ಎಸ್‌ಐಆರ್‌ : ಶೇ100ರಷ್ಟು ಪೂರ್ಣಗೊಳಿಸಬೇಕು

KannadaprabhaNewsNetwork |  
Published : Jul 21, 2026, 01:15 AM IST
 | Kannada Prabha

ಸಾರಾಂಶ

ಮತದಾರರ ನೋಂದಣಾಧಿಕಾರಿಗಳು ಗಣತಿ ನಮೂನೆಗಳ ವಿತರಣೆಯನ್ನು ಶೇ. 100ರಷ್ಟು ಪೂರ್ಣಗೊಳಿಸಬೇಕು ಹಾಗೂ ಡಿಜಿಟಲೀಕರಣ ಕಾರ‍್ಯವನ್ನು ಈ ವಾರದೊಳಗೆ ಸಂಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ, ತುಮಕೂರು

ಮತದಾರರ ನೋಂದಣಾಧಿಕಾರಿಗಳು ಗಣತಿ ನಮೂನೆಗಳ ವಿತರಣೆಯನ್ನು ಶೇ. 100ರಷ್ಟು ಪೂರ್ಣಗೊಳಿಸಬೇಕು ಹಾಗೂ ಡಿಜಿಟಲೀಕರಣ ಕಾರ‍್ಯವನ್ನು ಈ ವಾರದೊಳಗೆ ಸಂಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೋಮವಾರ ಕೆಸ್ವಾನ್ ಮೂಲಕ ಜಿಲ್ಲೆಯ ಎಲ್ಲಾ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಜಿಲ್ಲಾ/ತಾಲೂಕು ಹಾಗೂ ಹೋಬಳಿ ಮಟ್ಟದ ನೋಡಲ್ ಅಧಿಕಾರಿಗಳೊಂದಿಗೆ ಎಸ್‌ಐಆರ್ ಸಂಬಂಧ ಗಣತಿ ನಮೂನೆಗಳ ವಿತರಣೆ, ಸಂಗ್ರಹಣೆ ಹಾಗೂ ಡಿಜಿಟಲೀಕರಣ ಕಾರ‍್ಯಗಳ ಪ್ರಗತಿ ಕುರಿತು ಪರಿಶೀಲನಾ ಸಭೆ ನಡೆಸಿ ಅವರು ಮತನಾಡಿದರು.

ಪ್ರತಿ ತಾಲೂಕಿನಲ್ಲಿಯೂ ನಿಯಂತ್ರಣ ಕೊಠಡಿ ಸ್ಥಾಪಿಸಿ, ಗಣತಿ ನಮೂನೆಗಳ ವಿತರಣೆ, ಸಂಗ್ರಹಣೆ ಹಾಗೂ ಡಿಜಿಟಲೀಕರಣ ಕಾರ‍್ಯದಲ್ಲಿ ಎದುರಾಗುವ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ನಿಗದಿತ ಅವಧಿಯೊಳಗೆ ಎಲ್ಲಾ ಕರ‍್ಯಗಳನ್ನು ಪೂರ್ಣಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲೆಯ ಎಲ್ಲಾ ಹೋಬಳಿ ಮಟ್ಟದ ಅಧಿಕಾರಿಗಳಿಗೆ ಪ್ರತಿ ಮತಗಟ್ಟೆ ಭೇಟಿ ನೀಡಿ ತಮ್ಮ ವ್ಯಾಪ್ತಿಯಲ್ಲಿ ಗಣತಿ ನಮೂನೆಗಳ ವಿತರಣೆ ಹಾಗೂ ಡಿಜಿಟಲೀಕರಣ ಕಾರ‍್ಯದಲ್ಲಿ ಕಡಿಮೆ ಪ್ರಗತಿ ಸಾಧಿಸಿರುವ ಮತಗಟ್ಟೆ ಅಧಿಕಾರಿಗಳಿಗೆ ಅಗತ್ಯ ನೆರವು ನೀಡಿ ನಿಗದಿತ ಗುರಿ ಸಾಧಿಸಲು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಚುನಾವಣಾ ತಹಶೀಲ್ದಾರ್ ನಾಗಭೂಷಣ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಖೋಟಾ ನೋಟು ಮುದ್ರಿಸುತ್ತಿದ್ದ ಇಬ್ಬರ ಸೆರೆ: 338 ನೋಟು ಜಪ್ತಿ
337 ಕೋಟಿ ರು.ಕ್ರಿಪ್ಟೋ ಅಕ್ರಮ: ಇ.ಡಿ. ತಲಾಶ್