ಹುಬ್ಬಳ್ಳಿ:
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂಧು ನದಿ ಒಪ್ಪಂದ ಜವಾಹರ್ ನೆಹರೂ ಕಾಲದಲ್ಲಿ ಆಗಿತ್ತು. ಅಂದಿನ ತಪ್ಪನ್ನು ಇಂದು ಮೋದಿ ಸರ್ಕಾರ ಸರಿ ಮಾಡುವ ಕೆಲಸ ಮಾಡುತ್ತಿದೆ ಎಂದರು.
ಕಾಂಗ್ರೆಸ್ ನವರ ಜನಾಕ್ರೋಶ ಯಾತ್ರೆ ಕುರಿತು ಪ್ರತಿಕ್ರಿಯಿಸಿದ ಅವರು, ಕೆಲ ದಿನಗಳ ಹಿಂದೆ ಏರಿಸಿದ ಹಾಲು, ವಿದ್ಯುತ್, ಬಸ್ ದರ ಇಳಿಸಲಿ. ಆಮೇಲೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ ಎಂದರು.ಜನರ ಮನಸ್ಸನ್ನು ವಿಷಯಾಂತರ ಮಾಡುವ ಉದ್ದೇಶದಿಂದಲೇ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ನವರಿಗೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವುದಕ್ಕೆ ಯಾವುದೇ ನೈತಿಕತೆ ಇಲ್ಲ ಎಂದರು.
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಮೇಲೆ ಕೈ ಎತ್ತಿದ್ದು, ನಿಮಗೆ ಅಧಿಕಾರದ ಮದ ನೆತ್ತಿಗೇರಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳಾ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಸಹ ಪೊಲೀಸ ಅಧಿಕಾರಿಗಳ ಮೇಲೆ ದರ್ಪ ತೋರಿದ್ದಾರೆ. ಹೀಗಾಗಿ, ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದಲ್ಲಿ ಯಾವುದೇ ಅಧಿಕಾರಿಗಳಿಗೆ ಗೌರವ ಸಿಗುತ್ತಿಲ್ಲ. ಒಬ್ಬ ಮುಖ್ಯಮಂತ್ರಿಯಾಗಿ ಅವರ ಹೇಳಿಕೆ ಸರಿಯಲ್ಲ ಎಂದು ಸಿಎಂ ನಡೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ.