ಎಸ್‌ಐಆರ್: 18,904 ಪ್ರಕರಣ ವಿಚಾರಣೆ ಪೂರ್ಣ: ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ

KannadaprabhaNewsNetwork |  
Published : Sep 17, 2026, 02:30 AM IST
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಮಾತನಾಡಿದರು. | Kannada Prabha

ಸಾರಾಂಶ

ಚುನಾವಣಾ ಆಯೋಗದ ನಿರ್ದೇಶನದಂತೆ ಸೆ. 23ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದೆ. ಅಂತಿಮ ಮತದಾರರ ಪಟ್ಟಿ ಅ.27 ರಂದು ಪ್ರಕಟವಾಗಲಿದೆ.

ಕಾರವಾರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್)- 2026ರ ಭಾಗವಾಗಿ ಜಿಲ್ಲೆಯಲ್ಲಿ ಮ್ಯಾಪಿಂಗ್ ಆಗದಿರುವ ಹಾಗೂ ತಾರ್ಕಿಕ ವ್ಯತ್ಯಾಸ ಹೊಂದಿರುವ ಒಟ್ಟು 65,248 ನೋಟಿಸ್‌ಗಳನ್ನು ನೀಡಲಾಗಿದ್ದು, ಈ ಪೈಕಿ 58,687 ನೋಟಿಸ್‌ಗಳನ್ನು ವಿತರಿಸಲಾಗಿದೆ. 18,904 ಪ್ರಕರಣಗಳ ವಿಚಾರಣೆ ಪೂರ್ಣಗೊಂಡಿದ್ದು, 39,783 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ ಎಂದು ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ತಿಳಿಸಿದರು.ಮಂಗಳವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ವಿಚಾರಣೆ ಪ್ರಕ್ರಿಯೆಯಲ್ಲಿ ಮರಣ ಹೊಂದಿರುವ ಅಥವಾ ದ್ವಿ- ನೋಂದಣಿ ಹೊಂದಿರುವ 19 ಪ್ರಕರಣಗಳು ಪತ್ತೆಯಾಗಿವೆ. ಹಳಿಯಾಳ ಕ್ಷೇತ್ರದಲ್ಲಿ 14,012 ನೋಟಿಸ್‌ಗಳಲ್ಲಿ 4,618 ಪ್ರಕರಣಗಳ ವಿಚಾರಣೆ ಪೂರ್ಣಗೊಂಡಿದ್ದು, ಕಾರವಾರದಲ್ಲಿ 10,446 ನೋಟಿಸ್‌ಗಳಲ್ಲಿ 3,111 ಪ್ರಕರಣ, ಕುಮಟಾದಲ್ಲಿ 8,344 ನೋಟಿಸ್‌ಗಳಲ್ಲಿ 2,350 ಪ್ರಕರಣ, ಭಟ್ಕಳದಲ್ಲಿ 13,660 ನೋಟಿಸ್‌ಗಳಲ್ಲಿ 1,957 ಪ್ರಕರಣ, ಶಿರಸಿಯಲ್ಲಿ 8,821 ನೋಟಿಸ್‌ಗಳಲ್ಲಿ 2,385 ಪ್ರಕರಣ, ಯಲ್ಲಾಪುರದಲ್ಲಿ 9,965 ನೋಟಿಸ್‌ಗಳಲ್ಲಿ 4,483 ಪ್ರಕರಣಗಳ ವಿಚಾರಣೆ ಪೂರ್ಣಗೊಂಡಿವೆ ಎಂದರು.ಚುನಾವಣಾ ಆಯೋಗದ ನಿರ್ದೇಶನದಂತೆ ಸೆ. 23ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದೆ. ಅಂತಿಮ ಮತದಾರರ ಪಟ್ಟಿ ಅ.27 ರಂದು ಪ್ರಕಟವಾಗಲಿದೆ.

ಹಿರಿಯ ನಾಗರಿಕರು, ಅಂಗವಿಕಲರು, ಅನಾರೋಗ್ಯ ಪೀಡಿತರು ಹಾಗೂ ವಿದೇಶದಲ್ಲಿರುವ ಮತದಾರರಿಗೆ ನೀಡಿರುವ ನೋಟಿಸ್‌ಗಳ ವಿಚಾರಣೆಯಲ್ಲಿ ಅವರ ವಯಸ್ಕ ಕುಟುಂಬ ಸದಸ್ಯರು ಅವರ ಪರವಾಗಿ ಹಾಜರಾಗಿ ಅಗತ್ಯ ದಾಖಲೆ ಹಾಗೂ ಮಾಹಿತಿಯನ್ನು ಸಲ್ಲಿಸಬಹುದು.ಅ. 1, 2026ಕ್ಕೆ 18 ವರ್ಷ ಪೂರ್ಣಗೊಳಿಸುವ ಅರ್ಹ ನಾಗರಿಕರು ಸೆ. 23ರೊಳಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು ಎಂದರು.

ಸೆ. 19 ಮತ್ತು 20ರಂದು ವಿಶೇಷ ಮತದಾರರ ಆಂದೋಲನ ನಡೆಯಲಿದ್ದು, ಆಯಾ ಮತಗಟ್ಟೆಗಳಲ್ಲಿ ಬಿಎಲ್‌ಒಗಳು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಲಭ್ಯವಿರಲಿದ್ದಾರೆ. ಈ ಸಂದರ್ಭದಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಸೇರಿದಂತೆ ಅಗತ್ಯ ಸೇವೆಗಳನ್ನು ಪಡೆಯಬಹುದು. ಅರ್ಹ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೊಸದಾಗಿ ಸೇರ್ಪಡೆಯಾಗುವ ಮತದಾರರು ನಮೂನೆ- 18ರಲ್ಲಿ ಅರ್ಜಿಗಳನ್ನು ಜಿಲ್ಲೆಯ ತಹಸೀಲ್ದಾರ್ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿಗೆ ಸಲ್ಲಿಸಬಹುದು ಎಂದರು.ಸಭೆಯಲ್ಲಿ ಬಿಜೆಪಿ ಘಟಕದ ಉಪಾಧ್ಯಕ್ಷ ಸಂಜಯ್ ಸಾಳುಂಕೆ, ಕಾಂಗ್ರೆಸ್ ಪಕ್ಷದ ರಮೇಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೋಲ್ಡ್ ಕ್ಲೇ ಮೂಲಕ ೧೦೦೮ ಗಣಪತಿ ಪ್ರತಿಮೆ ರಚನೆ: ಪ್ರವೀಣ್‌ ದಾಖಲೆ
ನಿಟ್ಟೆ ಜವಳಿ ಪಾರ್ಕ್ ಕಾಮಗಾರಿ ಕೂಡಲೇ ಆರಂಭಿಸಿ: ನೇಮಿರಾಜ ರೈ