ಕನ್ನಡಪ್ರಭ ವಾರ್ತೆ ತುರ್ವಿಹಾಳ
ಅಭಿಯಾನದ ವೇಳೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮನೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಹೊಸ ಮತದಾರರ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ ಹಾಗೂ ಮತದಾರರ ಪಟ್ಟಿಯಲ್ಲಿರುವ ಲೋಪಗಳನ್ನು ಸರಿಪಡಿಸಿ ಕೊಳ್ಳುವ ಕುರಿತು ಅರಿವು ಮೂಡಿಸಿದರು. ಅರ್ಹ ನಾಗರಿಕರು ತಪ್ಪದೇ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ನಿಗದಿತ ಅವಧಿಯೊಳಗೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದರು.
ಪ್ರಜಾಪ್ರಭುತ್ವದ ಬಲವರ್ಧನೆಗೆ ನಿಖರವಾದ ಮತದಾರರ ಪಟ್ಟಿ ಅತ್ಯಂತ ಅಗತ್ಯವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರು ಮತಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಾರ್ಯಕರ್ತರು ತಿಳಿಸಿದರು.ಮನೆ-ಮನೆಗೆ ತೆರಳಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಮಾಹಿತಿ ನೀಡಿದರು.