ಕಾಲೇಜು ವಿದ್ಯಾರ್ಥಿಗಳಿಂದ ಎಸ್ ಐ ಆರ್ ಜಾಗೃತಿ ಜಾಥಾ

KannadaprabhaNewsNetwork |  
Published : Jul 03, 2026, 02:45 AM IST
 | Kannada Prabha

ಸಾರಾಂಶ

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಸಾರ್ವಜನಿಕರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್ 2026) ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

ವಿರಾಜಪೇಟೆ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಸಾರ್ವಜನಿಕರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್ 2026) ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಜಾಗೃತಿ ಜಾಥಾಕ್ಕೆ ಕಾಲೇಜಿನ ಪ್ರಾಂಶುಪಾಲರಾದ ರೈಮಂಡ್ ಎಸ್.ಪಿ. ಅವರು ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಪ್ರತಿಯೊಬ್ಬ ಅರ್ಹ ಮತದಾರ ಪಟ್ಟಿಯಲ್ಲಿ ತನ್ನ ಹೆಸರನ್ನು ನೋಂದಾಯಿಸಿಕೊಳ್ಳುವುದು ಹಾಗೂ ವಿವರಗಳನ್ನು ಪರಿಶೀಲಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಸಂಯೋಜಕರು ಹಾಗೂ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಪವಿತ್ರ ಅವರು ಎಸ್ ಐಆರ್ ನ ಉದ್ದೇಶಗಳು, ಮತದಾರನು ಪಾಲ್ಗೊಳ್ಳುವ ಹಂತಗಳು ಹಾಗೂ ಮತದಾನದ ಮಹತ್ವದ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುತ್ತಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಡಗಿನಾದ್ಯಂತ ಬಿರುಸು ಪಡೆದ ಮಳೆ
ಮಾದಕ ವಸ್ತು ವಿರೋಧಿ ದಿನ ಆಚರಣೆ