ಎಸ್‌ಐಆರ್: ಜ್ಞಾನೇಶ್‌ಕುಮಾರ್ ರಾಜೀನಾಮೆಗೆ ದಸಂಸ ಆಗ್ರಹ

KannadaprabhaNewsNetwork |  
Published : Oct 14, 2026, 01:30 AM IST
೧೩ಕೆಎಂಎನ್‌ಡಿ-೬ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದಸಂಸ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳು ನಡೆಸುತ್ತಿರುವ ಚುನಾವಣಾ ಅಕ್ರಮಗಳನ್ನು ಭಾರತೀಯ ಚುನಾವಣಾ ಆಯೋಗ ತಡೆಯಬೇಕು. ಮುಕ್ತ ಮತ್ತು ನ್ಯಾಯ ಸಮ್ಮತ ಹಾಗೂ ಪಾರದರ್ಶಕ ಚುನಾವಣೆ ನಡೆಸಬೇಕು. ಆ ಮೂಲಕ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಎಸ್‌ಐಆರ್ ನೆಪದಲ್ಲಿ ಮತದಾನದ ಹಕ್ಕು ಕಸಿಯಲು ಕಾರಣರಾದ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಸೇರಿದ ಕಾರ್ಯಕರ್ತರು, ಚುನಾವಣಾ ಆಯೋಗದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳು ನಡೆಸುತ್ತಿರುವ ಚುನಾವಣಾ ಅಕ್ರಮಗಳನ್ನು ಭಾರತೀಯ ಚುನಾವಣಾ ಆಯೋಗ ತಡೆಯಬೇಕು. ಮುಕ್ತ ಮತ್ತು ನ್ಯಾಯ ಸಮ್ಮತ ಹಾಗೂ ಪಾರದರ್ಶಕ ಚುನಾವಣೆ ನಡೆಸಬೇಕು. ಆ ಮೂಲಕ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಬೇಕು. ಇಲ್ಲದಿದ್ದರೆ ಅಧಿಕಾರದ ಕುರ್ಚಿ ಖಾಲಿ ಮಾಡಬೇಕು ಎಂದು ಆಗ್ರಹಿಸಿದರು.

ಚುನಾವಣಾ ಆಯೋಗದ ಘನತೆ ರಕ್ಷಿಸದ ಸಿಇಸಿ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಅವರು ಪಡೆಯಬೇಕು. ಪಾರದರ್ಶಕವಾಗಿ ಚುನಾವಣೆ ನಡೆಸಲು ಆಗದ ಸ್ಥಿತಿಗೆ ತಂದಿಟ್ಟಿರುವ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ತನ್ನ ಸ್ವಾರ್ಥಕ್ಕಾಗಿ ಚುನಾವಣಾ ಆಯೋಗವನ್ನು ಬಳಸಿಕೊಂಡಿವೆ. ಸುಪ್ರೀಂಕೋರ್ಟ್ ಕೂಡ ಇದನ್ನು ತಡೆಯಲು ರಾಜಕಾರಣದಾಚೆ ಬರಬೇಕು ಎಂದು ಆಗ್ರಸಿದರು.

ಬಿಎಸ್ಪಿ ರಾಜ್ಯ ಘಟಕದ ಉಪಾಧ್ಯಕ್ಷ ವೆಂಕಟಗಿರಿಯಯ್ಯ, ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಅನಿಲ್‌ಕುಮಾರ್, ಜಿಲ್ಲಾ ಉಪಾಧ್ಯಕ್ಷ ಬಿ.ಆನಂದ್, ಮುಖಂಡರಾದ ಸಿದ್ದಯ್ಯ, ಕುಮಾರ್, ಸ್ವಾಮಿ, ನಾಗರಾಜು ಇತರರು ಪ್ರತಿಭಟನೆಯಲ್ಲಿ ಭಾಗವಸಿದ್ದರು.

ಆಸ್ಪತ್ರೆಗೆ ಬರುವ ರೋಗಿಗಳ ಬಗ್ಗೆ ನಿರ್ಲಕ್ಷ್ಯ ಖಂಡಿಸಿ ಆಡಳಿತಾಧಿಕಾರಿಗೆ ದೂರು

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಚಿಕಿತ್ಸೆಗಾಗಿ ಬರುವ ರೋಗಿಗಳನ್ನು ಬೇಜವಾಬ್ದಾರಿಯಿಂದ ಕಾಣುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಕದಂಬ ಪಡೆ ಸದಸ್ಯರು ಆಡಳಿತಾಧಿಕಾರಿ ಡಾ.ಶ್ರೀಧರ್ ಅವರಿಗೆ ದೂರು ನೀಡಿದರು.

ಕರ್ನಾಟಕ ಕದಂಬ ಪಡೆಯ ಜಿಲ್ಲಾಧ್ಯಕ್ಷ ರುಕ್ಮಾಂಗದ ನೇತೃತ್ವದಲ್ಲಿ ದೂರು ಸಲ್ಲಿಸಿದ ಸದಸ್ಯರು, ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು, ಸಿಬ್ಬಂದಿ ರೋಗಿಗಳಿಗೆ ತಕ್ಷಣ ಚಿಕಿತ್ಸೆ ನೀಡದೆ ಕಡೆಗಣನೆ ಮಾಡುತ್ತಿದ್ದಾರೆ. ಚಿಕಿತ್ಸೆಗೆಂದು ಬರುವ ರೋಗಿಗಳೊಂದಿಗೆ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವುದಾಗಿ ಆರೋಪಿಸಿದರು.ಈ ಬಗ್ಗೆ ಸ್ಥಳೀಯ ಶಾಸಕರ ಗಮನಕ್ಕೂ ತಂದು, ನಿರ್ಲಕ್ಷ್ಯತನ ತೋರುತ್ತಿರುವ ವೈದ್ಯರು ಹಾಗೂ ಸಿಬ್ಬಂದಿಗೆ ಶಾಸಕರು ಎಚ್ಚರಿಕೆ ಸಹ ನೀಡಿದ್ದಾರೆ. ಆದರೂ ಎಚ್ಚೆತ್ತುಕೊಳ್ಳದ ವೈದ್ಯ, ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು.

ಸರ್ಕಾರಿ ಆಸ್ಪತ್ರೆಗಳು ಬಡವರು ಹಾಗೂ ಸಾಮಾನ್ಯ ಜನರಿಗೆ ಆಸರೆಯಾಗಿದ್ದು, ಪ್ರತಿಯೊಬ್ಬ ರೋಗಿಗೂ ಗೌರವಯುತವಾಗಿ ವರ್ತಿಸಿ ಸೂಕ್ತ ಚಿಕಿತ್ಸೆ ನೀಡಬೇಕಿದೆ. ಕೂಡಲೇ ಆಡಳಿತಾಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.ಈ ವೇಳೆ ದೇವರಾಜು, ಅಶೋಕ್, ಅಭಿ, ಸಂದೇಶ್, ಬಾಬು, ರಾಕೇಶ್, ಕೇಶವ್, ಆಕಾಶ್, ಕಾರ್ತಿಕ್, ಸಂತೋಷ್, ನಾಗರಾಜು ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮದ್ದೂರು: ಕಬ್ಬು ಬೆಳೆಗಾರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
ಕಲಬೆರಕೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯಿಸಿ ಮನ್ಮುಲ್ ಒಕ್ಕೂಟಕ್ಕೆ ಮುತ್ತಿಗೆ