ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಜಿ. ಪ್ರಭು, ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ ಜೂ. 30 ರಿಂದ ಜುಲೈ 29 ರವರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಪ್ರತಿಯೊಬ್ಬ ಮತದಾರರಿಗೆ ಗಣತಿ ನಮೂನೆಯನ್ನು ಎರಡು ಪ್ರತಿಗಳಲ್ಲಿ ವಿತರಿಸಿ, ಭರ್ತಿ ಮಾಡಿದ ನಮೂನೆಗಳನ್ನು ಮರಳಿ ಸ್ವೀಕರಿಸಲಿದ್ದಾರೆ. ಈ ಕಾರ್ಯ ಯಶಸ್ವಿಯಾಗಲು ಸಾರ್ವಜನಿಕರು ಅಗತ್ಯ ಮಾಹಿತಿ ನೀಡಿ ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.
ಪ್ರಜಾಪ್ರಭುತ್ವದ ಯಶಸ್ಸಿಗೆ ಮತದಾರರ ಪಟ್ಟಿಯು ಅತ್ಯಂತ ಮೂಲ ದಾಖಲೆ. ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ಇರಬೇಕು. ಅದೇ ರೀತಿ ಅನರ್ಹ ಅಥವಾ ನಕಲಿ ಹೆಸರು ಪಟ್ಟಿಯಲ್ಲಿ ಉಳಿಯದಂತೆ ನೋಡಿಕೊಳ್ಳುವುದು ಪ್ರಮುಖ ಉದ್ದೇಶ. ಈ ನಿಟ್ಟಿನಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಿಲ್ಲೆಯಲ್ಲಿ ಜಾರಿಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹೆಸರು ತೆಗೆದುಹಾಕುವುದು, ವಿಳಾಸ ಬದಲಾವಣೆ, ತಿದ್ದುಪಡಿ ಸೇರಿ ಅಗತ್ಯ ಬದಲಾವಣೆಗಳನ್ನು ಸಮಯಕ್ಕೆ ಸರಿಯಾಗಿ ಮಾಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ. 18 ವರ್ಷ ಪೂರೈಸಿರುವ, ಅರ್ಹತೆ ಹೊಂದಿರುವ ಯುವಜನರು ತಪ್ಪದೇ ಮತದಾರರಾಗಿ ನೋಂದಾಯಿಸಿಕೊಳ್ಳಬೇಕು. ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಪ್ರಜಾಪ್ರಭುತ್ವದ ಅಮೂಲ್ಯ ಹಕ್ಕಾಗಿದ್ದು, ಅದನ್ನು ಚಲಾಯಿಸಲು ಮತದಾರರ ಪಟ್ಟಿಯಲ್ಲಿ ಹೆಸರು ಇರಬೇಕು ಎಂದು ಅವರು ತಿಳಿಸಿದರು.ನಾಗರಿಕರ ಸಹಭಾಗಿತ್ವ: ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ, ಜಿ.ಪಂ. ಸಿಇಒ ಡಾ.ವೈ. ನವೀನ್ ಭಟ್ ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮವು ಕೇವಲ ಸರ್ಕಾರಿ ಇಲಾಖೆಯ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕರ ಸಹಭಾಗಿತ್ವದಿಂದ ಮಾತ್ರ ಈ ಅಭಿಯಾನ ಯಶಸ್ವಿಯಾಗುತ್ತದೆ. ಜಿಲ್ಲೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಹಾಗೂ ಅನರ್ಹ ಹೆಸರುಗಳು ಪಟ್ಟಿಯಲ್ಲಿ ಉಳಿಯದಂತೆ ಸಾರ್ವಜನಿಕರು ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಎಸ್ಪಿ ಕುಶಲ್ ಚೌಕ್ಸೆ, ಎಡಿಸಿ ಡಾ.ಎನ್.ಭಾಸ್ಕರ್, ಎಸಿ ಡಿ.ಹೆಚ್.ಅಶ್ವಿನ್, ಜಿಪಂ ಉಪಕಾರ್ಯದರ್ಶಿ ಅತಿಕ್ ಪಾಷಾ, ತಹಸೀಲ್ದಾರ್ ರಶ್ಮಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಜಿ.ಆರ್. ಮಂಜುನಾಥ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿ ಇದ್ದರು. ಸಿಕೆಬಿ-1 ವಿಶೇಷ ಸಮಗ್ರ ಪರಿಷ್ಕರಣೆ–2026ರ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸುವ ಉದ್ದೇಶದಿಂದ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗ ಬೃಹತ್ ಕಾಲ್ನಡಿಗೆ ಜಾಥಾಗೆ ಜಿಲ್ಲಾಧಿಕಾರಿ ಜಿ. ಪ್ರಭು ಚಾಲನೆ ನೀಡಿದರು.