ಬಂಟ್ವಾಳ: ಎಸ್‌ಐಆರ್‌ ಮಾಹಿತಿ ಸೇವಾ ಕೇಂದ್ರ ಉದ್ಘಾಟನೆ

KannadaprabhaNewsNetwork |  
Published : Jul 09, 2026, 01:30 AM IST
ಎಸ್.ಐ.ಆರ್. ಮಾಹಿತಿ ಸೇವಾ ಕೇಂದ್ರ ಉದ್ಘಾಟನೆ: ಬಿ ಎಲ್ ಎ ಗಳಿಗೆ ನೆರವಾಗಲು ಕಾಂಗ್ರೆಸ್‌ನಿಂದ ಸಹಾಯ ಕೇಂದ್ರ – ಬಿ. ರಮಾನಾಥ ರೈ | Kannada Prabha

ಸಾರಾಂಶ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್.ಐ.ಆರ್.) ಪ್ರಕ್ರಿಯೆಗೆ ಸಂಬಂಧಿಸಿದಂತೆ ಬಿ.ಎಲ್.ಎ ಗಳಿಗೆ ಅಗತ್ಯ ಮಾಹಿತಿ ಹಾಗೂ ದಾಖಲಾತಿಗಳ ಬಗ್ಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬಿ.ಸಿ.ರೋಡ್‌ನಲ್ಲಿರುವ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಎಸ್.ಐ.ಆರ್. ಮಾಹಿತಿ ಸೇವಾ ಕೇಂದ್ರವನ್ನು ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು.

ಬಂಟ್ವಾಳ: ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್.ಐ.ಆರ್.) ಪ್ರಕ್ರಿಯೆಗೆ ಸಂಬಂಧಿಸಿದಂತೆ ಬಿ.ಎಲ್.ಎ ಗಳಿಗೆ ಅಗತ್ಯ ಮಾಹಿತಿ ಹಾಗೂ ದಾಖಲಾತಿಗಳ ಬಗ್ಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬಿ.ಸಿ.ರೋಡ್‌ನಲ್ಲಿರುವ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಎಸ್.ಐ.ಆರ್. ಮಾಹಿತಿ ಸೇವಾ ಕೇಂದ್ರವನ್ನು ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು.ಈ ಸಂದರ್ಭ ಮಾತನಾಡಿದ ಅವರು, ಎಸ್.ಐ.ಆರ್. ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲಕ್ಕೆ ಅವಕಾಶ ನೀಡದೆ ಮತದಾರರಿಗೆ ಸೂಕ್ತ ಮಾಹಿತಿ ಹಾಗೂ ಅಗತ್ಯ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ ಈ ಮಾಹಿತಿ ಸೇವಾ ಕೇಂದ್ರವನ್ನು ಆರಂಭಿಸಲಾಗಿದೆ ಎಂದರು.ಈ ಮಾಹಿತಿ ಸೇವಾ ಕೇಂದ್ರದಲ್ಲಿ ಎಸ್.ಐ.ಆರ್. ಅರ್ಜಿ ಭರ್ತಿ, ಅಗತ್ಯ ದಾಖಲೆಗಳ ಕುರಿತು ಮಾಹಿತಿ, ಮತದಾರರ ಪಟ್ಟಿಗೆ ಸಂಬಂಧಿಸಿದ ಮಾರ್ಗದರ್ಶನ ಸೇರಿದಂತೆ ವಿವಿಧ ಸೇವೆಗಳು ಲಭ್ಯವಿರಲಿದೆ ಎಂದರು.ಕಾಂಗ್ರೆಸ್‌ ಪ್ರಮುಖರಾದ ಬಿ ಆರ್ ಅಂಚನ್, ಚಂದ್ರಶೇಖರ್ ಭಂಡಾರಿ, ರವೀಂದ್ರ ಕಾಂಬಲಿ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬೇಬಿ ಕುಂದರ್, ಜಯಂತಿ ಪೂಜಾರಿ, ಐಡಾ ಸುರೇಶ್, ಪದ್ಮಶೇಖರ್ ಜೈನ್, ಎಂ ಎಸ್ ಮೊಹಮ್ಮದ್, ಸಂಜೀವ ಪೂಜಾರಿ, ಅಬ್ಬಾಸ್ ಅಲಿ, ಪದ್ಮನಾಭ ರೈ, ಸುಭಾಷ್ ಕೊಲ್ನಾಡು ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾಸ್ತಿ ಮೆಚ್ಚಿದ ಮಹತ್ವದ ಕವಿ ಮಜಿಬೈಲು: ಕುಕ್ಕುವಳ್ಳಿ
ದಾಸ್ ಪ್ರಮೋಷನ್ಸ್ ನವೀಕೃತ ಕೇಂದ್ರ ಕಚೇರಿ ಉದ್ಘಾಟನೆ