ಕುಕನೂರು: ಮತದಾರರ ನಿಖರ ಹಾಗೂ ಸಮರ್ಪಕ ಮಾಹಿತಿ ಅಳವಡಿಕೆಗೆ ಎಸ್‌ಐಆರ್ ಪ್ರಕ್ರೀಯೆ ಅವಶ್ಯಕವಾಗಿದೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು.
ತಾಲೂಕಿನ ಮಸಬಹಂಚಿನಾಳ ಗ್ರಾಮದಲ್ಲಿ ಎಸ್ಐಆರ್ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ಅಭಿಯಾನದ ಅಂಗವಾಗಿ ಮನೆ-ಮನೆಗೆ ಭೇಟಿ ನೀಡಿ ಮತದಾರರ ನೋಂದಣಿ ಹಾಗೂ ಜಾಗೃತಿ ಕಾರ್ಯದಲ್ಲಿ ಮಾತನಾಡಿದ ಅವರು, ಸ್ವಚ್ಛ ಪ್ರಜಾಪ್ರಭುತ್ವಕ್ಕೆ ಮತದಾನವೇ ಹೆಗ್ಗುರುತು. ಪ್ರತಿಯೊಬ್ಬ ಮತದಾರರು ತಮ್ಮ ಸರಿಯಾದ ಮಾಹಿತಿ ಅಧಿಕಾರಿಗಳಿಗೆ ನೀಡಬೇಕು. ಸಮರ್ಪಕ ಹಾಗೂ ನಿಖರ ಮಾಹಿತಿ ಅಳವಡಿಕೆಯಿಂದ ಪಾರದರ್ಶಕತೆ ಸಾಧ್ಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ತನ್ನದೆ ಆದ ಮಹತ್ವ ಇದೆ. ಮತದಾನ ಎಂಬುದು ಪ್ರತಿಯೊಬ್ಬರ ಹಕ್ಕು. ಆ ಹಕ್ಕಿನ ನಿಖರತೆಗೆ ಎಸ್‌ಐಆರ್ ಪ್ರಕ್ರಿಯೆಗೆ ಸಹಾಯಕವಾಗಿದೆ ಎಂದರು.
ಬೂತ್ ಮಟ್ಟದ ಅಧಿಕಾರಿಗಳು, ಬಿಎಲ್.ಎ-2 ಗಳು ಹಾಗೂ ಗ್ರಾಮಸ್ಥರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.