- ಜಿಲ್ಲೆಯಲ್ಲಿ ಒಟ್ಟು 14,99,282 ಮತದಾರರು । ಬಿಎಲ್ಒಗಳಿಗೆ ಅಗತ್ಯ ಎಲ್ಲ ಫಾರಂ ಮುದ್ರಿಸಿ ವಿತರಣೆ: ಡಿಸಿ ಗಂಗಾಧರ ಸ್ವಾಮಿ
ಕನ್ನಡಪ್ರಭ ವಾರ್ತೆ ದಾವಣಗೆರೆ
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್‌ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಮತಗಟ್ಟೆಗಳ ಬುತ್‌ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಜೂನ್ 30ರಿಂದಲೇ ಎನುಮೆರೇಷನ್ ಫಾರಂಗಳೊಂದಿಗೆ ಮತದಾರರ ಮನೆ ಮನೆಗೆ ಭೇಟಿ ನೀಡಲು ಪ್ರಾರಂಭಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ತಿಳಿಸಿದ್ದಾರೆ.ಈ ಮಾಹಿತಿ ಸಂಗ್ರಹ ಹಾಗೂ ಸಂಗ್ರಹಿಸಿದ ನಮೂನೆಗಳ ಗಣಕೀಕರಣ ಪ್ರಕ್ರಿಯೆಯು ಜೂನ್ 30ರಿಂದ ಜುಲೈ 29 ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ ಜೂನ್ 16 ರವರೆಗೆ ಒಟ್ಟು 14,99,282 ಮತದಾರರಿದ್ದು, ಬಿಎಲ್ಒಗಳಿಗೆ ಅಗತ್ಯವಿರುವ ಎಲ್ಲ ಫಾರಂಗಳನ್ನು ಮುದ್ರಿಸಿ ವಿತರಿಸಲಾಗಿದೆ. ಗಣತಿ ನಮೂನೆ ಡಿಜಿಟಲೀಕರಣದಲ್ಲಿ ಶೇ.56ರಷ್ಟು ಸಾಧನೆ ಮಾಡಲಾಗಿದೆ ಎಂದಿದ್ದಾರೆ.
ಜಿಲ್ಲೆಯ ಒಟ್ಟು 14,99,282 ಮತದಾರರ ಪೈಕಿ ಇಂದಿನವರೆಗೆ ಬಿಎಲ್ಒಗಳು ಒಟ್ಟು 14,99,282 ಎನುಮೆರೇಷನ್ ನಮೂನೆಗಳನ್ನು ವಿತರಿಸಿದ್ದು, ಈ ಪೈಕಿ 8,28,097 ನಮೂನೆಗಳನ್ನು ಗಣಕೀಕರಿಸಲಾಗಿದೆ.
103-ಜಗಳೂರು: ಒಟ್ಟು 2,00,836 ಮತದಾರರಿದ್ದು, ಬಿಎಲ್ಒಗಳಿಂದ ಎಲ್ಲಾ 2,00,836 ನಮೂನೆಗಳನ್ನು ವಿತರಿಸಲಾಗಿದ್ದು, 1,15,912 ನಮೂನೆಗಳನ್ನು ಗಣಕೀಕರಿಸಲಾಗಿದೆ. 105-ಹರಿಹರ: ಒಟ್ಟು 2,11,023 ಮತದಾರರಿದ್ದು, ಎಲ್ಲಾ 2,11,023 ನಮೂನೆಗಳನ್ನು ವಿತರಿಸಲಾಗಿದ್ದು, 1,41,875 ನಮೂನೆಗಳನ್ನು ಗಣಕೀಕರಿಸಲಾಗಿದೆ. 106-ದಾವಣಗೆರೆ ಉತ್ತರ: ಒಟ್ಟು 2,58,718 ಮತದಾರರಿದ್ದು, ಎಲ್ಲಾ 2,58,718 ನಮೂನೆಗಳನ್ನು ವಿತರಿಸಲಾಗಿದ್ದು, 76,613 ನಮೂನೆಗಳನ್ನು ಗಣಕೀಕರಿಸಲಾಗಿದೆ.
ಸ್ಥಳಾಂತರ, ಮರಣ, ದ್ವಿಪತಿ ಮತದಾರರ ಗುರುತಿಸುವಿಕೆ ಪ್ರಗತಿ:
ಕ್ಷೇತ್ರವಾರು ವಿವರ:
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 1681 ಪ್ರಕರಣಗಳಿದ್ದು, 51 ಸಂಗ್ರಹವಾಗದ, 437 ಶಾಶ್ವತ ವಲಸೆ, 689 ಮರಣ, 493 ದ್ವಿಪ್ರತಿ ಹಾಗೂ 11 ಇತರೆ ಪ್ರಕರಣಗಳಿವೆ. ಮಾಯಕೊಂಡ ಕ್ಷೇತ್ರದಲ್ಲಿ ಒಟ್ಟು 3578 ಪ್ರಕರಣಗಳಿದ್ದು, 76 ಸಂಗ್ರಹವಾಗದ, 1399 ಶಾಶ್ವತ ವಲಸೆ, 1558 ಮರಣ, 531 ದ್ವಿಪ್ರತಿ ಹಾಗೂ 14 ಇತರೆ ಪ್ರಕರಣಗಳಿವೆ. ಚನ್ನಗಿರಿ ಕ್ಷೇತ್ರದಲ್ಲಿ ಜಿಲ್ಲೆಯಲ್ಲೇ 2525 ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ 34 ಸಂಗ್ರಹವಾಗದ, 1211 ಶಾಶ್ವತ ವಲಸೆ, 845 ಮರಣ, 418 ದ್ವಿಪ್ರತಿ ಹಾಗೂ 17 ಇತರೆ ಪ್ರಕರಣಗಳು ಸೇರಿವೆ. ಹೊನ್ನಾಳಿ ಕ್ಷೇತ್ರದಲ್ಲಿ ಒಟ್ಟು 2863 ಪ್ರಕರಣಗಳನ್ನು ಗುರುತಿಸಲಾಗಿದ್ದು, ಇದರಲ್ಲಿ 20 ಸಂಗ್ರಹವಾಗದ, 1344 ಶಾಶ್ವತ ವಲಸೆ, 1220 ಮರಣ, 273 ದ್ವಿಪ್ರತಿ ಹಾಗೂ 06 ಇತರೆ ಪ್ರಕರಣಗಳು ಒಳಗೊಂಡಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.
-14ಕೆಡಿವಿಜಿ39: ಜಿ.ಎಂ. ಗಂಗಾಧರ ಸ್ವಾಮಿ