ಕಾರವಾರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಚಾಲನೆ ನೀಡಲಾಯಿತು.
ಸಲ್ಲಿಕೆಯಾದ ಫಾರಂ ಆಧಾರದ ಮೇಲೆ ಕರಡು ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಇದರಲ್ಲಿ ಹೆಸರು ಇರುವುದನ್ನು ಸಾರ್ವಜನಿಕರು ಖಚಿತಪಡಿಸಿಕೊಳ್ಳಬೇಕು. ಕರಡು ಪಟ್ಟಿಯಲ್ಲಿ ಹೆಸರು ಪರಿಶೀಲಿಸಿದ ಬಳಿಕ, ಹೆಸರು ಸೇರ್ಪಡೆ ಅಥವಾ ಕೈಬಿಡುವಿಕೆ ಇದ್ದಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿರುತ್ತದೆ. ಸಾರ್ವನಿಕರ ಅನುಕೂಲಕ್ಕಾಗಿ ಜಿಲ್ಲೆಯಲ್ಲಿ ಮತದಾರರ ನೆರವು ಕೇಂದ್ರಗಳು ಹಾಗೂ ಬಿಎಲ್‌ಒ ಫೆಸಿಲಿಟೇಶನ್ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಗೊಂದಲ ಅಥವಾ ದೂರುಗಳಿದ್ದಲ್ಲಿ ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆ 1950ಕ್ಕೆ ಸಂಪರ್ಕಿಸಬಹುದು ಎಂದರು.
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ದಿನಕರ ಶೆಟ್ಟಿ, ಶಿವರಾಮ ಹೆಬ್ಬಾರ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಅವರ ನಿವಾಸಗಳಿಗೆ ಬಿಎಲ್‌ಒಗಳು ಮತ್ತು ತಹಸೀಲ್ದಾರ್ ಗಳು ತೆರಳಿ ಎನ್ಯುಮರೇಷನ್ ಫಾರಂ ಗಳನ್ನು ವಿತರಿಸಿ, ಎಸ್.ಐ.ಆರ್. ಪ್ರಕ್ರಿಯೆಗಳ ಬಗ್ಗೆ ವಿವರಿಸಿದರು. ಜಿಲ್ಲೆಯಲ್ಲಿನ ಗಣ್ಯರು, ಶತಾಯುಷಿಗಳು ಸೇರಿದಂತೆ ಪ್ರತಿಯೊಬ್ಬ ಮತದಾರರ ಮನೆಗಳಿಗೆ ಫಾರಂ ಗಳನ್ನು ವಿತರಿಸುವ ಕಾರ್ಯ ಆರಂಭಗೊಂಡಿತು.