ಸಿಂಧನೂರು: ಯುವ ಸಂಸತ್ತು ಕಾರ್ಯಕ್ರಮ

KannadaprabhaNewsNetwork |  
Published : Oct 07, 2026, 01:30 AM IST
06ಕೆಪಿಎಸ್ಎನ್ಡಿ 1  | Kannada Prabha

ಸಾರಾಂಶ

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಸಂವಹನ ಕೌಶಲ್ಯ, ಪ್ರಜಾಪ್ರಭುತ್ವದ ಜವಾಬ್ದಾರಿ ಮತ್ತು ಸಂವಿಧಾನಾತ್ಮಕ ಮೌಲ್ಯಗಳ ಅರಿವು ಮೂಡಿಸಲು ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ತಹಸೀಲ್ದಾರ ಅರುಣ ಎಚ್.ದೇಸಾಯಿ ಹೇಳಿದರು.

ಕನ್ನಡಪ್ರಭ ವಾರ್ತೆ ಸಿಂಧನೂರು

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಸಂವಹನ ಕೌಶಲ್ಯ, ಪ್ರಜಾಪ್ರಭುತ್ವದ ಜವಾಬ್ದಾರಿ ಮತ್ತು ಸಂವಿಧಾನಾತ್ಮಕ ಮೌಲ್ಯಗಳ ಅರಿವು ಮೂಡಿಸಲು ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ತಹಸೀಲ್ದಾರ ಅರುಣ ಎಚ್.ದೇಸಾಯಿ ಹೇಳಿದರು.

ನಗರದ ಟೌನ್‌ಹಾಲ್‌ನಲ್ಲಿ ತಾಲೂಕಾಡಳಿತ, ತಾಪಂ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ತಾಲೂಕುಮಟ್ಟದ ಯುವ ಸಂಸತ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯುವಜನರು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ತಿಳಿದುಕೊಂಡು, ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು. ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆ ಮುಖ್ಯವಾಗಿದೆ ಎಂದರು.

ವೇದಿಕೆಯಲ್ಲಿ ತಾಪಂ ಕಾರ್ಯನಿರ್ವಾಹಕ ಚಂದ್ರಶೇಖರ, ಕ್ಷೇತ್ರಶಿಕ್ಷಣಾಧಿಕಾರಿ ಚಾಗಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಂಕರ್ ಪಡತೆ, ಬಿಸಿಯೂಟ ಸಹಾಯಕ ನಿರ್ದೇಶಕ ಸಾಬಣ್ಣ ಹಾಗೂ ಇತರರು ವೇದಿಕೆಯಲ್ಲಿದ್ದರು.

ಯುವ ಸಂಸತ್ ಕಾರ್ಯಕಲಾಪ ಆಕರ್ಷಕ: ಯುವ ಸಂಸತ್‌ನಲ್ಲಿ ವಿದ್ಯಾರ್ಥಿಗಳು ಸಂಸತ್ ಸದಸ್ಯರ ಪಾತ್ರ ನಿರ್ವಹಿಸಿ, ಪ್ರಶ್ನೋತ್ತರ, ಚರ್ಚೆ ಹಾಗೂ ವಿವಿಧ ವಿಷಯಗಳ ಕುರಿತು ಅಭಿಪ್ರಾಯ ಮಂಡಿಸುವ ಮೂಲಕ ಗಮನ ಸೆಳೆದರು. ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು. ವಿಪಕ್ಷ ಶಾಸಕರ ಪ್ರಶ್ನೆಗಳಿಗೆ ಮುಖ್ಯಮಂತ್ರಿ, ಸಚಿವರಿಂದ ಉತ್ತರ ಯುವ ಸಂಸತ್ತು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನೈಜ ವಿಧಾನಸಭೆಯ ಕಲಾಪದ ಮಾದರಿಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಪಾತ್ರ ನಿರ್ವಹಿಸಿದರು. ವಿಧಾನಸಭಾಧ್ಯಕ್ಷ ಪಾತ್ರದಲ್ಲಿ ಅಜಯ್, ಮುಖ್ಯಮಂತ್ರಿ ಪಾತ್ರದಲ್ಲಿ ಅಂಕಿತ, ವಿಪಕ್ಷ ನಾಯಕನ ಪಾತ್ರದಲ್ಲಿ ಮೌನೇಶ ಕಾಣಿಸಿಕೊಂಡರು. ವಿದ್ಯಾರ್ಥಿಗಳು ಪ್ರಶ್ನಿಸುವ ವಿರೋಧ ಪಕ್ಷ ಹಾಗೂ ಉತ್ತರಿಸುವ ಆಡಳಿತ ಪಕ್ಷದ ಪಾತ್ರವನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ವಿಧಾನಸಭೆಯ ಕಲಾಪದ ನೈಜ ಅನುಭವವನ್ನು ಪಡೆದುಕೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಜಯಪುರ ಶಾಸಕ ಯತ್ನಾಳ್ ವಿರುದ್ಧ ದಾವಣಗೆರೆ ಕಾಂಗ್ರೆಸ್ ದೂರು
ಶಿಥಿಲ, ಹಳೇ ಪಶು ವೈದ್ಯಕೀಯ ಆಸ್ಪತ್ರೆಗಳ ಪಟ್ಟಿ ನೀಡಿ: ಶಾಂತನಗೌಡ