ಸಿದ್ಧಾರೂಢ ಮಠಕ್ಕೆ ಗಾಯಕ ಸೋನು ನಿಗಮ್‌ ಭೇಟಿ

KannadaprabhaNewsNetwork |  
Published : Feb 10, 2026, 02:15 AM IST
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢರ ಮಠಕ್ಕೆ ಭೇಟಿ ನೀಡಿದ ಖ್ಯಾತ ಗಾಯಕ ಸೋನು ನಿಗಮ್‌ ಅ‍ವರನ್ನು ಶ್ರೀಮಠದ ಟ್ರಸ್ಟ್‌ ಕಮಿಟಿಯಿಂದ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಸದ್ಗುರು ಶ್ರೀಸಿದ್ಧಾರೂಢಸ್ವಾಮಿ ಮಠಕ್ಕೆ ಸೋಮವಾರ ಖ್ಯಾತ ಗಾಯಕ ಸೋನು ನಿಗಮ್‌ ಭೇಟಿ ನೀಡಿ ಶ್ರೀ ಸಿದ್ಧಾರೂಢರ ಹಾಗೂ ಗುರುನಾಥಾರೂಢರ ಗದ್ದುಗೆಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಹುಬ್ಬಳ್ಳಿ:

ಇಲ್ಲಿನ ಸದ್ಗುರು ಶ್ರೀಸಿದ್ಧಾರೂಢಸ್ವಾಮಿ ಮಠಕ್ಕೆ ಸೋಮವಾರ ಖ್ಯಾತ ಗಾಯಕ ಸೋನು ನಿಗಮ್‌ ಭೇಟಿ ನೀಡಿ ಶ್ರೀ ಸಿದ್ಧಾರೂಢರ ಹಾಗೂ ಗುರುನಾಥಾರೂಢರ ಗದ್ದುಗೆಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಶ್ರೀಸಿದ್ಧಾರೂಢ ಸ್ವಾಮಿಯವರ ಮಠ ಟ್ರಸ್ಟ್‌ ಕಮಿಟಿ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿಯಾಗಿ ಕೆಲಕಾಲ ಚರ್ಚಿಸಿ ಶ್ರೀಮಠದ ಮಾಹಿತಿ ಪಡೆದುಕೊಂಡರು. ಈ ವೇಳೆ ಸೋನು ನಿಗಮ್‌ ಅ‍ವರಿಗೆ ಶ್ರೀಮಠದ ಟ್ರಸ್ಟ್‌ ಕಮಿಟಿಯಿಂದ ಶ್ರೀ ಸಿದ್ಧಾರೂಢರ ಮೂರ್ತಿ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟ್‌ ಕಮಿಟಿ ಚೇರಮನ್ ಚನ್ನವೀರ ಮುಂಗರವಾಡಿ, ಧರ್ಮದರ್ಶಿ ಉದಯಕುಮಾರ ನಾಯಕ, ಶ್ರೀಮಠದ ಸಿಬ್ಬಂದಿ ವರ್ಗದವರು ಹಾಗೂ ಭಕ್ತರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

80 ಶಾಸಕರ ಬೆಂಬಲ ಇದೆ ಎಂಬುದು ಪ್ರಶ್ನೆಯಲ್ಲ: ಸತೀಶ್‌
ನಮ್ಮ ಪ್ರಚೋದಿಸಬೇಡಿ- ಡಿಕೆ ಸಿಎಂ ಮಾಡಿ ಅಂತ 90 ಶಾಸಕರು ಕೇಳಿದ್ದೇವೆ : ಯತೀಂದ್ರಗೆ ಇಕ್ಬಾಲ್‌