ್ಲಾಳ ಬಂಕಲಗಿ, ಮುಖ್ಯಾಧಿಕಾರಿ ಎಸ.ರಾಜಶೇಖರ, ಸಿದ್ದು ಅಂಗಡಿ, ದಯಾನಂದ ಇವಣಿ, ಮುತ್ತು ಪಟ್ಟಣಶೆಟ್ಟಿ, ಬಸವರಾಜ ಸಜ್ಜನ, ಶರಣಪ್ಪ ಸುಲ್ಪಿ, ರಜತ ತಾಂಬೆ, ಮೋಶಿನ ಬೀಳಗಿ, ಸುನಂದಾ ಯಂಪುರೆ, ಅಬ್ಬಾಸಲಿ ಕಾಕಂಡಕಿ ಸೇರಿ ಪುರಸಭೆ ಅಧಿಕಾರಿಗಳು, ಪೌರ ಕಾರ್ಮಿಕರು ಹಾಗೂ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌