)
ಕನ್ನಡಪ್ರಭ ವಾರ್ತೆ ಬೆಂಗಳೂರು
ಬೆಳಗ್ಗೆ 10.30ಕ್ಕೆ ಈ ನಿಯೋಗವು ದೂರು ನೀಡಲಿದೆ. ಈ ನಿಯೋಗದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ, ವಿಧಾನಸಭೆ ಪ್ರತಿ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು ಸೇರಿ ಉಭಯ ಪಕ್ಷಗಳ ಇತರ ನಾಯಕರು ಇರಲಿದ್ದಾರೆ.
ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆಯ ಲೋಪಗಳ ಬಗ್ಗೆ ಈಗಾಗಲೇ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ನಿಂದ ಪ್ರತ್ಯೇಕವಾಗಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಲಾಗಿದೆ. ಈ ನಡುವೆ ಇದೀಗ ರಾಜ್ಯ ಎನ್‌ಡಿಎ ಮೈತ್ರಿಕೂಟ ಪ್ರಮುಖ ನಾಯಕರು ಒಟ್ಟಾಗಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಲು ತೀರ್ಮಾನಿಸಿದ್ದಾರೆ.ಎಸ್‌ಐಆರ್ ಪ್ರಕ್ರಿಯೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳು(ಬಿಎಲ್‌ಒ) ಮನೆ-ಮನೆಗೆ ತೆರಳಿ ಗಣತಿ ನಮೂನೆ ವಿತರಿಸುವ ಬದಲು ಸಮುದಾಯ ಭವನಗಳು, ಸಾರ್ವಜನಿಕ ಸ್ಥಳಗಳಲ್ಲಿ ಕುಳಿತು ಸಾಮೂಹಿಕವಾಗಿ ಗಣತಿ ನಮೂನೆ ವಿತರಿಸುತ್ತಿದ್ದಾರೆ. ಈ ಮೂಲಕ ಎಸ್‌ಐಆರ್ ಮೂಲ ಉದ್ದೇಶಕ್ಕೆ ಚ್ಯುತಿ ತಂದಿದ್ದಾರೆ ಎಂದು ದೂರಲಾಗಿದೆ.SIR ಅಕ್ರಮ ತಡೆಯಲಾಗದ ರಾಜ್ಯ ಕತ್ತೆ ಕಾಯಲೂ ಲಾಯಕ್ಕಿಲ್ಲ:
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆಯಲ್ಲಿ ಗೊಂದಲಗಳ ಬಗ್ಗೆ ದೂರು ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳ ತಂಡವು ಸೋಮವಾರ ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡುತ್ತಿದೆ. ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಅವರಿಂದ ಮಾಹಿತಿ ಸಂಗ್ರಹಿಸಲಿದೆ. ಅಂತೆಯೇ ರಾಜ್ಯದ ವಿವಿಧೆಡೆ ಸಂಚರಿಸಿ ಎಸ್‌ಐಆರ್ ಪ್ರಕ್ರಿಯೆಯನ್ನು ಖುದ್ದು ವೀಕ್ಷಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ವಿವಿಧ ರಾಜಕೀಯ ಪಕ್ಷಗಳಿಂದ ಕೇಳಿ ಬಂದಿರುವ ಆರೋಪಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಲಿದೆ. ಅಂತೆಯೆ ಸಲ್ಲಿಕೆಯಾಗಿರುವ ದೂರುಗಳ ಬಗ್ಗೆಯೂ ಕೇಂದ್ರ ಅಧಿಕಾರಿಗಳ ಈ ತಂಡವು ಸಮಾಲೋಚನೆ ನಡೆಸಲಿದೆ ಎಂದು ತಿಳಿದು ಬಂದಿದೆ.